ಮಕ್ಕಳ ಅಪೌಷ್ಠಿಕ ಮಟ್ಟ, ಗರ್ಭಿಣಿ, ಬಾಣಂತಿಯರಲ್ಲಿರುವ ರಕ್ತಹೀನತೆಯನ್ನು ತಡೆಯಲು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತಿ ಮುಖ್ಯ : ಜಹೀರಾ ನಸೀಮ್

Source: SO News | By Laxmi Tanaya | Published on 4th September 2021, 8:23 PM | State News | Don't Miss |

ಬೀದರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೀದರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಯುಷ್ ಇಲಾಖೆ, ನಗರ ಸಭೆ ಬೀದರ ಮತ್ತು ಶಿಶು ಅಭಿವೃದ್ಧಿ ಯೋಜನೆ,  ಬೀದರ ಇವರ ಸಂಯುಕ್ತಾಶ್ರಯದಲ್ಲಿ ಅಪೌಷ್ಠಿಕ ವಿರುದ್ಧ ಸಮರ ಸಾರೋಣ, ರಾಷ್ಟ್ರೀಯ  ಪೋಷಣ ಮಾಸಾಚಾರಣೆ ಸೆಪ್ಟಂಬರ.2021  ಮತ್ತು ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹ ಕಾರ್ಯಕ್ರಮವನ್ನು ಜಿಲ್ಲಾ ಬಾಲಭವನದಲ್ಲಿ   ಇತ್ತೀಚೆಗೆ  ನಡೆಯಿತು.

ಕಾರ್ಯಕ್ರಮಕ್ಕೆ ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಹೇರಾ ನಾಸಿಮ್ ಅವರು ದೀಪ ಬೆಳಗಿಸುವ ಮುಖಾಂತರ ಉದ್ಘಾಟನೆ ಮಾಡಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪೋಷಣ ಅಭಿಯಾನ ಇದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಮಕ್ಕಳ ಅಪೌಷ್ಠಿಕ ಮಟ್ಟ ಹಾಗೂ ಗರ್ಭಿಣಿ ಮತ್ತು ಬಾಣಂತಿಯಲ್ಲಿರುವ  ರಕ್ತಹೀನತೆಯನ್ನು   ತಡೆಯಲು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತಿ ಮುಖ್ಯವಾದುದ್ದು ಎಂದು ಹೇಳಿದರು.

 ಅಂಗನವಾಡಿ ಕೇಂದ್ರಗಳಲ್ಲಿ ತಾಯಂದಿರ ಸಭೆಗಳ ಮತ್ತು ಪೌಷ್ಠಿಕ ಆಹಾರ ಹಾಗೂ ಪ್ರಾತ್ಯೆಕ್ಷಿತೆ ಸಭೆಗಳ ಮುಖಾಂತರ ಮೊಳಕೆ ಬರಿಸಿದ ಕಾಳು, ಹಸಿ ಸೊಪ್ಪು, ತರಕಾರಿಗಳು, ಮೊಟ್ಟೆ ಹಾಗೂ ಹಣ್ಣುಗಳನ್ನು ಬಳಸುವುದರಿಂದ ಮಕ್ಕಳ ಆರೋಗ್ಯ ಹಾಗೂ ಗರ್ಭಿಣಿ ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ಉಂಟಾಗುವುದೆಂದರು. 

 ಮಹಾಮಾರಿ ಕೋವಿಡ-19ರ ಲಸಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತಿ ಮುಖ್ಯವಾದದ್ದು ಹಾಗೂ ಮುಂಬರುವ ಕೋರೊನಾ ಮೂರನೆ ಅಲೆಯ ಕುರಿತು ಮುನ್ನೆಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಿದರು. 
 ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಉತ್ತಮ ರೀತಿಯಲ್ಲಿ ತಮ್ಮ-ತಮ್ಮ ವಲಯಗಳಲ್ಲಿ ಬರುವ ಎಲ್ಲಾ ಕೇಂದ್ರಗಳಲ್ಲಿ ಉತ್ತಮ ರೀತಿಯಲ್ಲಿ ನಿರ್ವಹಿಸಲು ತಿಳಿಸಿದರು.

