ನ.26ರಂದು ಗ್ರಾಮೀಣ ಭಾರತ ಬಂದ್‌ ಗೆ ಕರೆ

Source: sonews | By Staff Correspondent | Published on 23rd November 2020, 9:55 PM | State News | Don't Miss |

ಶ್ರೀನಿವಾಸಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ವಿರುದ್ಧ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ನ.26ರಂದು  ಗ್ರಾಮೀಣ ಭಾರತ ಬಂದ್‌ ನಡೆಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಹೇಳಿದರು.

ಪಟ್ಟಣದ ಕೆಪಿಆರ್ಎಸ್‌ ಕಚೇರಿ ಸಭಾಂಗಣದಲ್ಲಿ ಸೊಮವಾರ ಏರ್ಪಡಿಸಿದ್ದ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಮಿ, ವಿದ್ಯುತ್‌, ಎಪಿಎಂಸಿ, ಬೆಲೆ ನಿಯಂತ್ರಣ ಹಾಗೂ ಬೀಜ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಬಂದ್‌ಗೆ ಕರೆ ನೀಡಲಾಗಿದೆ. ನ.27 ರಂದು ಅಂಚೆ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪಾತಕೋಟ ನವೀನ್‌ ಕುಮಾರ್‌ ಮಾತನಾಡಿದರು.  ವಿವಿಧ ರೈತ ಸಂಘಟನೆಗಳ ಮುಖಂಡರಾದ ಎನ್‌.ವೀರಪ್ಪರೆಡ್ಡಿ, ಶ್ರೀರಾಮರೆಡ್ಡಿ, ನಂಜಪ್ಪ, ಮಂಜುನಾಥ್‌, ನಾಗಭೂಷಣ್‌, ಮಂಜುಳ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...