ವಸತಿ ರಹಿತರಿಗೆ ಬರುವ ಜೂನ್ ಒಳಗೆ ಮನೆ ನಿರ್ಮಾಣ ಮಾಡದಿದ್ದಲ್ಲಿ ಸಚಿವ ಸ್ಥಾನದಲ್ಲಿರಲಾರೆ -ಸಚಿವ ಸೋಮಣ್ಣ.

Source: SO News | By Laxmi Tanaya | Published on 10th September 2020, 7:14 PM | State News | Don't Miss |

ಬೆಂಗಳೂರು: ಮುಂದಿನ ವರ್ಷ ಜೂನ್ ತಿಂಗಳಿನೊಳಗೆ ಗುಡಿಸಲಿನಲ್ಲಿರುವ ಕುಟುಂಬಗಳಿಗೆ ಮನೆಗಳನ್ನು ನಿರ್ಮಾಣ ಮಾಡದೇ ಹೋದಲ್ಲಿ ಸಚಿವ ಸ್ಥಾನ ತ್ಯಾಗ ಮಾಡೋದಾಗಿ ವಸತಿ ಸಚಿವ ಸೋಮಣ್ಣ ಅವರು ಹೇಳಿದ್ದಾರೆ. 

ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಸರ್ಕಾರಿ ಭೂಮಿ ಮಂಜೂರಾತಿ ಹಾಗೂ ಹಸ್ತಾಂತರ ಕುರಿತು ಆಗಿರುವ ಪ್ರಗತಿ ಪರಿಶೀಲನೆ ನಡೆಸಿದ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿನ ಬಡವರಿಗೆ ಮನೆ ನೀಡುವ ಒಂದು ಲಕ್ಷ ಮನೆ ನಿರ್ಮಾಣ ಯೋಜನೆಯಡಿ 43 ಸಾವಿರ ಮನೆ ನಿರ್ಮಾಣ ನಡೆಯುತ್ತಿದ್ದು, ಜೂನ್ ಒಳಗಾಗಿ 25 ಸಾವಿರ ಮನೆ ವಿತರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಒಟ್ಟಾರೆ ಮನೆ ನಿರ್ಮಾಣಕ್ಕೆ 900 ಎಕರೆ ಭೂಮಿ ದೊರೆತಿದೆ. ಕಂದಾಯ ಸಚಿವರ ಜೊತೆಗೂ ಈ ಸಂಬಂಧ ಮಾತುಕತೆ ನಡೆಸಲಾಗಿದ್ದು ಬಡವರು ಮತ್ತು ಗುಡಿಸಲಿನಲ್ಲಿ ವಾಸಿಸುತ್ತಿರುವರಿಗೆ ಮನೆ ನೀಡಲಾಗುವುದು ಎಂದಿದ್ದಾರೆ. 

ಮುಂದಿನ ಜೂನ್ ಒಳಗೆ 25 ಸಾವಿರ ಮನೆಗಳನ್ನು ನಿರ್ಮಾಣ ಮಾಡದಿದ್ದರೆ ಸಚಿವ ಸ್ಥಾನದಲ್ಲಿರಲಾರೆ. ಅಧಿಕಾರಿಗಳು ಆ ಕೆಲಸ ಮಾಡದಿದ್ದರೆ ಅದರ ಹೊಣೆ ನಾನೇ ಹೊರುತ್ತೇನೆಂದು ಹೇಳಿದ್ದಾರೆ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...