ರವೀಶ್‌ಕುಮಾರ್‌ಗೆ ಕುಲದೀಪ್ ನಯ್ಯರ್ ಪತ್ರಿಕೋದ್ಯಮ ಪ್ರಶಸ್ತಿ

Source: S O News service | By Staff Correspondent | Published on 20th March 2017, 4:17 PM | National News | Don't Miss |

ಹೊಸದಿಲ್ಲಿ: ಎನ್‌ಡಿಟಿವಿ ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ಸಂಪಾದಕ ರವೀಶ್ ಕುಮಾರ್ ಅವರು ಪ್ರಪ್ರಥಮ ಕುಲದೀಪ್ ನಯ್ಯರ್ ಪತ್ರಿಕೋದ್ಯಮ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ರವಿವಾರ ದಿಲ್ಲಿಯ ಇಂಡಿಯಾ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ಹಿರಿಯ ಪತ್ರಕರ್ತ ಕುಲದೀಪ್ ನಯ್ಯರ್ ಮತ್ತು ಗಾಂಧಿ ಶಾಂತಿ ಪ್ರತಿಷ್ಠಾನ ಜಂಟಿಯಾಗಿ ಸ್ಥಾಪಿಸಿರುವ ಈ ಪ್ರಶಸ್ತಿಯನ್ನು ತಮ್ಮ ಕಾರ್ಯಗಳಿಂದ ಸ್ವತಂತ್ರ ಚಿಂತನೆ, ಪ್ರಜಾಸತ್ತಾತ್ಮಕ ವೌಲ್ಯಗಳು ಮತ್ತು ನಾಗರಿಕ ಹಕ್ಕುಗಳನ್ನು ಉತ್ತೇಜಿಸುವ ಭಾರತೀಯ ಭಾಷಾ ಪತ್ರಕರ್ತರಿಗೆ ಪ್ರತಿ ವರ್ಷ ನೀಡಲಾಗುತ್ತದೆ.

 

ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ರವೀಶ್ ಕುಮಾರ್ ಅವರು ದೇಶದಲ್ಲಿಯ ಸದ್ಯದ ಭೀತಿ ಮತ್ತು ಬೆದರಿಕೆಯ ವಾತಾವರಣದ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದರು. ಸ್ಮಶಾನದಲ್ಲಿ ಸುಡುವುದು ಅಥವಾ ಖಬರಿಸ್ತಾನ್‌ದಲ್ಲಿ ದಫನ್ ಮಾಡುವುದು ಮಾತ್ರ ಸಾವಲ್ಲ. ಮಾತನಾಡದಂತೆ, ಬರೆಯದಂತೆ, ಕೇಳದಂತೆ ಬೆದರಿಕೆ ಯಿಂದ ಭೀತಿ ಪಡುವದೂ ಸಾವೇ ಆಗಿದೆ ಎಂದು ಅವರು ಹೇಳಿದರು.

‘ಕಾವಲುನಾಯಿ’ಗಳಂತೆ ವರ್ತಿಸುವ ಮತ್ತು ಸಾಯಂಕಾಲಗಳನ್ನು ‘ಲಾಕಪ್’ ಆಗಿ ಪರಿವರ್ತಿಸಿರುವ ಸುದ್ದಿ ವಾಹಿನಿಗಳ ನಿರೂಪಕರ ವಿರುದ್ಧವೂ ಅವರು ಎಚ್ಚರಿಕೆ ನೀಡಿದರು.

ಕುಮಾರ್ ಭಾಷಣದ ಪೂರ್ಣ ವೀಡಿಯೊ ಇಲ್ಲಿದೆ

https://youtu.be/F7BkTWo7AFg

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...