ಅದೆ ರೀತಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ರವೀಂದ್ರ ಎಸ್ ರತ್ನಾಕರ ಅವರು ಮಾತನಾಡಿ ಅಂಗನವಾಡಿ ಕೇಂದ್ರಗಳಲ್ಲಿನ ಶಿಶು ಮರಣ, ತಾಯಂದಿರ ಮರಣ, ಅಪೌಷ್ಠಿಕ ಮಕ್ಕಳ ಜನನ, ರಕ್ತಹೀನತೆ, ಮುಂತಾದ ಸಮಸ್ಯಗಳಿಗೆ ಇಂದಿನ ದಿನ ಪರಿಹಾರ ಸಿಗಬೇಕಾದರೆ ಉತ್ತಮ ಪೌಷ್ಠಿಕಯುಕ್ತ ಆಹಾರ ಸೇವನೆ ಅವಶ್ಯಕವಾಗಿದೆ. ಪ್ರತಿ ಅಂಗನವಾಡಿಯಲ್ಲಿ ಮಕ್ಕಳ ತೂಕ ಮತ್ತು ಎತ್ತರ ಮಾಡುವುದರಿಂದ ಮಕ್ಕಳ ಬೆಳವಣಿಗೆ ಪತ್ತೆ ಹಚ್ಚಬಹುದು ಎಂದು ತಿಳಿಸಿದರು. 

ಪ್ರತಿ ತಿಂಗಳು ಮೊದಲನೆ ಶುಕ್ರವಾರ ಹಾಗೂ ಮೂರನೆ ಶುಕ್ರವಾರ  ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ 06 ತಿಂಗಳ ಮಗುವಿಗೆ ಅನ್ನಪ್ರಾಶನ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಕುಟುಂಬ ಅಧಿಕಾರಿಗಳಾದ ಡಾ. ವಿ.ಜಿ.ರೆಡ್ಡಿ ಅವರು ಮಾತನಾಡಿ,  ಅಂಗನವಾಡಿ  ಕೇಂದ್ರದಲ್ಲಿನ ಮಕ್ಕಳಿಗೆ ಹಾಲು ಮತ್ತು ಮೊಟ್ಟೆ ತಿನ್ನುವುದರಿಂದ ಉತ್ತಮ ಬೆಳವಣಿಗೆಗೆ ಸಹಾಯವಾಗುವುದು. ಕೋವಿಡ್ ವಾಕ್ಸಿನ ನಲ್ಲಿ ಗರ್ಭಿಣಿ, ಬಾಣಂತಿಯರಿಗೆ, ಅಂಗವಿಕಲರಿಗೆ ಹಾಗೂ ಸಾರ್ವಜನಿಕರಿಗೆ ಲಸಿಕೆ ಕೊಡಿಸುವುದರಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಉತ್ತಮ ಸ್ಪಂದನೆ ನೀಡಿ ಯಶಸ್ವಿ ಗೊಳಿಸಿದ್ದಾರೆ ಎಂದು ಹೇಳಿದರು. 

 ಜಿಲ್ಲಾ ಆಯುಷ ಅಧಿಕಾರಿಗಳಾದ  ಶಾರದಾ ಮೇತ್ರೆ ಅವರು ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳಿಗೆ ಉತ್ತಮವಾದ ಪೌಷ್ಠಿಕ ಆಹಾರ ನೀಡಿ, ಅಪೌಷ್ಠಿಕತೆಯನ್ನು ಹೋಗಲಾಡಿಸುವುದರಲ್ಲಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಬೀದರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮಹಾಂತೇಶ ಭಂಜತ್ರಿ ರವರು ಪೋಷಣ ಅಭಿಯಾನ ಯೋಜನೆಯ ಗುರಿ ಹಾಗೂ ಉದ್ದೇಶ , ಮಕ್ಕಳಲ್ಲಿ ಉಂಟಾಗುವ ಕುಂಠಿತ ಬೆಳವಣಿಗೆಯನ್ನು ತಡೆಗಟ್ಟುವುದು. ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ಹೊಗಲಾಡಿಸುವುದು. ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೌಷ್ಠಿಕ ಆಹಾರದ ಬಗ್ಗೆ ಅರಿವು ಮೂಡಿಸುವುದು. ಮತ್ತು ಚಿಕ್ಕ ಮಕ್ಕಳಲ್ಲಿ ಉಂಟಾಗುವ ರಕ್ತಹೀನತೆಯನ್ನು ಕಡಿಮೆಗೊಳಿಸುವುದು, ಎಲ್ಲರು ತಮ್ಮ ತಮ್ಮ ಜವಾಬ್ದಾರಿ ವಹಿಸಿಕೊಂಡು ಕೆಲಸ ಕಾರ್ಯಗಳನ್ನು ಅಚ್ಚು ಕಟ್ಟಾಗಿ ಮಾಡಬೇಕೆಂದು ತಿಳಿಸಿದ್ದರು.

