ಕರ್ನಾಟಕ ವಿಶ್ವವಿದ್ಯಾಲಯದ ಹಸಿರು ಉದ್ಯಾನವನದ ವರದಿ.

Source: SO News | By Laxmi Tanaya | Published on 16th January 2023, 11:05 PM | State News | Don't Miss |

ಧಾರವಾಡ : ಕಳೆದ ಮೂರು ದಿನಗಳಿಂದ ಕರ್ನಾಟಕ ವಿಶ್ವವಿದ್ಯಾಲಯದ ಹಸಿರು ಉದ್ಯಾನವನ ಯುವ ಕಲಾವಿದರ ಸಂಗಮವಾಗಿತ್ತು. 26ನೇ ರಾಷ್ಟ್ರೀಯ ಯುವಜನ ಮೇಳದಲ್ಲಿ ಇಂದು ಮಣ್ಣಿನಲ್ಲಿ ಮೇಕ್ ಇನ್ ಇಂಡಿಯಾ ಮೂಡಿಬಂದರೆ, ಚಿತ್ರಕಲೆಯಲ್ಲಿ ಭವಿಷ್ಯದ ಭಾರತ ಗೋಚರವಾಗಿತ್ತು. ಭಾರತ @ 2047 ಪರಿಕಲ್ಪನೆ ಆಧಾರದ ಮೇಲೆ ಯುವ ಚಿತ್ರಕಲಾವಿದರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. 

ಮೂರು ದಿನ ಮೂರು ಹಂತದಲ್ಲಿ ನಡೆದ ಸ್ಪರ್ಧೆಯಲ್ಲಿ ಎರಡು ದಿನ ಫ್ರಿ ಹ್ಯಾಂಡ್ ಹಾಗೂ ಒಂದು ದಿನ ಪರಿಕಲ್ಪನೆ ಆಧಾರಿತವಾಗಿ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿತ್ತು.  ಮೆಟ್ರೊ, ಬಾಹ್ಯಾಕಾಶ, ವಿಜ್ಞಾನ ಮತ್ತು ತಂತ್ರಜ್ಞಾನದ ಮುಂದುವರಿಕೆ, ವಿಶ್ವಗುರು ಭಾರತ, ಗ್ರೀನ್ ಇಂಡಿಯಾ, ಡಿಜಿಟಲ್ ಇಂಡಿಯಾದಂತಹ ಮುಂತಾದ ಪರಿಕಲ್ಪನೆಗಳು ದೃಶ್ಯಕಲೆಯ ಮೂಲಕ ಅನಾವರಣಗೊಂಡವು. ಮೇಕ್ ಇನ್ ಇಂಡಿಯಾದ ಲಾಂಛನವಾದ ಸಿಂಹ, ವಿಜ್ಞಾನ ಮತ್ತು ತಂತ್ರಜ್ಞಾನ, ಕಲೆ, ಕ್ರೀಡೆ, ಭಾರತದ ಭೂಪಟ, ಬುದ್ಧ, ನರೇಂದ್ರ ಮೋದಿ ಅವರ ಮುಖ ಮುಂತಾದವುಗಳು ಕಲಾವಿದರ ಪರಿಕಲ್ಪನೆಗಳಾಗಿ ಹೊರಹೊಮ್ಮಿದವು. ಈ ಕಲಾವಿದರು ತಮ್ಮ ಮನದಾಳದಲ್ಲಿ ಮೂಡುವ ಕಲ್ಪಣೆಗಳಿಗೆ ಜೀವತುಂಬುವ ಕಾರ್ಯದಲ್ಲಿ ಉತ್ಸುಕತೆಯಿಂದ ಮಗ್ನರಾಗಿರುವುದು ನೋಡುವವರಲ್ಲಿಯೂ ಸಹ ಉತ್ಸಾಹ ತುಂಬುವಂತಿತ್ತು. 

ವಿಶಾಲವಾದ ಹಸಿರು ಹುಲ್ಲಿನ ಹಾಸಿಗೆಯ ಮೇಲೆನಿಂತ ಕಲಾವಿದರಿಂದ ನಿಮಾ೵ಣಗ ಮಣ್ಣಿನ ಕಲಾಕೃತಿಗಳಂತೂ ನೋಡುಗರನ್ನು ತಮ್ಮತ್ತ ಕೈ ಮಾಡಿ ಕರೆಯುತ್ತಿವೆಯೇ ಎಂಬಂತೆ ಭಾಸವಾದವು. ದೇಶದ ವಿವಿಧ ರಾಜ್ಯಗಳ ವಿಶ್ವವಿದ್ಯಾಲಯಗಳಿಂದ ಆಗಮಿಸಿದ ಕಲಾವಿದರು ಈ ಸ್ಪರ್ಧೆಗಳ್ಲಲಿ ತಮ್ಮ ಕೈಚಳಕ ಪ್ರದರ್ಶಿಸಿದರು. ಮಣ್ಣಿನ ಕಲಾಕೃತಿಗಾಗಿ ಮೇಕ್ ಇನ್ ಇಂಡಿಯಾ ಪರಿಕಲ್ಪನೆ ನೀಡಲಾಗಿದ್ದು, ಕಲಾವಿದರಿಗೆ ಮೂರು ದಿನಗಳ ಸಮಯಾವಕಾಶ ನೀಡಲಾಗಿತ್ತು.

