ಭಟ್ಕಳದಿಂದ ಉಪವಿಭಾಗಾಧಿಕಾರಿ ಭರತ್ ಎಸ್ ವರ್ಗಾವಣೆ. ಸಾಹಿಲ್ ಆನ್ಲೈನ್ ಸಂಸ್ಥೆಯಿಂದ ಸನ್ಮಾನ ಬೀಳ್ಕೊಡುಗೆ

Source: SO News | By Laxmi Tanaya | Published on 20th February 2021, 8:43 PM | Coastal News | Don't Miss |

ಭಟ್ಕಳ : ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ಭಟ್ಕಳ ಉಪವಿಭಾಗಾಧಿಕಾರಿ ಭರತ್ ಎಸ್ ಅವರ ಕಾರ್ಯ ಶ್ಲಾಘನೀಯವಾಗಿದೆ. ಅವರು ಗದಗ ಜಿ.ಪಂ ಸಿಇಓ ಆಗಿ ಪದೋನ್ನತಿ ಹೊಂದಿ ಹೋಗುತ್ತಿರುವ ಸಂದರ್ಭದಲ್ಲಿ ಶನಿವಾರ ಭಟ್ಕಳದ ಮಿನಿವಿಧಾನಸೌಧ ಕಚೇರಿಯಲ್ಲಿ ಸಾಹಿಲ್ ಆನಲೈನ್ ಮಾದ್ಯಮ ಸಂಸ್ಥೆ ವತಿಯಿಂದ ಬೀಳ್ಕೊಡುಗೆ ಸ್ವೀಕರಿಸಿದರು.

ನಂತರ ಮಾತನಾಡಿದ ಭರತ್ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನನಗೆ ಉತ್ತಮ ವಾತಾವರಣ ಸಿಕ್ಕಿದೆ. ಜಿಲ್ಲೆಯ ಜನ ಕೂಡ ಸಹಕಾರ ಮನೋಭಾವ ಹೊಂದಿದವರು. ಕಳೆದ ಕೆಲ ತಿಂಗಳಿಂದ ಇಲ್ಲಿ ಲಾಕ್ ಡೌನ್ ಪರಿಸ್ಥಿತಿ ಸಂದರ್ಭದಲ್ಲಿ ತಾವು ಸರ್ಕಾರ ಸೂಚಿಸಿದ ಪ್ರಕಾರ ಕೆಲಸ ಮಾಡಬೇಕಾದ ಅನಿವಾರ್ಯತೆ ಎದುರಾಗಿತ್ತು. ಹೀಗಾಗಿ ಜನ ಕೂಡ ತುಂಬು ಹೃದಯದ ಸಹಕಾರ ನೀಡಿದ್ದರಿಂದ ಸಾಧ್ಯವಾಗಿದೆ ಎಂದರು.

ಸಾಹಿಲ್ ಆನಲೈನ್ ಪ್ರಧಾನ ಸಂಪಾದಕರಾದ ಇನಾಯತ್ ಗವಾಯಿ ಮಾತನಾಡಿ 
ವರ್ಗಾವಣೆಯಾದ ತಾವು ಇನ್ನೂ ಉತ್ತಮ ಮಟ್ಟಕ್ಕೆ ಪದೋನ್ನತಿ ಹೊಂದಿ  ಈ ಜಿಲ್ಲೆಯಲ್ಲಿ ಕೆಲಸ ಮಾಡುವ ಹಾಗೆ ಆಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪಕರಾದ ಮುಬಾಶೀರ್ ಹಲ್ಲಾರೆ, ಯಾಹ್ಯಾ ಹಲ್ಲಾರೆ, ಸಪ್ವಾನ್ ಮೊಟಿಯಾ ಹಾಗೂ ಅಮಿನ್ ಜುಹೈಬ್ ಇದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...