ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವ ಸುಳಿವು ನೀಡಿದ ಸಿ.ಟಿ.ರವಿ

Source: sonews | By Staff Correspondent | Published on 27th September 2020, 8:38 PM | State News |

ಬೆಂಗಳೂರು: ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ, ತಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂಬ ಸುಳಿವು ಮಾಧ್ಯಮಗಳಿಗೆ ನೀಡಿದ್ದಾರೆ. 

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ತನಗೆ ಸಿಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕರೆ ಮಾಡಿ, ಹೊಸ ಜವಾಬ್ದಾರಿ ವಹಿಸಿಕೊಳ್ಳುವ ಸಂಬಂಧ ಅಭಿಪ್ರಾಯ ಕೇಳಿದರು. ತಕ್ಷಣವೆ ಒಪ್ಪಿಗೆ ಸೂಚಿಸಿದೆ ಎಂದರು.

ರಾಷ್ಟ್ರದಲ್ಲಿ ಪಕ್ಷ ತನಗೆ ವಹಿಸಿರುವ ಜವಾಬ್ದಾರಿ ನಿರ್ವಹಿಸುತ್ತೇನೆ. ಬಿಜೆಪಿಯಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮವಿದೆ. ಆದುದರಿಂದ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧವಾಗಿದ್ದೇನೆ. ನಮ್ಮ ರಾಜ್ಯವನ್ನು ಕೇಂದ್ರೀಕೃತ ಮಾಡಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಸಿ.ಟಿ.ರವಿ ಹೇಳಿದರು.

ರೈತರು ಕೃಷಿ ವಿಧೇಯಕಗಳನ್ನು ವಿರೋಧಿಸಿ ಕರ್ನಾಟಕ ಬಂದ್ ಮಾಡುವುದು ಸರಿಯಲ್ಲ. ಅವರು ರಾಜಕೀಯವಾದ ಪ್ರಚೋದನೆಗಳಿಗೆ ಒಳಗಾಗದೆ, ಈ ವಿಧೇಯಕಗಳ ಮಹತ್ವವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ರೈತರ ಮನೆ ಬಾಗಿಲಿಗೆ ವ್ಯಾಪಾರಿಗಳು ಬರುತ್ತಾರೆ. ಅವರು ಬೆಳೆದಂತಹ ಬೆಳೆಗಳಿಗೆ ನ್ಯಾಯಯುತವಾದ ಬೆಲೆ ಸಿಗುತ್ತದೆ. ಪ್ರತಿಪಕ್ಷ ಕಾಂಗ್ರೆಸ್ 2019ರ ಲೋಕಸಭಾ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆಯನ್ನು ಪ್ರಸ್ತಾಪಿಸಿದೆ. ಆದರೆ, ಈಗ ಯಾಕೆ ವಿರೋಧ ಮಾಡುತ್ತಿದೆ ಅನ್ನೋದು ಗೊತ್ತಾಗುತ್ತಿಲ್ಲ ಎಂದು ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...