2020 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಯೋಜನೆವಾರು ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

Source: sonews | By Staff Correspondent | Published on 22nd September 2020, 8:12 PM | State News | Don't Miss |

ಬೆಂಗಳೂರು: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯ (M.H.R.D), ಉನ್ನತ ಶಿಕ್ಷಣ ಇಲಾಖೆ, ಕೇಂದ್ರ ಸರ್ಕಾರ, ನವದೆಹಲಿ ಇವರ ವತಿಯಿಂದ 2020ರಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಯೋಜನೆವಾರು  Top 20th Percentile or 80th Percentile ಗಿಂತ ಹೆಚ್ಚು ಅಂಕಗಳಿಸಿದ ಹಾಗೂ ತಮ್ಮ ವಿದ್ಯಾಭ್ಯಾಸವನ್ನು ಕಡ್ಡಾಯವಾಗಿ ಉನ್ನತ ಶಿಕ್ಷಣದಲ್ಲಿ ಮುಂದುವರಿಸಿರುವಂತಹ(ಕನಿಷ್ಠ 03 ವರ್ಷದ ಪದವಿ ತರಗತಿಗೆ ದಾಖಲಾಗಿರುವ) ವಿದ್ಯಾರ್ಥಿಗಳಿಂದ Central Sector Scheme of Scholarship for College and University Students ಗಳಿಗೆ online ಮೂಲಕ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಕೇಂದ್ರ ಸರ್ಕಾರದ ವತಿಯಿಂದ website:www.scholarships.gov.in   National e-Scholarship Portal ನಲ್ಲಿ ಹೊಸ ತಂತ್ರಾಂಶವನss್ನು ಅಳವಡಿಸಲಾಗಿದೆ.  ಆದಕಾರಣ, ಈ portal ನಲ್ಲಿಯೇ 2020gÀ Fresh Batch ನ ವಿದ್ಯಾರ್ಥಿಗಳು ಅರ್ಜಿಗಳನ್ನು “online” ಮೂಲಕ ಸಲ್ಲಿಸಬೇಕಿರುತ್ತದೆ. (Link for submission of application website:www.scholarship.gov.in =» New User(Register). ಪ್ರಸ್ತುತ ಸದರಿ ಪೋರ್ಟಲ್‍ನಲ್ಲಿ ಹೊಸ ಬ್ಯಾಚ್‍ನ ಕಾರ್ಯ ಜಾರಿಯಲ್ಲಿದ್ದು, ಶೀಘ್ರದಲ್ಲಿಯೆ ಪುರ್ಣಗೊಳ್ಳಲಿರುತ್ತದೆ. ಆಸಕ್ತ ವಿದ್ಯಾರ್ಥಿಗಳು ಆಗಾಗ ಈ ವೆಬ್‍ಸೈಟನ್ನು ಗಮನಿಸುತ್ತಿದ್ದು, ಪ್ರಕ್ರಿಯೆ ಆರಂಭಗೊಂಡ ಕೂಡಲೇ ಕೇಂದ್ರ ಸರ್ಕಾರದ ವತಿಯಿಂದ ನಿಗದಿ ಪಡಿಸುವ ದಿನಾಂಕದೊಳಗಾಗಿ “ಔಟಿಟiಟಿe” ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.     

2020ನೇ ಸಾಲಿನಲ್ಲಿ ಎಂ.ಹೆಚ್.ಆರ್.ಡಿ. ವಿದ್ಯಾರ್ಥಿ ವೇತನಕ್ಕೆ (ಹೊಸ ಹಾಗೂ ನವೀಕರಣಗಳಿಗೆ) ಅರ್ಜಿ ಸಲ್ಲಿಸಲಿಚ್ಚಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ನೋಂದಣಿ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕಿರುತ್ತದೆ. ಆದಕಾರಣ, ಆಸಕ್ತ ವಿದ್ಯಾರ್ಥಿಗಳು ಆಧಾರ್ ನೊಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ಹೊಂದಿರಬೇಕಾಗಿ ಈ ಮೂಲಕ ತಿಳಿಸಿದೆ.

