ಆರ್‌ಟಿಐ ನಿರ್ಲಕ್ಷ. ಪಿಡಿಒಗೆ ರೂ. 10 ಸಾವಿರ ದಂಡ.

Source: SO News | By Laxmi Tanaya | Published on 14th January 2021, 7:09 AM | State News | Don't Miss |

ಶ್ರೀನಿವಾಸಪುರ : ಆರ್‌ಟಿಐ ಅರ್ಜಿಗೆ ಸಕಾಲದಲ್ಲಿ ಮಾಹಿತಿ ನೀಡದ ತಾಲೂಕಿನ ದಳಸನೂರು ಗ್ರಾಮಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಸಂತೋಷ್ ಎಂಬುವವರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ 10 ಸಾವಿರ ರೂ.ಗಳ ದಂಡ ವಿಧಿಸಿದೆ . 

ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ 14 ನೇ ಹಣಕಾಸು ಯೋಜನೆಯಡಿಯಲ್ಲಿ ಬಿಡುಗಡೆಯಾಗಿರುವ ಅನುದಾನದ ಮಾಹಿತಿಯನ್ನು ನೀಡುವಂತೆ ಶ್ರೀನಿವಾಸಪುರದ 
ಮಾಹಿತಿ ಹಕ್ಕು ಕಾರ್ಯಕರ್ತ ಶಬ್ಬೀರ್ ಅಹ್ಮದ್ ದಿನಾಂಕ 08/11/2017 ರಲ್ಲಿ ಮಾಹಿತಿ ಹಕ್ಕು ಕಾಯ್ದೆಯ ಕಲಂ 6(1)ರ ಅಡಿಯಲ್ಲಿ ಆರ್ಜಿ ಸಲ್ಲಿಸಿದ್ದರು . 
ಆದರೆ ಪಿಡಿಒ ಈ ಅರ್ಜಿಯನ್ನು ನಿರ್ಲಕ್ಷಿಸಿದ್ದರು . ಈ ಕುರಿತು ಶಬ್ಬೀರ್ ಅಹಮ್ಮದ್ ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು . ಮೇಲ್ಮನವಿ ಪ್ರಾಧಿಕಾರದ ಆದೇಶವನ್ನು ದಳಸನೂರು ಗ್ರಾಮಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ
ಸಂತೋಶ್ ಪಾಲಿಸಿರಲಿಲ್ಲ . ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಆಯೋಗವು ಪ್ರತಿವಾದಿಯು ಸತತವಾಗಿ ಆಯೋಗದ ವಿಚಾರಣೆಗಳಿಗೆ ಸೊಕ್ತವಾದ ಕಾರಣಗಳಿಲ್ಲದೆ ಗೈರುಹಾಜರಾಗಿರುತ್ತಾರೆ.
ಅರ್ಜಿದಾರರಿಗೆ ಮಾಹಿತಿ ಹಕ್ಕು ಅಧಿನಿಯಮ 2005ರ ಕಲಂ 7(1)ರನ್ವಯ ನಿಗಧಿತ ಅವಧಿಯೊಳಗೆ ಮಾಹಿತಿ ನೀಡಿರುವುದಿಲ್ಲ. 
ಆಯೋಗದ ಆದೇಶ ದಿನಾಂಕ 24/11/2020 ಮತ್ತು ದಿನಾಂಕ 11/12/2020 ರ ಕಂಡಿಕೆ 9 ರಲ್ಲಿ ನಿರ್ದೇಶಿಸಿದಂತೆ, ಕಾರಣ ಕೇಳಿ ನೊಟೀಸ್ ಗೆ ಯಾವುದೇ ಲಿಖಿತ ಸಮಜಾಯಿಷಿಯನ್ನು ನೀಡಿರುವುದಿಲ್ಲ ಮತ್ತು ಅರ್ಜಿದಾರರಿಗೆ ಮಾಹಿತಿ ನೀಡಿಲ್ಲವೆಂದು. 
ಶ್ರೀನಿವಾಸಪುರ ತಾಲೂಕಿನ ದಳಸನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿರುವ ಸಂತೋಷ್ ಗೆ ದಂಡ ವಿಧಿಸಿದೆ. 

ಸಂತೋಷ್ ರವರಿಗೆ ವಿಧಿಸಿರುವ ದಂಡದ ಮೊತ್ತವನ್ನು ಸದರಿಯವರಿಗೆ 2021 ನೇ ಸಾಲಿನ ಫೆಬ್ರುವರಿ ತಿಂಗಳಿನಲ್ಲಿ ಕೊಡಲಾಗುವ ವೇತನದಿಂದ ಒಟ್ಟು ರೂ. 10 ಸಾವಿರ ಕಡಿತಗೊಳಿಸಿ , ಸರ್ಕಾರದ ಲೆಕ್ಕ ಶೀರ್ಷಿಕೆ ಖಾತೆಗೆ ಜಮಾ ಮಾಡಿ, ಜಮಾ ಮಾಡಿದ ರಸೀದಿಯೊಂದಿಗೆ ಆಯೋಗಕ್ಕೆ ವರದಿ ಸಲ್ಲಿಸಲು ಆಯೋಗವು ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ ಪಂಚಾಯತ್ ಕೋಲಾರ ಕೋಲಾರ ಜಿಲ್ಲೆ ರವರಿಗೆ ಮಾಹಿತಿ ಹಕ್ಕು ಅಧಿನಿಯಮ 2005 ರ ಕಲಂ 19(8)(ಎ) ಅನ್ವಯ ನಿರ್ದೇಶಿಸಿದೆ .

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...