ಆರ್.ವಿ ದೇಶಪಾಂಡೆ ಬೆಂಗಾವಲು ವಾಹನ ಅಪಘಾತ:ಇಬ್ಬರಿಗೆ ಗಾಯ!

Source: so news | By MV Bhatkal | Published on 16th June 2019, 1:20 AM | Coastal News | Don't Miss |

ಕಾರವಾರ:ಕಂದಾಯ ಸಚಿವ ಆರ್ ವಿ ದೇಶಪಾಂಡೆ ಬೆಂಗಾವಲು ವಾಹನ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದ ಘಟ್ಟದ ಬಳಿ ನಡೆದಿದೆ.
ಇಂದು ಜಿಲ್ಲಾ ಪಂಚಾಯತ್ ನಲ್ಲಿ ಹಮ್ಮಿಕೊಂಡಿದ್ದ ಕೆ ಡಿ ಪಿ ಸಭೆಗೆ ಸಚಿವ ಆರ್ .ವಿ ದೇಶಪಾಂಡೆ ಹಳಿಯಾಳ ದಿಂದ ಕಾರವಾರಕ್ಕೆ ಆಗಮಿಸುತ್ತಿದ್ದ ವೇಳೆ ವಾಹನ ಆಯಾ ತಪ್ಪಿ ಪಲ್ಟಿಯಾಗಿ ಅಪಘಾತವಾಗಿದೆ.
ವಾಹನದಲ್ಲಿದ್ದ ಸಿಬ್ಬಂದಿಗಳಾದ ಮಾರುತಿ ನಾಯ್ಕ,ಚಾಲಕ ರಾಜೇಶ ನಾಯ್ಕ ಎನ್ನುವವರಿಗೆ ಗಾಯಗಳಾಗಿದ್ದು
ಗಾಯಾಳುಗಳು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆ ಸಂಬಂಧ ಕದ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಾಯಾಳುಗಳನ್ನು ಭೇಟಿಯಾದ ಸಚಿವ ಆರ್ ವಿ ದೇಶಪಾಂಡೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದು ನಂತರ ಕಾರವಾರದಲ್ಲಿ ನಡೆಯುತ್ತಿರುವ ಕೆಡಿಪಿ ಸಭೆಗೆ ತೆರಳಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...