ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸಲು ಜಿಲ್ಲಾಧಿಕಾರಿ ಮನವಿ

Source: so news | Published on 19th October 2019, 12:25 PM | State News | Don't Miss |

ಶಿವಮೊಗ್ಗ:ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಭರದಿಂದ ಸಾಗಿದ್ದು, ಪ್ರತಿ ಮತಗಟ್ಟೆ ಅಧಿಕಾರಿಗಳು ಮತದಾರರ ಮನೆಗೆ ತೆರಳಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಲಿದ್ದಾರೆ. ಸಾರ್ವಜನಿಕರು ಈ ಕಾರ್ಯದಲ್ಲಿ ಸಕ್ರಿಯರಾಗಿರುವ ಮತಗಟ್ಟೆ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಅವರು ಮಹಾನಗರಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮತಗಟ್ಟೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಮತಗಟ್ಟೆ ಕೇಂದ್ರಗಳಲ್ಲಿ ವರ್ಗಾವಣೆ ಮತ್ತಿತರ ಕಾರಣಗಳಿಂದ ತೆರವಾಗಿರುವ ಮತಗಟ್ಟೆ ಅಧಿಕಾರಿಗಳ ಸ್ಥಾನಕ್ಕೆ ಕೂಡಲೇ ಪರ್ಯಾಯ ಅಭ್ಯರ್ಥಿಗಳನ್ನು ನೇಮಕಗೊಳಿಸಿ, ಅವರಿಗೆ ತರಬೇತಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸಜ್ಜುಗೊಳಿಸುವಂತೆ ಅವರು ಮಹಾನಗರಪಾಲಿಕೆಯ ಆಯುಕ್ತ ಚಿದಾನಂದ ಎಸ್.ವಟಾರೆ ಅವರಿಗೆ ಸೂಚಿಸಿದರು. 
ಮತಗಟ್ಟೆಗಳ ಮೇಲ್ವಿಚಾರಕರು ಕೂಡಲೇ ಅರ್ಹರನ್ನು ನೇಮಿಸುವಲ್ಲಿ ಹಾಗೂ ಪರಿಷ್ಕರಣೆ ಕಾರ್ಯ ತ್ವರಿತವಾಗಿ ಹಾಗೂ ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸಲು ಗಮನಹರಿಸಬೇಕಲ್ಲದೇ ಕಾರ್ಯಕ್ಷೇತ್ರದಲ್ಲಿ ಕಂಡುಬರುವ ಸಮಸ್ಯೆಗಳ ಇತ್ಯರ್ಥಕ್ಕೆ ಗಮನಹರಿಸಬೇಕು. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಬಿ.ಎಲ್.ಒ.ಗಳ ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯವಹಿಸುವ ಸಿಬ್ಬಂಧಿಗಳ ಮೇಲೆ ಕ್ರಮ ಅನಿವಾರ್ಯವಾಗಲಿದೆ ಎಂದವರು ನುಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸಿದ್ದ ಮಹಾನಗರಪಾಲಿಕೆ ವ್ಯಾಪ್ತಿಗೊಳಪಡುವ ಸೋಮಿನಕೊಪ್ಪ ಸರ್ಕಾರಿ ಪ್ರಾಥಮಿಕ ಉರ್ದು ಶಾಲೆಯ ಶಿಕ್ಷಕ ಮೊಹ್ಮದ್ ಖಲೀಮ್‍ಖಾನ್ ಅವರನ್ನು ಈ ಕೂಡಲೇ ಅಮಾನತ್ತುಗೊಳಿಸುವಂತೆ ಜಿಲ್ಲಾಧಿಕಾರಿಗಳು ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.
ಮತಗಟ್ಟೆ ಅಧಿಕಾರಿಗಳು ಚುನಾವಣಾ ಆಯೋಗವು ಮತದಾರರ ಪರಿಷ್ಕರಣೆಗಾಗಿಯೇ ವಿನ್ಯಾಸಗೊಳಿಸಿರುವ ಮೊಬೈಲ್ ಆ್ಯಪ್ ಅತ್ಯಂತ ಸರಳ ಹಾಗೂ ಸುಲಭ ವಿಧಾನವಾಗಿದ್ದು, ಎಲ್ಲಾ ಮತಗಟ್ಟೆ ಅಧಿಕಾರಿಗಳು ಅದನ್ನು ಅನುಸರಿಸುವಂತೆ ಸೂಚಿಸಿದ ಅವರು, ಹೊಸದಾಗಿ ನೇಮಕವಾಗುವ ಮತಗಟ್ಟೆ ಅಧಿಕಾರಿಗಳಿಗೂ ತರಬೇತಿ ನೀಡಲಾಗುವುದೆಂದವರು ನುಡಿದರು.
ಶಿವಮೊಗ್ಗ ನಗರ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದ ಮತದಾರರ ಪರಿಷ್ಕರಣೆ ಕಾರ್ಯ ತೃಪ್ತಿಕರವಾಗಿಲ್ಲ. ಆದ್ದರಿಂದ ಎಲ್ಲ ಬಿ.ಎಲ್.ಒ.ಗಳು ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದ ಅವರು, ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸಲು, ಅನುಕ್ರಮವಾಗಿ ಪಟ್ಟಿಯನ್ನು ತಯಾರಿಸಲು ಇದು ಸದವಕಾಶವಾಗಿದ್ದು, ಮತದಾರರಲ್ಲಿ ಅರಿವು ಮೂಡಿಸಿ, ಪರಿಷ್ಕರಣೆ ಮಾಡುವಂತೆ ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ಚಿದಾನಂದ ಎಸ್.ವಟಾರೆ, ಪಾಲಿಕೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಶಿವಯೋಗಿ ಎಲಿ ಸೇರಿದಂತೆ ಪಾಲಿಕೆಯ ಅಧಿಕಾರಿ-ಸಿಬ್ಬಂಧಿಗಳು ಹಾಗೂ ಎಲ್ಲಾ ಮತಗಟ್ಟೆ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಸ್ವಾತಂತ್ರ‍್ಯ ಹೋರಾಟಗಾರ ದೊರೆಸ್ವಾಮಿಯವರನ್ನು ಪಾಕ್ ಎಜೆಂಟ್ ಎಂದು ಅವಹೇಳನಗೈದ ಶಾಸಕ ಯತ್ನಾಳ್ ವಿರುದ್ಧ ಹೆಚ್ಚಿದ ಪ್ರತಿಭಟನೆ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರನ್ನು ಪಾಕ್ ಏಜೆಂಟ್ ಎಂದು ಆಪಾದಿಸುವ ಮೂಲಕ ಉದ್ಧಟತನ ತೋರಿರುವ ...

