ದನಸಾಗಾಟಗಾರರ ಮೇಲೆ ಹಲ್ಲೆ; ೭ಭಜರಂಗ ದಳದ ಕಾರ್ಯಕರ್ತರ ಬಂಧನ

Source: sonews | By Staff Correspondent | Published on 16th September 2018, 10:48 PM | State News | Incidents | Don't Miss |

ಹಾಸನ: ರಸ್ತೆ ಮದ್ಯೆ ಟೈರಿಗೆ ಬೆಂಕಿ ಹಚ್ಚಿ, ದನ ಸಾಗಾಟ ಮಾಡುತ್ತಿದ್ದ ವಾಹನ ತಡೆದು ವ್ಯಕ್ತಿಗೆ ಹಲ್ಲೆ ನಡೆಸಿದ್ದಲ್ಲದೇ, ಪೊಲೀಸರೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣದಲ್ಲಿ 7 ಮಂದಿ ಬಜರಂಗದಳದ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದ್ದಾರೆ.

ರಘು, ಜಿಪ್ಪಿ ಶಿವು, ಜೀವನ್, ದೀಪು, ರನಿಕುಮಾರ್, ಸುರೇಶ್ ಮತ್ತು ಪವನ್ ಬಂಧಿತ ಆರೋಪಿಗಳು.

ಶುಕ್ರವಾರ ಮುಂಜಾನೆ 6 ಗಂಟೆಯ ಸಮಯದಲ್ಲಿ ತಾಲೂಕಿನ ದೋಣಿಗಾಲ್ ಗ್ರಾಮದಲ್ಲಿ ಲಾರಿಯೊಂದರಲ್ಲಿ ದಕ್ಷಿಣ ಕನ್ನಡಕ್ಕೆ ದನಗಳ ಸಾಗಿಸಲಾಗುತ್ತಿದೆ,  ದನ ಸಾಗಾಟಕ್ಕೆ ಪೊಲೀಸರು ಕುಮ್ಮಕು ನೀಡುತ್ತಿದ್ದಾರೆ ಎಂದು ಆರೋಪಿಸಿದ ಬಜರಂಗದಳದ ಕಾರ್ಯಕರ್ತರು ರಸ್ತೆತಡೆ ನಡೆಸಿದ್ದರು. ಅಲ್ಲದೇ, ಟೈರಿಗೆ ಬೆಂಕಿ ಹಚ್ಚಿ ವಾಹನಗಳನ್ನು ತಡೆದು ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡೆಸಿದ್ದರು. ಈ ಸಂದರ್ಭ ಪೋಲಿಸರೊಂದಿಗೆ ಮಾತಿನ ಚಕಮುಕಿ ನಡೆಸಿ ಅಸಭ್ಯವಾಗಿ ವರ್ತಿಸಿದ್ದರು ಎನ್ನಲಾಗಿದೆ. 

ರಸ್ತೆ ತಡೆ ನಡೆಸಿ ಪ್ರತಿಭಟನೆಯನ್ನು ನಡೆಸುತ್ತಿದ್ದ ಸಂದರ್ಭ ದನಗಳನ್ನು ಸಾಗಿಸುತ್ತಿದ್ದ ಸ್ಥಳೀಯ ವಾಹನವನ್ನು ಅಡ್ಡಗಟ್ಟಿದ್ದಲ್ಲದೇ, ವಾಹನ ಜಖಂಗೊಳಿಸಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ. 

ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...