ಸಂಸದೆ ಶೋಭಾ ಕರಂದ್ಲಾಜೆ ಅವರಿಂದ ಕೊರೋನಾ ನಿಯಂತ್ರಣ ಕ್ರಮಗಳ ಪರಿಶೀಲನೆ:

Source: so news | Published on 22nd March 2020, 12:09 AM | Coastal News | Don't Miss |

 

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಕುರಿತಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಶನಿವಾರ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಭಟ್, ಡಿಹೆಚ್ಓ ಡಾ. ಸುಧೀರ್ ಚಂಧ್ರ ಸೂಢಾ ಅವರೊಂದಿಗೆ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದ ಸಂಸದೆ ಶೋಭಾ ಕರಂದ್ಲಾಜೆ , ತುರ್ತು ಸಂದರ್ಭದಲ್ಲಿ ಕರೋನಾ ಶಂಕಿತರನ್ನು ಮತ್ತು ಪೀಡಿತರನ್ನು ದಾಖಲಿಸಲು ಸೂಕ್ತ ಸ್ಥಳಾವಕಾಶವನ್ನು ಗುರುತಿಸುವಂತೆ ಸೂಚಿಸಿದರು, ಅಲ್ಲದೇ ಮಣಿಪಾಲದ ಕೆಎಂಸಿ ಮತ್ತು ಉದ್ಯಾವರದ ಆಯುರ್ವೇದ ಕಾಲೇಜಿನಲ್ಲಿ ಅಗತ್ಯ ಕೊಠಡಿ ಸಿದ್ದಪಡಿಸಿಟ್ಟುಕೊಳ್ಳುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಇದುವರೆಗೆ ಕೊರೋನ ಶಂಕಿತರು, ಹೋ ಕ್ವಾರಂಟೈನ್ ನಲ್ಲಿದ್ದವರು ಮತ್ತು ಶಂಕಿತ ಕೊರೋನ ರೋಗಿಗಳ ವೈದ್ಯಕೀಯ ವರದಿಗಳ ಬಗ್ಗೆ ಸಂಸದರು ಪರಿಶೀಲನೆ ನೆಡೆಸಿ, ತುರ್ತು ಸಂದರ್ಭದಲ್ಲಿ ಅಗತ್ಯವಿರುವ ಎಲ್ಲಾ ಸಾಮಗ್ರಿಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ದಾಸ್ತಾನು ಇಡುವಂತೆ ಹಾಗೂ ಶೀಘ್ರದಲ್ಲಿ ಸ್ಪಂದಿಸುವಂತೆ ತಿಳಿಸಿದರು.
ನಂತರ ಉಡುಪಿಯ ಅಜ್ಜರಕಾಡು ನಲ್ಲಿ ಕೊರೋನಾ ಶಂಕಿತರ ದಾಖಲಾತಿಗೆ ಸಿದ್ದವಾಗಿಟ್ಟಿರುವ ಕೇಂದ್ರಕ್ಕೆ ಭೇಟಿ ನೀಡಿದ ಸಂಸದರು, ಕೇಂದ್ರದ ಪರಿಶೀಲನೆ ನಡೆಸಿದರು.
ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು , ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೆವ ಉಪಾಧ್ಯಾಯ ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...