ಶ್ರೀನಿವಾಸಪುರ: ನಿಯಮ ಬಾಹಿರವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 6 ಅಂಗಡಿಗಳ ಮೇಲೆ ದಾಳಿ

Source: Shabbir Ahmed | By S O News | Published on 8th May 2021, 2:21 PM | State News |

ಶ್ರೀನಿವಾಸಪುರ: ನಿಯಮ ಬಾಹಿರವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 6 ಅಂಗಡಿಗಳ ಮೇಲೆ ಕಂದಾಯ ಹಾಗೂ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ಬೀಗ ಮುದ್ರೆ ಹಾಕಿದರು.

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮಾತನಾಡಿ, ಕೊರೊನಾ ಸಂಕಷ್ಟದಿಂದ ಜನರನ್ನು ಪಾರುಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ. ಜನತಾ ಕಫ್ರ್ಯೂ ನಿಯಮಗಳನ್ನು ಗಾಳಿಗೆ ತೂರಿ ವ್ಯವಹರಿಸುವ ವ್ಯಾಪಾರಿಗಳು ಹಾಗೂ ಸಾರ್ವಜನಿರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರ್ ರೆಡ್ಡಿ ಮಾತನಾಡಿ, ಕಫ್ರ್ಯೂ ಸಂದರ್ಭದಲ್ಲಿ ಸಮಯ ಪಾಲನೆ ಅತ್ಯಗತ್ಯ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ನಿಯಮ ಬಾಹಿರ. ಅಂಥ ವಸ್ತುಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗುವುದು. ಪಟ್ಟಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕೋವಿಡ್ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಹೇಳಿದರು.
  ಪುರಸಭೆ ಆರೋಗ್ಯ ನಿರೀಕ್ಷಕ ಪೃಥ್ವಿರಾಜ್ ಹಾಗೂ ಪುರಸಭೆ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...