ಬಿಜೆಪಿಯಲ್ಲಿ 'ರೌಡಿ ಮೋರ್ಚಾ' ಎಂಬ ಹೊಸ ಘಟಕ: ಕಾಂಗ್ರೆಸ್ ಟೀಕೆ; ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶ ಇಲ್ಲ; ಕಟೀಲು ಸ್ಪಷ್ಟನೆ

Source: Vb | By I.G. Bhatkali | Published on 30th November 2022, 1:12 PM | State News |

ಬೆಂಗಳೂರು: ಶೇ.40ರಷ್ಟು ಕಮಿಷನ್ ವಸೂಲಿ ಸಾಲದೆ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡು ಹಫ್ತಾ ವಸೂಲಿಗೂ ಬಿಜೆಪಿ ತಯಾರಿ ನಡೆಸಿರುವಂತಿದೆ. ಬಿಜೆಪಿಯಲ್ಲಿ 'ರೌಡಿ ಮೋರ್ಚಾ' ಎಂಬ ಹೊಸ ಘಟಕ ತೆರೆಯುವ ಲಕ್ಷಣವಿದೆ. ಸೋಲುವ ಭಯದಲ್ಲಿರುವ ಬಿಜೆಪಿ ರಾಡಿಗಳನ್ನು ಬಳಸಿ ಚುನಾವಣೆಗೆ ಸಿದ್ಧತೆ ನಡೆಸಿದೆಯೇ ಬಸವರಾಜ ಬೊಮ್ಮಾಯಿ ಅವರೇ? ಇದೇನಾ ಬಿಜೆಪಿಯ ಸಂಸ್ಕೃತಿ, ಸಂಸ್ಕಾರ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಮಂಗಳವಾರ ಸರಣಿ ಟ್ವಿಟ್ ಮಾಡಿರುವ ಕಾಂಗ್ರೆಸ್, ಗಡಿಪಾರಾಗಿದ್ದ ಕ್ರಿಮಿನಲ್‌ನನ್ನು ಪಕ್ಷದ ಅಧ್ಯಕ್ಷನನ್ನಾಗಿ ಮಾಡಿದ್ದ ಬಿಜೆಪಿಗೆ ರೌಡಿಗಳು, ಕ್ರಿಮಿನಲ್‌ಗಳೇ ಆದರ್ಶ ವ್ಯಕ್ತಿಗಳು. ಪೊಲೀಸರಿಂದ ಇಂತಹ ಆತಿಥ್ಯ ಪಡೆದ ಈ ವ್ಯಕ್ತಿಗೆ ರಾಜಾತಿಥ್ಯ ನೀಡುತ್ತಿದೆ ಬಿಜೆಪಿ. ಪೊಲೀಸರೆದುರು ತಲೆ ತಗ್ಗಿಸಿ ನಿಲ್ಲುವವನಿಗೆ ಅದೇ ಪೊಲೀಸರಿಂದ ಸೆಲ್ಯೂಟ್ ಹೊಡೆಸಲು ಹವಣಿಸುತ್ತಿದೆ ಬಿಜೆಪಿ ಎಂದು ವಾಗ್ದಾಳಿ ನಡೆಸಿದೆ.

ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್‌ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ. ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ ಸುನೀಲ್‌ರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ.
ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಬಿಜೆಪಿ ಸರಕಾರದ ನಿಷ್ಕ್ರಿಯತೆಗೆ ಬಿಜೆಪಿ ನಾಯಕರೇ ಸರ್ಟಿಫಿಕೇಟ್ ನೀಡುತ್ತಿದ್ದಾರೆ. ನಾಲ್ಕು ವರ್ಷದಿಂದ ಕರ್ನಾಟಕದ ಅಭಿವೃದ್ಧಿ ಚಕ್ರ ನಿಂತಿದ್ದಷ್ಟೇ ಅಲ್ಲ, ಹಿಂದೆ ಚಲಿಸಿದೆ. ಬಸವರಾಜ ಬೊಮಾಯಿ ಅವರೇ, ನಿಮ್ಮ ದಮ್ಮು ತಾಕತ್ತಿಗೆ ನಿಮ್ಮವರ ಸರ್ಟಿಫಿಕೇಟ್ ಸಾಕಲ್ಲವೇ? ಹೊಗೆಯಾಡುತ್ತಿರುವ ಬಿಜೆಪಿ ವಿರುದ್ಧ ಕಿತ್ತಾಟ ಶೀಘ್ರದಲ್ಲೇ ಬೆಂಕಿಯಾಗಲಿದೆ ಎಂದು ಕಾಂಗ್ರೆಸ್ ಎಚ್ಚರಿಸಿದೆ.

ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶ ಇಲ್ಲ: ಕಟೀಲು ಸ್ಪಷ್ಟನೆ: 
ಸೈಲೆಂಟ್ ಸುನೀಲ್‌ನನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸುವುದಿಲ್ಲ. ಸುನೀಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ಕಟೀಲು ವಿವರಣೆ ಕೇಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ಪಷ್ಟನೆ ನೀಡಿದ್ದಾರೆ.

ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು. ಬಿಜೆಪಿ, ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ನಳಿನ್ ಕುಮಾರ್ ಕಟೀಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...