ಕೇರಳ ಚಿನ್ನ ಸಾಗಣೆ ಪ್ರಕರಣ: ಆರೋಪಿ ಸ್ವಪ್ನ, ಸಂದೀಪ್‌ಗೆ ನ್ಯಾಯಾಂಗ ಬಂಧನ

Source: Agencies | Published on 13th July 2020, 12:24 AM | National News | Don't Miss |

 

ಕೊಚ್ಚಿ: ಕೇರಳದ  ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಯಲಾಗಿದ್ದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿಗಳಾದ ಸ್ವಪ್ನಾ ಸುರೇಶ್ ಮತ್ತು ಸಂದೀಪ್‌ ನಾಯರ್‌ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಜುಲೈ 5ರಂದು ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ರಾಜತಾಂತ್ರಿಕ ಸಾಮಾನು ಸರಂಜಾಮುಗಳನ್ನು ಸಾಗಿಸುತ್ತಿದ್ದಾಗ ₹15 ಕೋಟಿ ಮೌಲ್ಯದ 30 ಕೆ.ಜಿ ಚಿನ್ನವನ್ನು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಆದರೆ, ಆರೋಪಿಗಳು ಕೇರಳ, ತಮಿಳುನಾಡು ದಾಟಿ ಬೆಂಗಳೂರಿನಲ್ಲಿ ಅಡಗಿದ್ದರು.
ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಸ್ವಪ್ನಾ ಸುರೇಶ್ ಮತ್ತು ಸಂದೀಪ್‌ ನಾಯರ್‌ನನ್ನು ಬಂಧಿಸಿದ ಎನ್‌ಐಎ ಭಾನುವಾರ ಬೆಳಿಗ್ಗೆ ಕೊಚ್ಚಿಗೆ ಕರೆತಂದಿತ್ತು. ಎನ್‌ಐಎ ವಿಶೇಷ ಕೋರ್ಟ್‌ ಮುಂದೆ ಇಬ್ಬರೂ ಆರೋಪಿಗಳನ್ನು ಹಾಜರು ಪಡಿಸಲಾಯಿತು.
ವಿಚಾರಣೆ ನಡೆಸಲು ಆರೋ‍ಪಿಗಳನ್ನು ವಶಕ್ಕೆ ನೀಡುವಂತೆ ಎನ್‌ಐಎ ಮನವಿ ಸಲ್ಲಿಸಿದ್ದು, ಕೋರ್ಟ್‌ ಸೋಮವಾರ ಮನವಿ ಪರಿಗಣಿಸಲಿದೆ. ಪ್ರಸ್ತುತ ಕೋರ್ಟ್‌ ನ್ಯಾಯಾಂಗ ವಶಕ್ಕೆ ಆದೇಶಿಸಿದ್ದು, ಕಡ್ಡಾಯವಾಗಿ ಕೋವಿಡ್‌–19 ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಪ್ರಮುಖ ಆರೋಪಿ ಸ್ವಪ್ನಾ ಸುರೇಶ್‌ಗೆ ತ್ರಿಶ್ಶೂರ್‌ ಜಿಲ್ಲೆಯಲ್ಲಿ ಹಾಗೂ ಸಂದೀಪ್‌ ನಾಯರ್‌ಗೆ ಕರುಕುಟ್ಟಿಯ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗುತ್ತಿದೆ ಎಂದು ಎಎನ್ಐ ಟ್ವೀಟಿಸಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಅರಬ್‌ ಸಂಯುಕ್ತ ರಾಷ್ಟ್ರಗಳ ದೂತಾವಾಸದ ಮಾಜಿ ಸಿಬ್ಬಂದಿ ಜತೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಕಳೆದ ವಾರ ಹುದ್ದೆಯಿಂದ ತೆರವುಗೊಳಿಸಲಾಗಿತ್ತು. ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿಗಳು ಕೇರಳ, ತಮಿಳುನಾಡು ಗಡಿ ದಾಟಿ ಬೆಂಗಳೂರು ತಲುಪಿದ್ದರ ಬಗ್ಗೆ ಇತರ ರಾಜಕೀಯ ನಾಯಕರೂ ಅನುಮಾನ ವ್ಯಕ್ತಪಡಿಸಿದ್ದಾರೆ

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...