ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಅವರಿಗೆ ಕಸಾಪದಿಂದ ಸನ್ಮಾನ

Source: SOnews | By Staff Correspondent | Published on 1st June 2023, 10:38 PM | Coastal News | Don't Miss |


ಭಟ್ಕಳ : ಭಟ್ಕಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸಾಹಿತ್ಯ ಪರಿಷತ್ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.

ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಕ್ಷೇತ್ರಶಿಕ್ಷಣಾಧಿಕಾರಿಗಳು ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರೂ ಹೌದು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕನ್ನಡಪರ ಕಾರ್ಯಕ್ರಮಗಳನ್ನು ಸಂಘಟಿಸುವಲ್ಲಿ ತೆರೆದ ಮನಸಿನ ಸಹಕಾರವನ್ನು ದೇವಿದಾಸ ಮೊಗೇರ ಅವರು ತಮ್ಮ ಸೇವಾ ಅವಧಿಯಲ್ಲಿ ನೀಡಿದ್ದಾರೆ. ಮಾತ್ರವಲ್ಲ ಸಾಹಿತ್ಯ ಸಮ್ಮೇಳನ ಸಂಘಟಿಸುವಲ್ಲಿಯೂ ಸಲಹೆ ಸೂಚನೆಯನ್ನಿತ್ತು ಮಾರ್ಗದರ್ಶನ ನೀಡಿದ್ದಾರೆ. ನನ್ನ ವಿದ್ಯಾಗುರುಗಳೂ ಆಗಿರುವ ದೇವಿದಾಸ ಮೊಗೇರ ಸರ್ ಅವರ ನಿವೃತ್ತ ಜೀವನ ಸದಾ ಸುಖಕರವಾಗಿರಲಿ ಎಂದು ಹಾರೈಸಿದರಲ್ಲದೇ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳ ಸಂಘಟನೆಯಲ್ಲಿ ಅವರ ಮಾರ್ಗದರ್ಶನ ಸದಾ ಇರಲಿ ಎಂದರು.

ಈ ಸಂದರ್ಭದಲ್ಲಿ ಕಸಾಪ ಗೌರವ ಕೊಶಾಧ್ಯಕ್ಷ ಶ್ರೀಧರ ಶೇಟ್, ಗೌರವ ಕಾರ್ಯದರ್ಶಿ ನಾರಾಯಣ ನಾಯ್ಕ, ಸಂಘಟನಾ ಕಾರ್ಯದರ್ಶಿ ಸಂತೋಷ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...