ಕಾರವಾರ: ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶ ಪ್ರಕಟ

Source: S.O. News service | By JD Bhatkali | Published on 4th March 2021, 8:03 PM | Coastal News |

ಕಾರವಾರ: ಕನ್ನಡ ಸಾಹಿತ್ಯ ಪರಿಷತ್ತು 2020-21ನೇ ಸಾಲಿನಲ್ಲಿ ನಡೆಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ಪರಿಷತ್‍ನ ಗೌರವ ಕಾರ್ಯದರ್ಶಿ ಡಾ.ಪದ್ಮರಾಜ ದಂಡಾವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಫಲಿತಾಂಶದ ಪಟ್ಟಿ ಕಳುಹಿಸಲಾಗಿದ್ದು, ಕನ್ನಡ ಸಾಹಿತ್ಯ ಪರಷತ್ತಿನ ಪ್ರಕಟಣಾ ಫಲಕ ಹಾಗೂ ವೆಬ್ ಸೈಟ್ www.kasapa.in ನಲ್ಲಿ ಪ್ರಕಟಿಸಲಾಗಿದೆ. ಅಂಕಪಟ್ಟಿ ಮತ್ತು ಪ್ರಮಾಣಪತ್ರಗಳನ್ನು ಶೀಘ್ರದಲ್ಲಿಯೇ ಅಭ್ಯರ್ಥಿಗಳಿಗೆ ಕಳುಹಿಸಿಕೊಡಲಾಗುವುದು. ಅಂಕಪಟ್ಟಿಗಳು ಕಳುಹಿಸಿದ ದಿನಾಂಕದಿಂದ ಒಂದು ತಿಂಗಳೊಳಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕನ್ನಡ ಸಾಹಿತ್ಯ ಪರಿಷತ್‍ನ ಗೌರವ ಕಾರ್ಯದರ್ಶಿ ಅಥವಾ ದೂರವಾಣಿ ಸಂಖ್ಯೆ: 26623584ಗೆ ಸಂಪರ್ಕಿಸಬಹುದು ಎಂದು ಅವರು ಹೇಳಿದ್ದಾರೆ.

Read These Next

ಮಂಗಳ ಗ್ರಹದ ಆಚ್ಚಾದನೆ ವೀಕ್ಷಣೆ

ಮಂಗಳೂರು : ಖಗೋಳದ ಅಪರೂಪ ವಿದ್ಯಮಾನವಾದ ಚಂದ್ರನಿಂದ ಮಂಗಳ ಗ್ರಹದ ಆಚ್ಚಾದನೆಯನ್ನು  ಎಪ್ರಿಲ್ 17 ರಂದು ಸಂಜೆ ಪಿಲಿಕುಳ ಪ್ರಾದೇಶಿಕ ...

ಭಟ್ಕಳದಲ್ಲಿ ಉದ್ಯೋಗ ಸಂದರ್ಶನ

ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗ ಸಂದರ್ಶನವನ್ನು ಹಮ್ಮಿಕೊಳ್ಳುತ್ತಿದ್ದು, ...