ರಾಜ್ಯದಲ್ಲಿ ರೌಡಿ ರಾಜಕೀಯ; ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು; ಕಾಂಗ್ರೆಸ್

Source: Vb | By I.G. Bhatkali | Published on 4th December 2022, 3:14 PM | State News |

ಬೆಂಗಳೂರು: “ಹಿಂದೆ ರೌಡಿಗಳನ್ನು ಕಂಡರೆ ಪೊಲೀಸರು ಒದ್ದು ಎಳೆದು ತರುತ್ತಿದ್ದರು, ಈಗ ಬಿಜೆಪಿಯ ರೌಡಿ ರಾಜಕೀಯ ದಿಂದಾಗಿ ಅದೇ ರೌಡಿಗಳಿಗೆ ಪೊಲೀಸರು ಸೆಲ್ಯೂಟ್ ಹೊಡೆಯು ವಂತಾಗಿದೆ. ರೌಡಿಗಳ ವಿರುದ್ಧ ಕಾರ್ಯಾಚರಣೆ ನಡೆಸುವ ಪೊಲೀಸರ ನೈತಿಕ ಧೈರ್ಯವನ್ನೇ ಬಿಜೆಪಿ ಕಿತ್ತುಕೊಂಡಿದೆ. 'ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು' ಎಂಬಂತಾಗಿದೆ" ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಶನಿವಾರ ಸರಣಿ ಟ್ವಿಟ್ ಮಾಡಿರುವ ಕಾಂಗ್ರೆಸ್, “ಸದ್ದಿಲ್ಲದೆ ಬಿಜೆಪಿಯ 'ರೌಡಿ ಮೋರ್ಚಾ' ರೂಪುಗೊಳ್ಳುತ್ತಿದೆ. ಜೈಲಿನಲ್ಲಿ ಇರಬೇಕಾದವರು ಬಿಜೆಪಿಯ ಕಚೇರಿಯಲ್ಲಿದ್ದಾರೆ. ರೌಡಿಗಳಿಗೆ ಪ್ರೋತ್ಸಾಹಿಸುವುದಿಲ್ಲ ಎಂದು ಯೂಟರ್ನ್ ಸ್ಟೇಟ್‌ಮೆಂಟ್ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರೇ, ಆನೇಕಲ್ ಪುರಸಭೆಗೆ ರೌಡಿ ಶೀಟರ್‌ನನ್ನು ನಿಮ್ಮದೇ ಸರಕಾರ ನಾಮ ನಿರ್ದೇಶನ ಮಾಡಿರುವುದೇಕೆ? ದಮ್ಮು ತಾಕತ್ತಿದ್ದರೆ ಉತ್ತರಿಸಿ” ಎಂದು ಆಗ್ರಹಿಸಿದೆ.

ಕೋಮು ರಾಜಕಾರಣ ಸಾಲದು ಎಂಬಂತೆ ರೌಡಿ ರಾಜಕೀಯ ಮಾಡಲು ಹೊರಟಿದೆ ಬಿಜೆಪಿ. ರಾಮರಾಜ್ಯದ ಹೆಸರು ಹೇಳುತ್ತಿದ್ದ ಬಿಜೆಪಿ ನಾಯಕರು ರೌಡಿರಾಜ್ಯ ಮಾಡಲು ಹೊರಟಿದ್ದಾರೆ. ಅಪ್ಪು ಎಂಬವನ ಮೇಲಿದ್ದ ರೌಡಿಶೀಟ್ ತೆಗೆಸಿ ರಾಜಕಾರಣಿಯ ಮುಖವಾಡ ತೊಡಿಸಿದ್ದೇಕೆ ಬಸವರಾಜ ಬೊಮ್ಮಾಯಿ ಅವರೇ? ಬಿಜೆಪಿ ಸೇರುವ ಎಲ್ಲ ರೌಡಿಗಳ ಕೇಸ್ ಗಳನ್ನೂ ಮನ್ನಾ ಮಾಡುವಿರಾ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಸಿಎಂ ಬಸಮಾಜ ಬೊಮ್ಮಾಯಿಯವರು ದಮ್ಮು ತಾಕತ್ತು ಇದ್ರೆ ಬನ್ನಿ ಎಂದು ರೌಡಿಸಂ ಭಾಷೆಯಲ್ಲಿ ಸವಾಲು ಹಾಕಿದ್ದರ ಹಿಂದೆ ನೈಜ ರೌಡಿಸಂ ಇದೆ ಎಂದು ಈಗ ಬೆಳಕಿಗೆ ಬರುತ್ತಿದೆ. ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ ಬಸವರಾಜ ಬೊಮ್ಮಾಯಿ ಅವರೇ? ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ, ಬೊಮ್ಮಾಯಿಯವರು ರೌಡಿಗಳಿಗೆ ಮಹಾಗುರುವಿನಂತೆ ಆಗಿದ್ದಾರೆ” ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

“ರೌಡಿಗಳನ್ನು ಬಿಜೆಪಿ ಸೇರಿಸಿಕೊಳ್ಳುವುದಿಲ್ಲ ಎನ್ನುತ್ತಿರುವ ಬಿಜೆಪಿ ನಾಯಕರು ಮತ್ತೊಂದೆಡೆ ರೌಡಿಗಳ ಪಕ್ಷ ಸೇರ್ಪಡೆ ಅಭಿಯಾನವನ್ನೇ ನಡೆಸುತ್ತಿದೆ. ಬೆತ್ತನಗೆರೆ ಶಂಕರ ಎಂಬ ರೌಡಿ ಶೀಟರ್‌ನನ್ನು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡಿದ್ದಾರೆ ಸಂಸದ ಪ್ರತಾಪ ಸಿಂಹ, ಸಚಿವ ಆರ್. ಅಶೋಕ್ ಅವರೇ, ರೌಡಿ ರಾಜ್ಯ ಕಟ್ಟಲು ಹೊರಟಿದ್ದೀರಾ? ಇದೇನಾ ನಿಮ್ಮ ಸಂಸ್ಕೃತಿ” ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...