ಗೃಹಜ್ಯೋತಿಗೆ ನೋಂದಣಿ ಇಂದು ಆರಂಭ; ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ

Source: Vb | By I.G. Bhatkali | Published on 18th June 2023, 6:23 AM | State News |

ಬೆಂಗಳೂರು: “ಬಾಡಿಗೆದಾರರು ಹಾಗೂ ಇತರ ಗ್ರಾಹಕರು 'ಗೃಹ ಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್‌ ಸೌಲಭ್ಯ ಪಡೆಯಲು ಆಧಾರ್ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿದರೆ ಸಾಕು” ಎಂದು ಇಂಧನ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ವಿನೋದ್‌ ಕುಮಾರ್ ಡಿ.ಎಂ. ಸ್ಪಷ್ಟಪಡಿಸಿದ್ದಾರೆ. ಗೃಹ ಜ್ಯೋತಿ ಯೋಜನೆಯನ್ನು ಕೆಲವು ಷರತ್ತುಗಳೊಂದಿಗೆ ಜುಲೈ 1ರಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ. ಈ ಯೋಜನೆಯ ನೋಂದಣಿಯನ್ನು ಜೂ.18ರಿಂದಲೇ ಆರಂಭಿಸಲಾಗುವುದು. ಈ ಯೋಜನೆ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಇಂಧನ ಇಲಾಖೆ ತಿಳಿಸಿದೆ.

'ಗೃಹಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುವ ಸಂಬಂಧ ಉಂಟಾಗಿರುವ ಗೊಂದಲಗಳಿಗೆ ಸ್ಪಷ್ಟನೆ ನೀಡಿರುವ ಇಂಧನ ಇಲಾಖೆ, ಗೃಹ ವಿದ್ಯುತ್ ಬಳಕೆದಾರರು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದರೆ ಮನೆಯ ವಿಳಾಸಕ್ಕೆ ಸಂಬಂಧಪಟ್ಟ ಆಧಾರ್ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿದರೆ ಸದರಿ ಸೌಲಭ್ಯ ಪಡೆದುಕೊಳ್ಳಬಹುದು ಎಂದು ತಿಳಿಸಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...