ಕೋವಿಡ್-19ರ ಲಸಿಕಾ ಮಹಾಮೇಳ ಅಭಿಯಾನಕ್ಕೆ ಚಾಲನೆ ಕೋವಿಡ್ ನಿಂದ ಮುಕ್ತರಾಗಲು ಲಸಿಕೆ ಪಡೆಯಿರಿ: ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್

Source: SO News | By Laxmi Tanaya | Published on 31st July 2021, 10:40 PM | State News | Don't Miss |

ರಾಯಚೂರು - ಕೋವಿಡ್-19ರ  ಸಾಂಕ್ರಾಮಿಕ ರೋಗದಿಂದ ಮುಕ್ತರಾಗಲು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಕೋವಿಡ್ ಲಸಿಕೆ ಪಡೆಯುವ ಮೂಲಕ ಮಹಾಮಾರಿ ಕೋವಿಡ್‌ನಿಂದ ಜಾಗೃತರಾಗಬೇಕೆಂದು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್ ಅವರು ಹೇಳಿದರು. 

ಅವರು  ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಘ,  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯರಗೇರಾ ಗ್ರಾಮ  ಪಂಚಾಯತ್  ಸಂಯುಕ್ತಾಶ್ರಯದಲ್ಲಿ  ಆಯೋಜಿಸಿದ್ದ ಕೋವಿಡ್-19ರ ಲಸಿಕಾ ಮಹಾಮೇಳ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಆಗಸ್ಟ್ ರಿಂದ ಸೆಪ್ಟೆಂಬರ್ ತಿಂಗಳಲ್ಲಿ ಕೋವಿಡ್ ಮೂರನೇ ಅಲೆ  ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಎನ್ನುವ ತಜ್ಞರ ಸಲಹೆ ಮೇರೆಗೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ನಿಯಂತ್ರಣದ ಸರ್ಕಾರದ ಮಾರ್ಗಸೂಚಿಯಂತೆ 18 ವರ್ಷ ಮೇಲ್ಪಟ್ಟ  ಪ್ರತಿಯೊಬ್ಬರಿಗೆ ಲಸಿಕೆ  ನೀಡಲಾಗುತ್ತಿದ್ದು, ಪ್ರತಿಯೊಬ್ಬರು ಲಸಿಕೆ ಪಡೆಯಬೇಕು ಜೊತೆಗೆ ಎರಡನೇ ಡೋಸ್  ಲಸಿಕೆ ಬಾಕಿ ಇರುವ ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,  ಕಂದಾಯ ಇಲಾಖೆ,  ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಗಳನ್ನು ಕೋವಿಡ್–19ರ ಲಸಿಕಾ ಮಹಾಮೇಳ ಅಭಿಯಾನದ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕೋವಿಡ್-19 ಮಹಾ ಲಸಿಕ ಅಭಿಯಾನ ಆರಂಭಗೊಂಡಿದ್ದು,ಪ್ರತಿಯೊಬ್ಬರು ಲಸಿಕೆ ಪಡೆಯಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ವೇಳೆ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ರಾಮಕೃಷ್ಣ ಅವರು ಮಾತನಾಡಿ, ಗರ್ಭಿಣಿ ಸ್ತ್ರೀಯರು ಸೇರಿದಂತೆ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಲಸಿಕೆ ನೀಡಲಾಗುತ್ತಿದ್ದು, ಪ್ರತಿಯೊಬ್ಬರು ಲಸಿಕೆ ಪಡೆಯುವ ಮೂಲಕ ಜಿಲ್ಲೆಯನ್ನು ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕೆಂದು ಗ್ರಾಮಸ್ಥರಲ್ಲಿ ಮಾನವಿ ಮಾಡಿದರು.

ಇದೇ ಸಂದರ್ಭದಲ್ಲಿ ಯರಗೇರಾ ಗ್ರಾಮ ಪಂಚಾಯತ್ ಅಧ್ಯಕ್ಷ ನಾರಾಯಣ ರಾವ್, ಉಪಾಧ್ಯಕ್ಷೆ ಶೋಭಾ ಗಾಳಿಗೇಶ್, ರಾಯಚೂರು ತಾಲೂಕು ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ವಿಜಯ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಡಿ. ಶಾಕಿರ, ಅಂಗನವಾಡಿ  ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತರು ಸೇರಿದಂತೆ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...