ಭಾರತ-ಸೌದಿ ಮೈತ್ರಿಗೆ ಬಲ; ಇಂಧನ, ಆಹಾರ, ತಿಳುವಳಿಕೆ ಒಪ್ಪಂದಗಳಿಗೆ ಸಹಿ

Source: Vb | By I.G. Bhatkali | Published on 12th September 2023, 11:00 AM | National News | Gulf News |

ಹೊಸದಿಲ್ಲಿ:  ಪ್ರಧಾನಿ ನರೇಂದ್ರ ಮೋದಿ ಮತ್ತು ಸೌದಿ ಅರೇಬಿಯದ ಯುವರಾಜ ಮುಹಮ್ಮದ್ ಬಿನ್ ಸಲಾನ್ ಸೋಮವಾರ ಹೊಸದಿಲ್ಲಿಯಲ್ಲಿ ರಕ್ಷಣಾ ಭಾಗೀದಾರಿಕೆ ಮಂಡಳಿಯ ಮೊದಲ 'ನಾಯಕರ ಸಭೆ' ನಡೆಸಿದರು.

ಇಂಧನ ಭದ್ರತೆ, ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಆರೋಗ್ಯ ರಕ್ಷಣೆ, ಆಹಾರ ಭದ್ರತೆ ಸೇರಿದಂತೆ ದ್ವಿಪಕ್ಷೀಯ ಸಹಕಾರದ ಹಲವಾರು ಕ್ಷೇತ್ರಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು ಹಾಗೂ 24ಕ್ಕೂ ಅಧಿಕ ತಿಳುವಳಿಕಾ ಒಪ್ಪಂದಗಳಿಗೆ ಸಹಿ ಹಾಕಿದರು ಎಂದು ವಿದೇಶ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗಿ ಸಾಮಾಜಿಕ ಮಾಧ್ಯಮ 'ಎಕ್ಸ್' (ಟ್ವಿಟರ್) ನಲ್ಲಿ ಬರೆದಿದ್ದಾರೆ.

ಸೌದಿ ಯುವರಾಜ ಭಾರತಕ್ಕೆ ಎರಡನೇ ಅಧಿಕೃತ ಭೇಟಿ ನೀಡುತ್ತಿದ್ದಾರೆ. 2019 ಫೆಬ್ರವರಿಯಲ್ಲಿ ಅವರು ಮೊದಲ ಭೇಟಿ ನೀಡಿದ್ದರು. ಜಿ20 ಶೃಂಗ ಸಮ್ಮೇಳನದಲ್ಲಿ ಭಾಗವಹಿಸುವುದಕ್ಕಾಗಿ ಅವರು ಸೆಪ್ಟೆಂಬರ್ 8ರಂದು ದಿಲ್ಲಿಗೆ ಆಗಮಿಸಿದ್ದರು. ಬಳಿಕ, ಅವರು ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸುವುದಕ್ಕಾಗಿ ತನ್ನ ಭಾರತ ಪ್ರವಾಸವನ್ನು ವಿಸ್ತರಿಸಿದ್ದಾರೆ. ಸೌದಿ ಯುವರಾಜನೊಂದಿಗೆ 'ಫಲಪ್ರದ ಮಾತುಕತೆ' ನಡೆದಿದೆ ಎಂದು ಸಭೆಯ ಬಳಿಕ ಪ್ರಧಾನಿ ಹೇಳಿದರು.

ಉಭಯ ನಾಯಕರು ವ್ಯಾಪಾರ ಸಂಬಂಧಗಳ ಬಗ್ಗೆ ಚರ್ಚಿಸಿದರು ಹಾಗೂ ಸಂಪರ್ಕ, ನವೀಕರಿಸಬಹುದಾದ ಇಂಧನ, ಆಹಾರ ಭದ್ರತೆ ಮತ್ತು ಸೆಮಿಕಂಡಕ್ಟರ್ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಸಾಧ್ಯತೆಗಳನ್ನು ಪರಾಮರ್ಶೆ ನಡೆಸಿದರು. “ಸೌದಿ ಅರೇಬಿಯದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ಲಝೀಝ್ ಅಲ್ ಸೌದ್ ಮತ್ತು ನಾನು ಅತ್ಯಂತ ಫಲಪ್ರದ ಮಾತುಕತೆಗಳನ್ನು ನಡೆಸಿದೆವು. ನಾವು ನಮ್ಮ ವ್ಯಾಪಾರ ಸಂಬಂಧಗಳನ್ನು ವಿಮರ್ಶಿಸಿದೆವು. ನಮ್ಮ ದೇಶಗಳ ನಡುವಿನ ವಾಣಿಜ್ಯ ಸಂಬಂಧವು ಮಂಬರುವ ದಿನಗಳಲ್ಲಿ ಇನ್ನಷ್ಟು ಬೆಳೆಯಲಿದೆ ಎಂಬ ಬಗ್ಗೆ ನಮಗೆ ವಿಶ್ವಾಸವಿದೆ. ಗ್ರಿಡ್ ಸಂಪರ್ಕ, ನವೀಕರಿಸಬಹುದಾದ ಇಂಧನ, ಆಹಾರ ಭದ್ರತೆ,  ಸೆಮಿಕಂಡಕ್ಟರ್ ಹಾಗೂ ಉತ್ಪಾದನೆ ಮತ್ತು ವಿತರಣೆ ಜಾಲ ಕ್ಷೇತ್ರಗಳಲ್ಲಿ ಸಹಕಾರಕ್ಕೆ ಅಗಾಧ ಅವಕಾಶಗಳಿವೆ ಎನ್ನುವುದನ್ನು ನಾವು ಮನಗಂಡಿದ್ದೇವೆ' ಎಂದು ಮೋದಿ ಎಕ್ಸ್'ನಲ್ಲಿ ಬರೆದಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.