ವಿದ್ಯಾರ್ಥಿಗಳು Online ಮೂಲಕ ಸಲ್ಲಿಸಿದ ಎಲ್ಲಾ ದಾಖಲೆಗಳನ್ನು (ಮೂಲ ದಾಖಲೆಗಳ ಜೊತೆಯಲ್ಲಿ) ಪರಿಶೀಲನೆಗಾಗಿ ತಾವು ಅಧ್ಯಯನ ಮಾಡುತ್ತಿರುವ ಕಾಲೇಜುಗಳ ಪ್ರಾಚಾರ್ಯರುಗಳಿಗೆ ಕೇಂದ್ರ ಸರ್ಕಾರದಿಂದ ನಿಗದಿ ಪಡಿಸುವ ದಿನಾಂಕದೊಳಗಾಗಿ ಸಲ್ಲಿಸುವುದು. 

ಪ್ರಾಚಾರ್ಯರುಗಳು, ವಿದ್ಯಾರ್ಥಿಗಳು Online ಮೂಲಕ ಸಲ್ಲಿಸಿರುವ ಅರ್ಜಿಗಳನ್ನು Onlineನಲ್ಲಿ ಕೂಲಂಕುಷವಾಗಿ ಪರಿಶೀಲಿಸಿ, ಸದರಿ ವಿದ್ಯಾರ್ಥಿಯು ತಮ್ಮ ಕಾಲೇಜಿನಲ್ಲಿ ದಾಖಲಾಗಿ, ವಿದ್ಯಾಭ್ಯಾಸ ಮುಂದುವರಿಸಿರುವ ಬಗ್ಗೆ ಹಾಗೂ ವಿದ್ಯಾರ್ಥಿಯು ಈ ವಿದ್ಯಾರ್ಥಿ ವೇತನದ ಉದ್ದೇಶಕ್ಕಾಗಿ ಖಾತೆ ತೆರೆದಿರುವ ಬ್ಯಾಂಕ್‍ನ ವಿವರಗಳನ್ನು ಪರಿಶೀಲಿಸಿ ಖಚಿತ ಪಡಿಸಿಕೊಂಡು, ಸದರಿ ಮಾಹಿತಿಯನ್ನು Online ಮೂಲಕವೇ ಕೇಂದ್ರ ಸರ್ಕಾರದ ವತಿಯಿಂದ ನಿಗದಿ ಪಡಿಸುವ ದಿನಾಂಕ:31-10-2020ರೊಳಗಾಗಿ ಇಲಾಖೆಗೆ ಸಲ್ಲಿಸಲು (Forward ಮÁಡಲು) ಕೋರಿದೆ.  

ಯಾವುದೇ ಕಾರಣಕ್ಕೂ ನೈಜ ವಿದ್ಯಾರ್ಥಿಯ ಹೊರತು ಆಯ್ಕೆಯಾಗದ ವಿದ್ಯಾರ್ಥಿಗೆ ವಿದ್ಯಾರ್ಥಿ ವೇತನ ಜಮೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರಾಚಾರ್ಯರದ್ದಾಗಿರುತ್ತದೆ.  ಈ ಸಂಬಂಧ ಹೆಚ್ಚಿನ ಮಾಹಿತಿಗೆ ಕೇಂದ್ರ ಕಛೇರಿಯ ಎಂ.ಹೆಚ್.ಆರ್.ಡಿ. ವಿದ್ಯಾರ್ಥಿ ವೇತನದ ಶಾಖೆಯನ್ನು ಸಂಪರ್ಕಿಸಲು ಕೋರಿದೆ. ಪ್ರಸ್ತುತ National e-Scholarship Portalನಲ್ಲಿ ವಿದ್ಯಾರ್ಥಿ ವೇತನದ ನಿಮಿತ್ತ ಕಾರ್ಯ ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿಯು ಲಭ್ಯವಿರುವುದಿಲ್ಲ. ಪ್ರಕ್ರಿಯೆ ಚಾಲನೆಗೊಂಡ ಕೂಡಲೇ ಸದರಿ ವಿದ್ಯಾರ್ಥಿ ವೇತನದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾದಲ್ಲಿ ಇಲಾಖಾ ಅಂತರ್ಜಾಲದಲ್ಲಿ ಆಳವಡಿಸಲಾಗುವುದು.

ಪದವಿ ಪೂರ್ವ ಶಿಕ್ಷಣ ಇಲಾಖೆಯ Website: http://pue.kar.nic.in =» Scholarship =» MHRD Scholarship =» MHRD Scholarship 2020-Fresh batchನಿಂದ ಮಾಹಿತಿಯನ್ನು ಪಡೆದುಕೊಳ್ಳಬಹುದು.  

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...