ಶ್ರೀನಿವಾಸಪುರ ತಾಲ್ಲೂಕು ಪಂಚಾಯಿತಿಯ ಪ್ರಥಮ ದರ್ಜೆ ಸಹಾಯಕ ಮಂಜುನಾಥ್ ಸೇವೆಯಿಂದ ಅಮಾನತ್.

ಶ್ರೀನಿವಾಸಪುರ: ತಾಲ್ಲೂಕಿನಾದ್ಯಂತ ಅರಣ್ಯಭೂಮಿ ಸರ್ವೆ ನಂಬರುಗಳನ್ನು ಹಳೇ ಭೂದಾಖಲೆಗಳು ಮತ್ತು ಸರ್ವೆ ದಾಖಲೆಗಳಲ್ಲಿ ಅಕ್ರಮವಾಗಿ ...

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ ದೋರಣೆ; ಜೋಗೇಶ್ವರಹಳ್ಳ ಗ್ರಾಮದ ರಸ್ತೆ ದುರಸ್ತಿ ಕಾರ್ಯಕ್ಕೆ ಬಡಿದ ಗ್ರಹಣ

ಸುಮಾರು 3 ಕಿ.ಮಿ ದೂರವಿರುವ ಜೋಗೇಶ್ವರಹಳ್ಳದ ಗ್ರಾಮಕ್ಕೆ ಹೋಗುವ ರಸ್ತೆಗೆ ದ್ವೀಚಕ್ರ ವಾಹನ ಚಲಾಯಿಸುಕೊಂಡು  ಗ್ರಾಮ ಮುಟ್ಟುವುದು ...