 ಅದೇ ರಿತಿಯಾಗಿ ಪೋಷಣ ಮಾಸಾಚಾರಣೆ ಪ್ರತಿ ವರ್ಷ ಸೆಪ್ಟೆಂಬರ ಒಂದು ತಿಂಗಳು ದಿನಾಲೂ ಬೇರೆ ಬೇರೆ ಚಟುವಟಿಕೆದೊಂದಿಗೆ ಎಲ್ಲಾ ಇಲಾಖೆ ಒಗ್ಗುಡಿ ಪೋಷಣ ಮಾಸಾಚರನೆಯನ್ನು ಯಶಸ್ವಿಯಾಗಿ ಮಾಡಬೇಕು ಎಂದು ತಿಳಿಸಿದರು.

ಸದರಿ ಉದ್ಘಾಟನೆ ಸಮಾರಂಭ ಕಾರ್ಯಕ್ರಮದಲ್ಲಿ ಬೀದರ ತಾಲೂಕಿನ ಎಲ್ಲಾ ಮೆಲ್ವೀಚಾರಕಿಯರು, ಮಾತೃವಂದನ ಜಿಲ್ಲಾ ಸಂಯೋಜಕರು, ಪೋಷಣ  ಅಭಿಯಾನದ ಜಿಲ್ಲಾ ಹಾಗೂ ತಾಲೂಕಿನ ಸಿಬ್ಬಂದಿ ವರ್ಗದವರು, ಹಾಗೂ ಅಂಗನವಾಡಿ ಕಾರ್ಯಕರ್ತೆಯರ, ಅಂಗನವಾಡಿ ಸಹಾಯಕಿಯರು, ಹಾಗೂ ಫಲಾನುಭವಿಗಳು ಭಾಗವಹಿಸಿದರು.

Read These Next

ಬೆಂಗಳೂರು: 2021ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ - ಸಚಿವ ಬಿ. ಶ್ರೀರಾಮುಲು

2021ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆರು ಜನ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ...

ಬೆಂಗಳೂರು: ಅಕ್ಟೋಬರ್ 24ರಿಂದ ಒಂದು ವಾರಗಳ ಕಾಲ ‘ಕನ್ನಡಕ್ಕಾಗಿ ನಾವು’ ಅಭಿಯಾನ - ಸಚಿವ ಸುನೀಲ್ ಕುಮಾರ್

ರಾಜ್ಯಾದಾದ್ಯಂತ 66ನೆ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ. ಎಂದಿನಂತೆ ನವೆಂಬರ್ ಒಂದರಂದು ಮಾತ್ರ ...

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ನ್ಯಾಮತಿ ತಾಲ್ಲೂಕು ಸುರಹೊನ್ನೆಯಲ್ಲಿ ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ- ಗ್ರಾಮವಾಸ್ತವ್ಯಕ್ಕೆ ಚಾಲನೆ

ದಾವಣಗೆರೆ : ಕೊರೊನಾ ಕಾರಣ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ...

ಬಾಗಲಕೋಟೆಯಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ; ಪಾಪ್ಯುಲರ್ ಫ್ರಂಟ್ ಕಳವಳ

ಬಾಗಲಕೋಟೆಯ ಜಿಲ್ಲೆಯ ಇಳಕಲ್ ನಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಸಂಘಪರಿವಾರದ ಹಿನ್ನೆಲೆಯ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ...

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...