ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆ. ಇನ್ನು ಒಂದುವರೆ ವರ್ಷ ಶಿರಸಿ-ಕುಮಟಾ ರಸ್ತೆ ಬಂದ್. ಅಕ್ಟೋಬರ್ 12 ರಿಂದ 18 ತಿಂಗಳು ಬಂದ್.

Source: SO News | By Laxmi Tanaya | Published on 10th October 2020, 10:16 AM | State News | Don't Miss |

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕುಮಟಾ ರಸ್ತೆ ಮಾರ್ಗದಲ್ಲಿ ಇನ್ನು ಮುಂದೆ ಸಂಚರಿಸುವ ಪ್ಲ್ಯಾನ್ ಮಾಡಬೇಡಿ. ಯಾಕೆಂದರೆ ಇದೇ ಅಕ್ಟೋಬರ್  12 ರಿಂದ  18 ತಿಂಗಳುಗಳ‌ ಕಾಲ ರಸ್ತೆ ಸಂಪೂರ್ಣ ಸ್ಥಗಿತಗೊಳ್ಳಲಿದೆ. ಸಾಗರಮಾಲಾ ಯೋಜನೆಯಡಿಯಲ್ಲಿ ರಸ್ತೆ ಅಗಲೀಕರಣ ಕಾರ್ಯ ಪ್ರಾರಂಭವಾಗಲಿದೆ.

ನ್ಯಾಶನಲ್ ಹೈವೆ ಪ್ರಾಧಿಕಾರವೂ  ಈ ರಸ್ತೆಯನ್ನು 18 ತಿಂಗಳ ಕಾಲ ಬಂದ್ ಮಾಡಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿತ್ತು. ಬೇಲೇಕೇರಿ ಬಂದರನ್ನು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ,  ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೊಳ್ಳಲಿದೆ. ಅಂದಾಜು 370 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆಯಲಿದೆ. 

 ಕಾಮಗಾರಿ ಸಂಪೂರ್ಣವಾಗಿ ಮುಗಿಯುವ ತನಕ ರಸ್ತೆಯನ್ನು ಬಂದ್ ಮಾಡಿ, ಪರ್ಯಾಯ ರಸ್ತೆ ಮಾರ್ಗ ಸೂಚಿಸಿ ಕಾಮಗಾರಿ ನಡೆಸಲು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಆದೇಶಿಸಿದ್ದಾರೆ.

ಇಲ್ಲಿ ರಸ್ತೆ ಬಂದ್ ಆಗುವುದರಿಂದ ಪರ್ಯಾಯ ಮಾರ್ಗದ ಬಗ್ಗೆ ಜಿಲ್ಲಾಧಿಕಾರಿಗಳು  ತಿಳಿಸಿದ್ದಾರೆ. ಶಿರಸಿಯಿಂದ ಕಾರವಾರ, ಅಂಕೋಲಾ ಹೋಗುವವರಿಗೆ ಯಲ್ಲಾಪುರದ ಮೇಲೆ ಎನ್‌ಎಚ್ 63ರಲ್ಲಿ ಸಂಚರಿಸಬಹುದಾಗಿದೆ.
ಹೊನ್ನಾವರ ಭಾಗದಿಂದ ಮಾವಿನಗುಂಡಿ ಮೂಲಕ ಸಾಗಿ ಸಿದ್ದಾಪುರ ತಲುಪಿ, ಅಲ್ಲಿಂದ ಶಿರಸಿಗೆ ಹೋಗಬಹುದು. ಶಿರಸಿಯಿಂದ ಕುಮಟಾ ಹೋಗುವವರು ಸಿದ್ದಾಪುರದ ಮೇಲೆ ಬಡಾಳ್ ಮೂಲಕ ಹೋಗುವಂತೆ ಪರ್ಯಾಯ ಮಾರ್ಗವನ್ನು ಸೂಚಿಸಲಾಗಿದೆ. ಸಾರ್ವಜನಿಕರು ಬದಲಿ ಮಾರ್ಗ ಬಳಸುವಂತೆ ಉ.ಕ ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ ತಿಳಿಸಿದ್ದಾರೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...