ಚುನಾವಣಾ ಬಾಂಡ್; ಸುಪ್ರೀಂ ಆದೇಶದಂತೆ ಚುನಾವಣಾ ಆಯೋಗಕ್ಕೆ ವಿವರ ಸಲ್ಲಿಸಿದ ಎಸ್‌ಬಿಐ

Source: Vb | By I.G. Bhatkali | Published on 13th March 2024, 11:23 PM | National News |

ಹೊಸದಿಲ್ಲಿ: ಸುಪ್ರೀಂ ಕೋರ್ಟ್ನ ಆದೇಶಕ್ಕೆ ಅನುಗುಣವಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ವಿವರಗಳನ್ನು ಮಂಗಳವಾರ ಸಲ್ಲಿಸಿದೆ.

ಮಾರ್ಚ್ 12ರಂದು ಕಚೇರಿ ಕೆಲಸದ ಅವಧಿ ಮುಗಿಯುವ ಮುನ್ನ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ವಿವರವನ್ನು ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಭಾರತೀಯ ಸ್ಟೇಟ್ ಬ್ಯಾಂಕ್‌ಗೆ ಆದೇಶಿಸಿತ್ತು. ಸುಪ್ರೀಂ ಕೋರ್ಟ್‌ ಈ ಆದೇಶದ ಪ್ರಕಾರ ಚುನಾವಣಾ ಆಯೋಗ ಭಾರತೀಯ ಸ್ಟೇಟ್‌ ಬ್ಯಾಂಕ್ ನೀಡಿದ ವಿವರಗಳನ್ನು ಮಾರ್ಚ್ 15ರಂದು ಸಂಜೆ 5 ಗಂಟೆ ಒಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕಾಗಿದೆ. 2018ರಿಂದ ಇದುವರೆಗೆ 30 ಕಂತುಗಳಲ್ಲಿ ಒಟ್ಟು 16,518 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಭಾರತೀಯ ಸ್ಟೇಟ್ ಬ್ಯಾಂಕ್ ವಿತರಿಸಿದೆ. ಕೇಂದ್ರ ಸರಕಾರ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್ ಯೋಜನೆಯನ್ನು ಸುಪ್ರೀಂ ಕೋರ್ಟ್ ಫೆ. 15ರಂದು ರದ್ದುಪಡಿಸಿ ಮಹತ್ವದ ತೀರ್ಪು ನೀಡಿತ್ತು. ಚುನಾವಣಾ ಬಾಂಡ್ ಅಸಾಂವಿಧಾನಿಕ ಎಂದು ಅದು ಹೇಳಿತ್ತು ಹಾಗೂ ಚುನಾವಣಾ ಬಾಂಡ್ ಪಡೆದವರ ವಿವರಗಳನ್ನು ಪ್ರಕಟಿಸಬೇಕೆಂದು ಆದೇಶ ನೀಡಿತ್ತು.

ವಿವರಗಳನ್ನು ಪ್ರಕಟಿಸಲು ಜೂನ್ 30ರ ವರೆಗೆ ಕಾಲಾವಕಾಶ ನೀಡುವಂತೆ ಭಾರತೀಯ ಸ್ಟೇಟ್ ಬ್ಯಾಂಕ್ ಕೋರಿತ್ತು. ಆದರೆ, ಈ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಅಲ್ಲದೆ, ಚುನಾವಣಾ ಆಯೋಗಕ್ಕೆ ಮಂಗಳವಾರ ಕಚೇರಿ ಕೆಲಸದ ಅವಧಿ ಮುಗಿಯುವ ಮುನ್ನ ಎಲ್ಲಾ ವಿವರಗಳನ್ನು ಸಲ್ಲಿಸುವಂತೆ ಸೂಚಿಸಿತ್ತು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...