ನಿಯಮಿತ ವ್ಯಾಯಾಮ, ಸಮತೋಲಿತ ಆಹಾರ ಕ್ರಮದಿಂದ ಮಧುಮೇಹ ನಿಯಂತ್ರಿಣ ಸಾಧ್ಯ : ಕೆ.ಬಿ.ಶಿವಕುಮಾರ್

Source: so news | Published on 14th November 2019, 11:38 PM | State News | Don't Miss |

 

ಶಿವಮೊಗ್ಗ: ನಿಯಮಿತ ವ್ಯಾಯಾಮ, ನಡಿಗೆ ಮತ್ತು ಸಮತೋಲಿತ ಆಹಾರ ಸೇವನೆ ಕ್ರಮದಿಂದ ಮಧುಮೇಹ ಮುಂತಾದ ಕಾಯಿಲೆಗಳನ್ನು ನಿಯಂತ್ರಣ ಸಾಧ್ಯ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು.
ಅವರು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವಮಧುಮೇಹ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಪ್ರತಿಯೊಬ್ಬರೂ ಚಟುವಟಿಕೆಯುಕ್ತ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ದೇಹದ ತೂಕವನ್ನು ನಿಯಂತ್ರಿಸಿಕೊಳ್ಳುವುದರ ದುಶ್ಚಟಗಳಿಂದ ದೂರವಿರುವುದು ಹಾಗೂ ನಿಯಮಿತವಾಗಿ ವೈದ್ಯರ ಸಲಹೆ, ಚಿಕಿತ್ಸೆ ಔಷಧೋಪಚಾರ ಪಡೆಯುವುದೆ ಪರಿಹಾರ ಕ್ರಮವಾಗಿದೆ ಎಂದವರು ನುಡಿದರು.
ಅತಿಯಾದ ತೂಕ, ಚಟುವಟಿಕೆ ರಹಿತ ಜೀವನಶೈಲಿ, ಹೆಚ್ಚಿನ ಕೊಬ್ಬಿನ ಅಂಶ ಹೊಂದಿರುವುದು, ಅತಿಯಾದ ಧೂಮ್ರಪಾನ ಮತ್ತು ಮದ್ಯಪಾನ ಸೇವನೆ, ಅನುವಂಶೀಯತೆ, ಅನಾರೋಗ್ಯಕರ ಆಹಾರ ಸೇವನೆ, ಅತಿಯಾದ ಉಪ್ಪುಬಳಕೆ ಮತ್ತು ಎಣ್ಣೆಯಿಂದ ಮಾಡಿದ ಖಾದ್ಯಗಳ ಸೇವನೆ ಮಧುಮೇಹಕ್ಕೆ ಕಾರಣಗಳಾಗಿವೆ ಎಂದ ಅವರು ಅವುಗಳಿಂದ ದೂರವಿರುವುದು ಕ್ಷೇಮ ಎಂದವರು ನುಡಿದರು.
ದೇಶದಲ್ಲಿ ಮಧುಮೇಹ ಕಾಯಿಲೆಯಿಂದ 62ಮಿಲಿಯನ್ ಜನರು ಬಳಲುತ್ತಿದ್ದಾರೆ. ಪ್ರತಿ ವರ್ಷ ಒಂದು ಮಿಲಿಯನ್‍ಗಿಂತ ಹೆಚ್ಚಿನ ಜನ ಈ ಕಾಯಿಲೆಯಿಂದ ಮರಣ ಹೊಂದುತ್ತಿದ್ದಾರೆ. ಒಂದು ಅಂದಾಜಿನ ಪ್ರಕಾರ 2030ರ ವೇಳೆಗೆ 98ಮಿಲಿಯನ್ ಭಾರತೀಯರು ಈ ಕಾಯಿಲೆಯಿಂದ ಬಳಲಬಹುದು ಎಂದು ಅಂದಾಜಿಸಲಾಗಿದೆ. ಸದ್ಯದಲ್ಲಿ ಭಾರತ ದೇಶವು ವಿಶ್ವದಲ್ಲೇ ಸಕ್ಕರೆ ಕಾಯಿಲೆಯ ರಾಜಧಾನಿಯಾಗಲಿದೆ ಎಂದ ಅವರು, ದೇಶದ ಗ್ರಾಮೀಣ ಭಾಗದ ಜನರಲ್ಲಿ 5-6ರಷ್ಟು ಹಾಗೂ ನಗರಪ್ರದೇಶದಲ್ಲಿ 10-12ರಷ್ಟು ಜನ ಸಕ್ಕರೆ ಕಾಯಿಲೆಯಿಮದ ಬಳಲುತ್ತಿದ್ದಾರೆ ಎಂದವರು ನುಡಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಮಧುಮೇಹ ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗುತ್ತಿದೆ. ಬಾದಿತರು ತಪಾಸಣೆ ಮಾಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದ ಅವರು, ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿಲ್ಲದ ಸೇವೆಗಳಿಗೆ ಎ.ಬಿ.ಆರ್.ಕೆ. ಕಾರ್ಯಕ್ರಮದಡಿಯಲ್ಲಿ ನೋಂದಾಯಿತ ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಚಿಕಿತ್ಸೆ ನೀಡಲಾಗುವುದು ಅಲ್ಲದೆ ಆರೋಗ್ಯ ಇಲಾಖೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮಧುಮೇಹ ಕಾಯಿಲೆ ಕುರಿತು ಜನಜಾಗೃತಿ, ಆರೋಗ್ಯ ಶಿಕ್ಷಣ, ಅರಿವು ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ಮಾಡಲಾಗುತ್ತಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ|| ನಾಗಾಜ್ ನಾಯ್ಕ್, ಜಿಲ್ಲಾ ಎನ್.ಸಿ.ಡಿ.ಘಟಕದ ಕಾರ್ಯಕ್ರಮಾಧಿಕಾರಿ ಡಾ|| ಶಂಕರಪ್ಪ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ|| ಪರಮೇಶ್ವರ್ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಹಾಗೂ ನರ್ಸಿಂಗ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...