ಭಾರತದ ಜಿಡಿಪಿಯಲ್ಲಿ ದಾಖಲೆಯ ಕುಸಿತ

Source: sonews | By Staff Correspondent | Published on 31st August 2020, 10:47 PM | National News |

ಹೊಸದಿಲ್ಲಿ: ಈ ಆರ್ಥಿಕ ವರ್ಷದ ಪ್ರಥಮ ತ್ರೈಮಾಸಿಕ ಅವಧಿ (ಎಪ್ರಿಲ್‌ನಿಂದ ಜೂನ್‌ವರೆಗೆ) ಯಲ್ಲಿ ಭಾರತದ ಜಿಡಿಪಿ 23.9% ಕುಸಿತ ಕಂಡಿದ್ದು, ಇದು ಈವರೆಗಿನ ದಾಖಲೆ ಕುಸಿತವಾಗಿದೆ ಎಂದು ರಾಷ್ಟ್ರೀಯ ಸಂಖ್ಯಾಶಾಸ್ತ್ರೀಯ ಕಚೇರಿ ಯ ಅಂಕಿಅಂಶ ತಿಳಿಸಿದೆ.

1996ರಲ್ಲಿ ಭಾರತ ಜಿಡಿಪಿ (ಒಟ್ಟು ದೇಶೀಯ ಉತ್ಪನ್ನ) ತ್ರೈಮಾಸಿಕ ಅಂಕಿಅಂಶ ಪ್ರಕಟಿಸಲು ಆರಂಭಿಸಿದ ಬಳಿಕದ ಅತ್ಯಂತ ಬೃಹತ್ ಕುಸಿತ ಮತ್ತು ಏಶ್ಯಾದ ಪ್ರಮುಖ ಆರ್ಥಿಕತೆಗೆ ಹೋಲಿಸಿದರೆ ಅತ್ಯಂತ ಕೆಟ್ಟ ಫಲಿತಾಂಶ ಇದಾಗಿದೆ. ಕೊರೋನ ಸೋಂಕು ಹಾಗೂ ಲಾಕ್‌ಡೌನ್‌ನಿಂದಾಗಿ ದೇಶದ ಆರ್ಥಿಕತೆಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

2019ರ ಜೂನ್ 30ಕ್ಕೆ ಅಂತ್ಯವಾಗುವ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಅಭಿವೃದ್ಧಿ ದರ 5.2% ಮತ್ತು 2019ರ ಡಿಸೆಂಬರ್ 31ಕ್ಕೆ ಅಂತ್ಯವಾಗುವ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಅಭಿವೃದ್ಧಿ ದರ 3.1% ದಾಖಲಾಗಿತ್ತು. ಸೋಮವಾರ ಬಿಡುಗಡೆಗೊಳಿಸಿರುವ ಅಂಕಿಅಂಶ, ದೇಶದಲ್ಲಿ ಇದುವರೆಗೆ ದಾಖಲಾಗಿರುವ ಅತ್ಯಧಿಕ ಆರ್ಥಿಕ ಹಿಂಜರಿತ(ಕುಸಿತ)ದ ಪ್ರಕರಣವಾಗಿದ್ದು ಈ ವಿತ್ತ ವರ್ಷದ ದ್ವಿತೀಯ ಅವಧಿಯಲ್ಲೂ ಇದೇ ಲಕ್ಷಣ ಮುಂದುವರಿಯುವ ನಿರೀಕ್ಷೆಯಿದೆ.

ಕೊರೋನ ಸೋಂಕು ಬಿಕ್ಕಟ್ಟಿನಿಂದ ಎದುರಾಗಿರುವ ಆಘಾತದಿಂದ ಇನ್ನೂ ಪೂರ್ಣ ಪ್ರಮಾಣದಲ್ಲಿ ಚೇತರಿಕೆ ಕಾಣದಿರುವ ಆರ್ಥಿಕ ಚಟುವಟಿಕೆ ಮತ್ತು ಬೇಡಿಕೆ ಕುಸಿದಿರುವುದು ಇದಕ್ಕೆ ಕಾರಣವಾಗಿದೆ. ಸರಕಾರ ಕ್ರಮೇಣ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸಿದೆಯಾದರೂ, ಉದ್ಯಮಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸದ ಕಾರಣ , ಅಥವಾ 50% ಸಿಬ್ಬಂದಿಗಳೊಂದಿಗೆ ಕಾರ್ಯ ನಿರ್ವಹಿಸಲು ಕಾರ್ಖಾನೆಗಳು ನಿರ್ಧರಿಸಿದ್ದರಿಂದ ಬಹುತೇಕ ಕಾರ್ಮಿಕರು ಮನೆಯಲ್ಲೇ ಇರುವಂತಾಗಿದೆ. ಇದರಿಂದ ಆರ್ಥಿಕ ಚಟುವಟಿಕೆಗೆ ತೊಡಕಾಗಿದೆ. ಬ್ಲೂಮ್‌ಬರ್ಗ್ ಸುದ್ದಿಸಂಸ್ಥೆ ನಡೆಸಿದ್ದ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಆರ್ಥಿಕ ತಜ್ಞರು, ಜೂನ್‌ವರೆಗಿನ ತ್ರೈಮಾಸಿಕ ಅವಧಿಯಲ್ಲಿ 15% ದಿಂದ 25.9 % ಪ್ರಮಾಣದಲ್ಲಿ ಜಿಡಿಪಿ ಕುಸಿತವಾಗಲಿದೆ ಎಂದು ಅಂದಾಜಿಸಿದ್ದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...