ನಾಳೆಯಿಂದ ಭಟ್ಕಳದಲ್ಲಿ ಷರತ್ತುಬದ್ಧ  ಲಾಕ್ ಡೌನ್ ಸಡಿಲಿಕೆ -ಎಸ್.ಪಿ

Source: sonews | By Staff Correspondent | Published on 28th May 2020, 6:16 PM | Coastal News | Don't Miss |

ಭಟ್ಕಳ ಕಂಟೇನ್ಮೆಂಟ್ ವಲಯದ ವ್ಯಾಪ್ತಿಯನ್ನು ಕಡಿಮೆಗೊಳಿಸಿದ ಜಿಲ್ಲಾಡಳಿತ
  

ಭಟ್ಕಳ: ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದಾಗಿ ಭಟ್ಕಳದಲ್ಲಿ ಮೇ5ರಂದು  18ರ ಯುವತಿಯಲ್ಲಿ ಕಾಣಿಸಿಕೊಂಡಿದ್ದ ಕೊರೋನಾ ಸೋಂಕಿನಿಂದಾಗಿ ಭಟ್ಕಳ ನಗರವನ್ನೇ ಕಂಟೇನ್ಮೆಂಟ್ ವಲಯವನ್ನಾಗಿ ಪರಿವರ್ತಿಸಿ ಸೀಲ್‍ಡೌನ್ ಮಾಡಿದ್ದ ಜಿಲ್ಲಾಡಳಿತ ಶುಕ್ರವಾರದಿಂದ ಅದರ ವ್ಯಾಪ್ತಿಯನ್ನು ಕಡಿಮೆಗೊಳಿಸಿ ಕೆಲ ಷರತ್ತುಬದ್ಧ ನಿಯಮಗಳೊಂದಿಗೆ ಲಾಕ್ ಡೌನ್ ಸಡಿಲಿಕೆಗೆ ಅವಕಾಶ ನೀಡಿದೆ.

ಈ ಕುರಿತಂತೆ  ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವಾರಾಜು ಗುರುವಾರ ಭಟ್ಕಳದ ಪ್ರವಾಸಿ ಬಂಗ್ಲೆಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. 

ನಗರದ ಮದೀನಾ ಕಾಲೋನಿ, ಗುಡ್ಲಕ್ ರೋಡ್, ಉಸ್ಮಾನಿಯ ಕಾಲೋನಿ, ಕೋಕ್ತಿನಗರ, ಸುಲ್ತಾನ್ ಸ್ರೀಟ್ ಪ್ರದೇಶ ನೂರು ಮೀಟರ್ ವ್ಯಾಪ್ತಿಯನ್ನು ಮಾತ್ರ ಕಂಟೇನ್ಮೆಂಟ್ ವಲಯ ಎಂದು ಪರಿಗಣಿಸಿ ಆ ಪ್ರದೇಶವನ್ನು ಹೊರತುಪಡಿಸಿ ಉಳಿದ ಎಲ್ಲ ಕಡೆಗಳಲ್ಲಿ ಬೆಳಿಗ್ಗೆ 8ರಿಂದ ಮದ್ಯಾಹ್ನ 2ಗಂಟೆ ವರೆಗೆ ಲಾಕ್‍ಡೌನ್ ನಲ್ಲಿ ಸಡಿಲಿಕೆ ಮಾಡುತ್ತಿದ್ದು ಮೆಡಿಕಲ್, ಪೆಟ್ರೋಲ್ ಪಂಪ್, ಗ್ಯಾರೇಜ್, ಸಲೂನ್, ಬೇಕರಿ ಸೇರಿದಂತೆ ಅಗತ್ಯ ವಸ್ತು ಪೂರೈಕೆಯ ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗುವುದು ಎಂದರು. ಅಂಗಡಿಕಾರರು ಹಾಗೂ ಗ್ರಹಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಹೋಗಬೇಕು. ಯಾವುದೇ ರೀತಿಯ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದಲ್ಲಿ ಅಂಗಡಿಗಳ ಲೈಸನ್ಸ್ ನ್ನು ರದ್ದು ಮಾಡಲಾಗುವುದು ಎಂದರು. ಜೂನ್1 ರಿಂದ 8 ರ ವರೆಗೆ ಈ ಸಡಿಲಿಕೆ ಮುಂದುವರೆಯಲಿದ್ದು ನಂತರ ಹಂತ ಹಂತವಾಗಿ ಸರ್ಕಾರದ ಮಾರ್ಗಸೂಚಿಯಂತೆ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಎಎಸ್ಪಿ ನಿಖಿಲ್ ಬಿ, ಸಹಾಯಕ ಆಯುಕ್ತ ಭರತ್ ಎಸ್, ತಹಸಿಲ್ದಾರ್ ರವಿಚಂದ್ರ ಮತ್ತಿತರರು ಉಪಸ್ಥಿತರಿದ್ದರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...