ವಿವಿಧ ಬೇಡಿಕೆ ಈಡೇರಿಸುವಂತೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕ ಸಂಘದಿಂದ ಮನವಿ

Source: sonews | By Staff Correspondent | Published on 29th October 2018, 6:33 PM | Coastal News | Don't Miss |

ಭಟ್ಕಳ: ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ರಾಜ್ಯಸಮಿತಿಯ ಕರೆಯ ಮೆರೆಗೆ ಎಐಟಿಯುಸಿ  ಉತ್ತರಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎನ್.ರೇವಣಕರ್ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ಸಹಾಯಕ ಆಯುಕ್ತರ ಮೂಲಕ ಕಾರ್ಮಿಕ ಸಚಿವರಿಗೆ ಮನವಿಯನ್ನು ಅರ್ಪಿಸಲಾಯಿತು. 

ಮನವಿಯಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಲ್ಲಿ ನೊಂದಾಯಿತ ಫಲಾನುಭವಿಗಳು ಅನುಭವಿಸುತ್ತಿರುವ ಸಮಸ್ಯೆಗಳಾದ ನೋಂದಣಿ ಮತ್ತು ಸೌಲಭ್ಯ ವಿತರಣೆಯಲ್ಲಿ ಆಗುತ್ತಿರುವ ವಿಳಂಬ, ಸಣ್ಣಪುಟ್ಟ ಲೋಪದೋಷಗಳ ನೆಪದಲ್ಲಿ ಹಲವು ಪ್ರಕರಣಗಳಲ್ಲಿ ವರ್ಷಗಟ್ಟಲೆ ವಿಳಂಬ, ಶೈಕ್ಷಣಿಕ ಸಹಾಯಧನ ಪಡೆಯಲು ಕಾಲಾವಕಾಶ ವಿಸ್ತರಣೆ, ನರೇಗಾ ಯೋಜನೆಯಡಿ ವಿಶೇಷ ನೋಮದಣಿ ಅಭಿಯಾನದಲ್ಲಿ ಕಟ್ಟಡ ಕಾರ್ಮಿಕರಲ್ಲದವರನ್ನು ನೋಂದಣಿ ಮಾಡುತ್ತಿರುವ ಬಗ್ಗೆ, ಪಿಂಚಣಿ ಮೊತ್ತ ಹೆಚ್ಚಳ, ಸದಸ್ಯತ್ವ ನವೀಕರಣ ಅವಧಿ ವಿಸ್ತರಣೆ, ಇ.ಎಸ್.ಐ ಭವಿಷ್ಯನಿ ಯೋಜನೆ ಜಾತಿ ಹಾಗೂ ಇನ್ನಿತರ ವಿಷಯಗಳ ಕುರಿತಂತೆ ಬೇಡಿಕೆಯನ್ನು ಮುಂದಿಟ್ಟುಕೊಂಡು ಮೆರವಣೆಗೆ ನಡೆಸುವುದರ ಮೂಲಕ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿ ಕೂಡಲೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಮಿಕ ಇಲಾಖೆ ಸಚಿವರಿಗೆ ಆಗ್ರಹಿಸಲಾಗಿದೆ.  

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...