ಮಾರ್ಚ್ 24 ರಿಂದ ಮಾರ್ಚ್ 30ರವರೆಗೆ ಮೀನುಗಾರರಿಕೆಗೆ ನಿರ್ಬಂಧ

Source: sonews | By Staff Correspondent | Published on 23rd March 2020, 6:35 PM | Coastal News | Don't Miss |

ಕಾರವಾರ: ಕೋವಿಡ್-19 ವೈರಾಣುಗಳ ತಡೆಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಮಾರ್ಚ್ 24ರ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 30ರ ಮಧ್ಯರಾತ್ರಿ 12 ಗಂಟೆಯವರೆಗೆ 5 ಮತ್ತು ಅದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದು, ಓಡಾಡುವುದು ಹಾಗೂ ಇನ್ನಿತರ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇದಿಸಲಾಗಿದ್ದು, ಜಿಲ್ಲೆಯ ಮೀನುಗಾರರು ಬಂದರುಗಳಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ಮುಂದಿನ ಆದೇಶದವರೆಗೆ ಬಂದ್ ಮಾಡಬೇಕೆಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೀನು ಖರೀದಿಸುವುದು, ಮೀನು ಸಾಗಾಣಿಕೆ ಹಾಗೂ ಇನ್ನಿತರ ಮೀನುಗಾರಿಕೆ ಚಟುವಟಿಕೆಗಳು ನಡೆಯದಂತೆ ಜಿಲ್ಲಾಧಿಕಾರಿಗಳಾದ ಡಾ. ಹರೀಶ ಕುಮಾರ ಕೆ. ಅವರು ಆದೇಶ ಹೊರಡಿಸಿದ್ದು, ಒಂದು ವೇಳೆ ಆದೇಶವನ್ನು ಉಲ್ಲಂಘಿಸಿ ಮೀನುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾದವರಿಗೆ ಕಾನೂನು ಕ್ರಮ ಜರುಗಿಸಲಾಗುವುದೆಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...