ಇನ್ನೂ ಛಾಯಾಚಿತ್ರಗಾರರಿಗೆ ಪೂರ್ತಿ ಯುವಜನೋತ್ಸವದ ಕಾರ್ಯಕ್ರಮಗಳನ್ನೇ ವಿಷಯವಾಗಿ ನೀಡಲಾಗಿತ್ತು. ಎಲ್ಲ ಛಾಯಾಗ್ರಾಹಕರು ಸ್ಪರ್ಧೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಯುವ ಕಲಾವಿದರ ಶಿಬಿರ ಕೇವಲ ಯುವಜನೋತ್ಸವದ ಸ್ಪರ್ಧಾಳುಗಳಿಗೆ ಮಾತ್ರವಲ್ಲದೇ ಇದೇ ಮೊದಲ ಬಾರಿಗೆ ಸ್ಥಳೀಯ ಕಲಾವಿದರಿಗೂ ತಮ್ಮ ಕಲಾಪ್ರತಿಭೆ ಪ್ರದರ್ಶಿಸಲು ವೇದಿಕೆ ಒದಗಿಸಿದ್ದು ವಿಶೇಷ. ಅನ್ಯ ರಾಜ್ಯಗಳ 108 ಕಲಾವಿದರು ಹಾಗೂ ಸ್ಥಳೀಯ 130ಕ್ಕೂ ಅಧಿಕ ಕಲಾವಿದರು ಚಿತ್ರಕಲೆ, ಮಣ್ಣಿನ ಕಲಾಕೃತಿ ಹಾಗೂ ಫೆÇಟೊಗ್ರಾಫಿ ಸ್ಪರ್ಧೆಯಲ್ಲಿ ಪಾಲ್ಗೊಂಡರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ಅವರು ಇಂದು ಯುವ ಕಲಾವಿದರ ಶಿಬಿರಕ್ಕೆ ಭೇಟಿ ನೀಟಿ ತಮ್ಮ ಹಸ್ತಾಕ್ಷರವನ್ನು ದಾಖಲಿಸಿದರು. ಜ15.  ಕರ್ನಾಟಕ ವಿಶ್ವವಿದ್ಯಾಲಯದ ಹಸಿರು ಉದ್ಯಾನವನದ ವರದಿ. 

ಕಳೆದ ಮೂರು ದಿನಗಳಿಂದ ಕರ್ನಾಟಕ ವಿಶ್ವವಿದ್ಯಾಲಯದ ಹಸಿರು ಉದ್ಯಾನವನ ಯುವ ಕಲಾವಿದರ ಸಂಗಮವಾಗಿತ್ತು. 26ನೇ ರಾಷ್ಟ್ರೀಯ ಯುವಜನ ಮೇಳದಲ್ಲಿ ಇಂದು ಮಣ್ಣಿನಲ್ಲಿ ಮೇಕ್ ಇನ್ ಇಂಡಿಯಾ ಮೂಡಿಬಂದರೆ, ಚಿತ್ರಕಲೆಯಲ್ಲಿ ಭವಿಷ್ಯದ ಭಾರತ ಗೋಚರವಾಗಿತ್ತು. ಭಾರತ @ 2047 ಪರಿಕಲ್ಪನೆ ಆಧಾರದ ಮೇಲೆ ಯುವ ಚಿತ್ರಕಲಾವಿದರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. 

