ಕಾರವಾರ: ರೈತಭಾಂದವರಲ್ಲಿ ಬಿತ್ತನೆ ಬೀಜಗಳ ಕುರಿತು ಜಾಗೃತರಾಗಿಲು ಮನವಿ

Source: S.O. News service | By S O News | Published on 10th June 2021, 7:12 PM | Coastal News |

ಕಾರವಾರ: ಚೀನಾ ಮತ್ತು ಇತರ ದೇಶಗಳಿಂದ ವಿವಿಧ ಬಿತ್ತನೆ ಬೀಜಗಳನ್ನು ಬೇರೆ ಬೇರೆ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ಮಾಹಿತಿ ಹರಿದಾಡುತ್ತಿದ್ದು, ಒಂದು ವೇಳೆ ಇಂತಹ ಬಿತ್ತನೆ ಬೀಜದ ಪೊಟ್ಟಣಗಳ ಪಾರ್ಸಲ್ ಬಂದರೆ ರೈತರು ವಾಪಸ್ ಕಳುಹಿಸಬೇಕು, ಒಂದು ಪಕ್ಷ ಸ್ವೀಕರಿಸಿದರೂ ಕೂಡ ಪೊಟ್ಟಣದ ಸಮೇತ ಅದನ್ನು ಸುಟ್ಟು ಹಾಕಬೇಕು ಇಲ್ಲವೇ ಸಮೀಪದ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ಜಿಲ್ಲಾ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬೀಜಗಳು ಕೀಟ ಮತ್ತು ರೋಗಾಣುಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದರೆ ತಿಂಗಳಲ್ಲಿಯೇ ಬೆಳೆ ಸಂಪೂರ್ಣ ನಾಶವಾಗುತ್ತದೆ. ಆದುದರಿಂದ ಅನಾಮಧೇಯರಿಂದ ಯಾವುದೇ ಬೀಜ ಬಂದರೆ ರೈತರು ಸ್ವೀಕರಿಸಬಾರದು. ಈಗಾಗಲೇ ಇಂಗ್ಲೆಂಡ, ಕೆನಡಾ ದೇಶದ ಅನೇಕ ರೈತರಿಗೆ ಇಂತಹ ಬೀಜಗಳನ್ನು ಕಳುಸಲಾಗಿದೆ. ನಾನಾ ತಳಿಗಳ ಬಿತ್ತನೆ ಬೀಜದ ಈ ಪೊಟ್ಟಣಗಳನ್ನು ಯಾರು ಎಲ್ಲಿಂದ ಕಳುಹಿಸುತ್ತಾರೆ ಎಂಬ ವಿವರಗಳೇ ಇರುವುದಿಲ್ಲ. ಅಲ್ಲದೇ ಈ ಬೀಜಗಳ ಬಳಕೆಯಿಂದ ಕೃಷಿಯ ಮೇಲೆ ವ್ಯತಿರಿಕ್ತ ಪರಿಣಾಮವಾಗಲಿದೆ. ಕ್ರಮೇಣ ಭೂಮಿಯೇ ಬಂಜರಾಗುವ ಸಾಧ್ಯತೆ ಇರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಮಾಹಿತಿ ನೀಡಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...