ಕಾಳಸಂತೆಯಲ್ಲಿ ರೆಮ್‍ಡಿಸಿವಿರ್ ಮಾರಾಟ:ವ್ಯಕ್ತಿ ಬಂಧನ

Source: SO News | By Laxmi Tanaya | Published on 8th May 2021, 9:10 PM | State News |

ಬಳ್ಳಾರಿ : ಬಳ್ಳಾರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ರೆಮ್‍ಡಿಸಿವಿರ್ ಲಸಿಕೆಗಳನ್ನು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಹೇಳಿದರು.

ಮಾಧ್ಯಮದವರ ಜೊತೆ ಅವರು ಮಾತನಾಡಿ, ರೆಮ್‍ಡಿಸಿವಿರ್ ಬ್ಲಾಕ್ ದಂಧೆ ನಡೆಸುತ್ತಿರುವ ಬಗ್ಗೆ ನಮಗೆ ಬಂದ ಮಾಹಿತಿ ಅನ್ವಯ ದಾಳಿ ನಡೆಸಿ ಆರು ಡೋಸ್ ರೆಮ್‍ಡಿಸಿವಿರ್ ಲಸಿಕೆ ವಶಪಡಿಸಿಕೊಳ್ಳಲಾಗಿದೆ. ರೆಮ್‍ಡಿಸಿವಿರ್ ಬ್ಲಾಕ್ ದಂಧೆ ನಡೆಸುತ್ತಿದ್ದ ಕಿಶೋರ್ ಕುಮಾರ್ ಎನ್ನುವ ವ್ಯಕ್ತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದರು.

ಪೊಲೀಸ್ ಇಲಾಖೆಯ ತಂಡದೊಂದಿಗೆ ದಾಳಿ ಮಾಡಿದಾಗ 3ರಿಂದ 4ಸಾವಿರ ಇರುವ ರೆಮ್ ಡಿಸಿವಿರ್ ಲಸಿಕೆಯ ಒಂದು ಡೋಸ್ ಲಸಿಕೆಗೆ 25ರಿಂದ 30ಸಾವಿರದಂತೆ ಮಾರಾಟ ಮಾಡುತ್ತಿದ್ದರು. ಆರು ಡೋಸ್ ಲಸಿಕೆಗೆ ಒಂದುವರೆ ಲಕ್ಷದವರೆಗೂ ಪಡೆದು ಲಸಿಕೆ ನೀಡುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿತ್ತು. ಮಾಹಿತಿ ಅನ್ವಯ ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಬಂಧಿತ ವ್ಯಕ್ತಿಯ ಹಿಂದೆ ಹಲವು ಜನರು ಇರುವ ಶಂಕೆ ಇದ್ದು ಉಳಿದವರ ಪತ್ತೆಗೆ ಮುಂದಾಗಲಾಗುತ್ತಿದೆ ಎಂದು ಎಸ್ಪಿ ಸೈದುಲು ಅಡಾವತ್ ತಿಳಿಸಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...