ಭಟ್ಕಳದಲ್ಲಿ ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ

Source: so news | By Staff Correspondent | Published on 23rd September 2019, 12:19 AM | Coastal News | Don't Miss |

 

ಭಟ್ಕಳ: ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಾಲೂಕು ತಂಬಾಕು ತನಿಖಾ ದಳದ ವತಿಯಿಂದ ಭಟ್ಕಳದ ಶಹರ ಭಾಗದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಲಾಯಿತು. 
ನಿಯಮಬಾಹೀರವಾಗಿ ತಂಬಾಕು ಮಾರಾಟದಲ್ಲಿ ತೊಡಗಿಕೊಂಡಿದ್ದ 13 ಅಂಗಡಿಕಾರರಿಂದ 2200 ರುಪಾಯಿ ದಂಡವನ್ನು ವಸೂಲಿ ಮಾಡಲಾಯಿತು. ತಾಲೂಕು ತಂಬಾಕು ತನಿಖಾ ದಳದ ಕಾರ್ಯಾಚರಣೆಯಲ್ಲಿ ಆರೋಗ್ಯಾಧಿಕಾರಿ ಡಾ.ಮೂರ್ತಿ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಆರ್.ಮುಂಜಿ, ಎ.ಎಸ್.ಐ. ಸೋಮರಾಜ್ ರಾಠೋಡ್, ಕಂದಾಯ ನಿರೀಕ್ಷಕ ಶಂಭು, ಜಿಲ್ಲಾ ತಂಬಾಕು ನಿಯಂತ್ರಣಾ ಸಮಿತಿಯ ಸಲಹೆಗಾರ ಪ್ರೇಮ್‍ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯಾಧಿಕಾರಿ ಡಾ.ಮೂರ್ತಿ ಭಟ್, ತಂಬಾಕು ಮಾರಾಟ ಇನ್ನೂ ನಿಷೇಧ ಆಗಿಲ್ಲ. ಆದರೆ ಬಹಿರಂಗ ಮಾರಾಟಕ್ಕೆ ಮಿತಿ ಇದೆ. ನಿಯಮ ಮೀರಿದವರ ವಿರುದ್ಧ ದಂಡ ವಿಧಿಸುವುದು ಅನಿವಾರ್ಯವಾಗಿದೆ ಎಂದು ಎಚ್ಚರಿಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...