ಶಿರಸಿ: ‘ರಾಜ್ಯ ಮಟ್ಟದ ಜನ ಸಂಘಟನೆಗಳ ಪರ್ಯಾಯ ಜನತಾ ಅಧಿವೇಶನ’ದಲ್ಲಿ ಶಿರಸಿ ರವೀಂದ್ರ ನಾಯ್ಕ ರಿಂದ ವಿಷಯ ಮಂಡನೆ

Source: S O News Service | By Staff Correspondent | Published on 21st September 2020, 7:40 PM | Coastal News | Don't Miss |

ಶಿರಸಿ: ರಾಜ್ಯದ ಹಲವಾರು ಜನಪರ ಸಂಘಟನೆಗಳ ಒಕ್ಕೂಟ ಆಶ್ರಯದಲ್ಲಿ ಬೆಂಗಳೂರಿನ ಪ್ರೀಡಂಪಾರ್ಕ ಆವರಣದಲ್ಲಿ ಜರಗುತ್ತಿರುವ 2 ನೇ ದಿನದ ಸಪ್ಟೆಂಬರ್ 22 ಮಂಗಳವಾರ ದಂದು ಜರಗುತ್ತಿರುವ ‘ರಾಜ್ಯ ಮಟ್ಟದ ಜನ ಸಂಘಟನೆಗಳ ಪರ್ಯಾಯ ಜನತಾ ಅಧಿವೇಶನ’ ದಲ್ಲಿ ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ಎ. ರವೀಂದ್ರ ನಾಯ್ಕ ಅರಣ್ಯ ಭೂಮಿಹಕ್ಕು ಮತ್ತು ಸಮಸ್ಯೆ ವಿಷಯದ ಮೇಲೆ ಅರಣ್ಯವಾಸಿಗಳ ಪರವಾದ ವಾದವನ್ನು ಮಂಡಿಸಲಿದ್ದಾರೆ ಎಂದು ವೇದಿಕೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯ ಸರಕಾರವು ಇಗಾಗಲೇ ರೈತ ಮತ್ತು ಕಾರ್ಮಿಕ ವಿರೋಧ ಸುಗ್ರೀವಾಜ್ಞೆಗಳ ವಿರುದ್ಧ ಐಕ್ಯ ಹೋರಾಟ ಪ್ರಾರಂಭಿಸಿದ್ದು, ಮೂಲ ಹಲವಾರು ಕಾನೂನುಗಳಿಗೆ ತಿದ್ದುಪಡಿ ತಂದು ಕಾನೂನಿನ ತತ್ವ ಸಿದ್ದಾಂತಕ್ಕೆ ವಿರೋಧವಾಗಿ ರೈತವಿರೋಧ ನೀತಿ ವ್ಯಕ್ತಪಡಿಸುತ್ತಿರುವ ಹಿನ್ನೆಲೇಯಲ್ಲಿ ವಿಧಾನ ಸಭೆಯಲ್ಲಿ ಜನಪ್ರತಿನಿಧಿಗಳು ವಿಧಾನಸಭಾ ಅಧಿವೇಶನದಲ್ಲಿ ಸಮರ್ಪಕವಾಗಿ ರೈತಪರ ಚಿಂತನೆ ವ್ಯಕ್ತಪಡಿಸದ ಹಿನ್ನೇಲೆಯಲ್ಲಿ ಐತಿಹಾಸಿಕ ಫ್ರೀಡಂಪಾರ್ಕನಲ್ಲಿ ಜನಸಾಮಾನ್ಯರ ಮುಂದೆ ಜನತಾ ಅಧಿವೇಶನವನ್ನ ಸರಕಾರಕ್ಕೆ ಪರ್ಯಾಯವಾಗಿ ಮತ್ತು ರೈತರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸದ್ರಿ ಕಾರ್ಯಕ್ರಮವನ್ನ ಸಂಘಟಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರಣ್ಯ ಭೂಮಿ ಹಕ್ಕು ಮತ್ತು ಸಮಸ್ಯೆ ವೀಷಯದ ಮೆಲೆ ಜರುಗಲಿರುವ ಜನತಾ ಅಧಿವೇಶನದಲ್ಲಿ ಅರಣ್ಯ ವಾಸಿಗಳ ಭೂಮಿ ಹಕ್ಕು, ವಸತಿ ಸಮಸ್ಯೆ, ಅರಣ್ಯ ವಾಸಿಗಳ ಸಂಪ್ರದಾಯ ಬದ್ಧ ಮತ್ತು ಸಾಗುವಳಿ, ಕಾನೂನು ವೈಫಲ್ಯ ಸಮಸ್ಯೆಗಳ ಪರಿಹಾರ ಮಾರ್ಗ ಮುಂತಾದ ಸಮಸ್ಯೆಗಳ ಕುರಿತು ರಾಜ್ಯಾಧ್ಯಂತ ಬಂದ ಸಾರ್ವಜನಿಕರ ಮುಂದೆ ಜನತಾ ಅಧಿವೇಶನದ ಪ್ರತಿನಿಧಿಗಳು ಚರ್ಚಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...