ಮೂರು ದಿನ ಮೂರು ಹಂತದಲ್ಲಿ ನಡೆದ ಸ್ಪರ್ಧೆಯಲ್ಲಿ ಎರಡು ದಿನ ಫ್ರಿ ಹ್ಯಾಂಡ್ ಹಾಗೂ ಒಂದು ದಿನ ಪರಿಕಲ್ಪನೆ ಆಧಾರಿತವಾಗಿ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿತ್ತು.  ಮೆಟ್ರೊ, ಬಾಹ್ಯಾಕಾಶ, ವಿಜ್ಞಾನ ಮತ್ತು ತಂತ್ರಜ್ಞಾನದ ಮುಂದುವರಿಕೆ, ವಿಶ್ವಗುರು ಭಾರತ, ಗ್ರೀನ್ ಇಂಡಿಯಾ, ಡಿಜಿಟಲ್ ಇಂಡಿಯಾದಂತಹ ಮುಂತಾದ ಪರಿಕಲ್ಪನೆಗಳು ದೃಶ್ಯಕಲೆಯ ಮೂಲಕ ಅನಾವರಣಗೊಂಡವು. ಮೇಕ್ ಇನ್ ಇಂಡಿಯಾದ ಲಾಂಛನವಾದ ಸಿಂಹ, ವಿಜ್ಞಾನ ಮತ್ತು ತಂತ್ರಜ್ಞಾನ, ಕಲೆ, ಕ್ರೀಡೆ, ಭಾರತದ ಭೂಪಟ, ಬುದ್ಧ, ನರೇಂದ್ರ ಮೋದಿ ಅವರ ಮುಖ ಮುಂತಾದವುಗಳು ಕಲಾವಿದರ ಪರಿಕಲ್ಪನೆಗಳಾಗಿ ಹೊರಹೊಮ್ಮಿದವು. ಈ ಕಲಾವಿದರು ತಮ್ಮ ಮನದಾಳದಲ್ಲಿ ಮೂಡುವ ಕಲ್ಪಣೆಗಳಿಗೆ ಜೀವತುಂಬುವ ಕಾರ್ಯದಲ್ಲಿ ಉತ್ಸುಕತೆಯಿಂದ ಮಗ್ನರಾಗಿರುವುದು ನೋಡುವವರಲ್ಲಿಯೂ ಸಹ ಉತ್ಸಾಹ ತುಂಬುವಂತಿತ್ತು. 
ವಿಶಾಲವಾದ ಹಸಿರು ಹುಲ್ಲಿನ ಹಾಸಿಗೆಯ ಮೇಲೆನಿಂತ ಕಲಾವಿದರಿಂದ ನಿಮಾ೵ಣಗ ಮಣ್ಣಿನ ಕಲಾಕೃತಿಗಳಂತೂ ನೋಡುಗರನ್ನು ತಮ್ಮತ್ತ ಕೈ ಮಾಡಿ ಕರೆಯುತ್ತಿವೆಯೇ ಎಂಬಂತೆ ಭಾಸವಾದವು. ದೇಶದ ವಿವಿಧ ರಾಜ್ಯಗಳ ವಿಶ್ವವಿದ್ಯಾಲಯಗಳಿಂದ ಆಗಮಿಸಿದ ಕಲಾವಿದರು ಈ ಸ್ಪರ್ಧೆಗಳ್ಲಲಿ ತಮ್ಮ ಕೈಚಳಕ ಪ್ರದರ್ಶಿಸಿದರು. ಮಣ್ಣಿನ ಕಲಾಕೃತಿಗಾಗಿ ಮೇಕ್ ಇನ್ ಇಂಡಿಯಾ ಪರಿಕಲ್ಪನೆ ನೀಡಲಾಗಿದ್ದು, ಕಲಾವಿದರಿಗೆ ಮೂರು ದಿನಗಳ ಸಮಯಾವಕಾಶ ನೀಡಲಾಗಿತ್ತು.
ಇನ್ನೂ ಛಾಯಾಚಿತ್ರಗಾರರಿಗೆ ಪೂರ್ತಿ ಯುವಜನೋತ್ಸವದ ಕಾರ್ಯಕ್ರಮಗಳನ್ನೇ ವಿಷಯವಾಗಿ ನೀಡಲಾಗಿತ್ತು. ಎಲ್ಲ ಛಾಯಾಗ್ರಾಹಕರು ಸ್ಪರ್ಧೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಯುವ ಕಲಾವಿದರ ಶಿಬಿರ ಕೇವಲ ಯುವಜನೋತ್ಸವದ ಸ್ಪರ್ಧಾಳುಗಳಿಗೆ ಮಾತ್ರವಲ್ಲದೇ ಇದೇ ಮೊದಲ ಬಾರಿಗೆ ಸ್ಥಳೀಯ ಕಲಾವಿದರಿಗೂ ತಮ್ಮ ಕಲಾಪ್ರತಿಭೆ ಪ್ರದರ್ಶಿಸಲು ವೇದಿಕೆ ಒದಗಿಸಿದ್ದು ವಿಶೇಷ. ಅನ್ಯ ರಾಜ್ಯಗಳ 108 ಕಲಾವಿದರು ಹಾಗೂ ಸ್ಥಳೀಯ 130ಕ್ಕೂ ಅಧಿಕ ಕಲಾವಿದರು ಚಿತ್ರಕಲೆ, ಮಣ್ಣಿನ ಕಲಾಕೃತಿ ಹಾಗೂ ಫೆÇಟೊಗ್ರಾಫಿ ಸ್ಪರ್ಧೆಯಲ್ಲಿ ಪಾಲ್ಗೊಂಡರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ಅವರು ಇಂದು ಯುವ ಕಲಾವಿದರ ಶಿಬಿರಕ್ಕೆ ಭೇಟಿ ನೀಟಿ ತಮ್ಮ ಹಸ್ತಾಕ್ಷರವನ್ನು ದಾಖಲಿಸಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...