ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಇಐಎಲ್‍ನಿಂದ ಎರಡು ಕೋಟಿ ರೂ. ದೇಣಿಗೆ

Source: sonews | By Staff Correspondent | Published on 27th March 2020, 7:56 PM | State News |

ಬೆಂಗಳೂರು :ಇಡೀ ವಿಶ್ವವನ್ನೇ ಬಾಧಿಸುತ್ತಿರುವ ಕೊರೋನಾ ವೈರಸ್ ಕೋವಿಡ್-19 ನಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ನಿಭಾಯಿಸಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಮನವಿಗೆ ಓಗೊಟ್ಟು ರಾಷ್ಟ್ರದ ಪ್ರತಿಷ್ಠಿತ ಮೂಲಭೂತ ಸೌಲಭ್ಯ ಅಭಿವೃದ್ಧಿ ಸಂಸ್ಥೆ ಮೆಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ (ಎಂ ಇ ಐ ಎಲ್ ) ಮುಖ್ಯಮಂತ್ರಿ ಪರಿಹಾರ ನಿಧಿ-ಕೋವಿದ್19ಕ್ಕೆ ಎರಡು ಕೋಟಿ ರೂಪಾಯಿ ದೇಣಿಗೆ ನೀಡಿದೆ.

ದೇಶದ ನೀರಾವರಿ, ವಿದ್ಯುತ್, ಇಂಧನ, ವೈಮಾನಿಕ ಒಳಗೊಂಡಂತೆ ಹಲವು ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ ಮೆಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ಸಂಸ್ಥೆಯು ಕರ್ನಾಟಕ ಮಾತ್ರವಲ್ಲದೆ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಒರಿಸ್ಸಾ ರಾಜ್ಯಗಳಿಗೂ ದೇಣಿಗೆ ನೀಡುವ ಮೂಲಕ ಸಹಾಯ ಹಸ್ತ ಒದಗಿಸಿರುವುದು ಗಮನಾರ್ಹ.

ರಾಜ್ಯದಲ್ಲಿ ಕೊರೊನಾ ಪೀಡಿತರ ಚಿಕಿತ್ಸೆ ಮತ್ತು ಕರೋನಾದಿಂದ ಉದ್ಭವಿಸಿರುವ ಸಂದಿಗ್ಧ ಸ್ಥಿತಿಯನ್ನು ನಿಭಾಯಿಸುತ್ತಿರುವ ರಾಜ್ಯ ಸರ್ಕಾರದ ಕರೆಗೆ ಸ್ಪಂದಿಸಿರುವ ಮೆಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ಕರ್ನಾಟಕದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಶುಕ್ರವಾರ ಎರಡು ಕೋಟಿ ರೂಪಾಯಿ ದೇಣಿಗೆಯನ್ನು ಆರ್‍ಟಿಜಿಎಸ್ ಮೂಲಕ ವರ್ಗಾಯಿಸಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...