ಮಕ್ಕಳ ನಿರಂತರ ಕಲಿಕೆಗೆ ವಿದ್ಯಾಗಮ ಪೂರಕ -ಸಚಿವ ಎಸ್. ಸುರೇಶಕುಮಾರ್

Source: SO News | By Laxmi Tanaya | Published on 10th September 2020, 7:49 PM | State News | Don't Miss |

ಧಾರವಾಡ : ಮಕ್ಕಳನ್ನು ಕೊರೊನಾ ಸೋಂಕಿನಿಂದ ರಕ್ಷಿಸುವುದು ಹಾಗೂ ನಿರಂತರವಾಗಿ ಕಲಿಕೆಯ ಸಂಪರ್ಕದಲ್ಲಿ ಇರಿಸುವ ಉದ್ದೇಶದಿಂದ ರಾಜ್ಯಾದ್ಯಂತ ವಿದ್ಯಾಗಮ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ನಿಯಂತ್ರಣಕ್ಕೂ ವಿದ್ಯಾಗಮ ಸಹಕಾರಿಯಾಗಲಿದೆ ಎಂದು ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶಕುಮಾರ್ ಹೇಳಿದರು.

 ಜಿಲ್ಲೆಯ ಸಲಕಿನಕೊಪ್ಪ ಮತ್ತು ಬಾಡ ಗ್ರಾಮಗಳಲ್ಲಿ ವಿದ್ಯಾಗಮ ಚಟುವಟಿಕೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.  ಶಾಲೆಗಳು ಪ್ರಾರಂಭವಾಗುವುದು ಇನ್ನೂ ವಿಳಂಬವಾಗುವ ಸಾದ್ಯತೆಗಳು ಇರುವುದರಿಂದ ಮಕ್ಕಳು ಶಿಕ್ಷಣ ಮತ್ತು ಪಠ್ಯದಿಂದ ದೂರವಾಗಿ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಗೆ ಈಡಾಗುವ ಸಂಭವ ತಪ್ಪಿಸಲು ವಿದ್ಯಾಗಮ ಕಾರ್ಯಕ್ರಮ ರೂಪಿಸಲಾಗಿದೆ. ಶಾಲೆಯಿಂದ ಮಕ್ಕಳು ಹೊರಗುಳಿದರೆ ಅವರನ್ನು ಪುನ: ಮುಖ್ಯವಾಹಿನಿಗೆ ಕರೆತರುವುದು ಕಷ್ಟವಾಗಲಿದೆ. ಸರ್ಕಾರಿ ಶಾಲೆಗಳಷ್ಟೇ ಅಲ್ಲದೇ ಖಾಸಗಿ ಶಾಲೆಗಳು ಕೂಡಾ ವಿದ್ಯಾಗಮ ಕಾರ್ಯಕ್ರಮ ಅನುಷ್ಠಾನಗೊಳಿಸಬಹುದು ಅಥವಾ ಇದಕ್ಕಿಂತಲೂ ಉತ್ತಮವಾದ ಚಟುವಟಿಕೆಯೊಂದಿಗೆ ಮಕ್ಕಳ ಸಂಪರ್ಕ ಹೊಂದಿರಬೇಕೆಂದರು.

ಧಾರವಾಡ ವಿಭಾಗದ ಶಿಕ್ಷಕರ ಕಾರ್ಯಕ್ಕೆ ಸಚಿವರ ಮೆಚ್ಚುಗೆ: ವಿದ್ಯಾಗಮ ಯಶಸ್ವಿಗೆ ಧಾರವಾಡ ವಿಭಾಗದ ಶಿಕ್ಷಕರು ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಹಳ್ಳಿಗಳಲ್ಲಿ ಸರದಿ ಆಧಾರದಲ್ಲಿ ಎಲ್ಲ ಪ್ರದೇಶಗಳಲ್ಲಿ ಶಿಕ್ಷಕರು ತೆರಳಿ ಪಠ್ಯದ ಕುರಿತು ಮಕ್ಕಳಲ್ಲಿರುವ ಸಂದೇಹಗಳನ್ನು ನಿವಾರಿಸುತ್ತಿದ್ದಾರೆ. ಇದು ಶಾಲೆಯ ಬಗ್ಗೆ ಮಕ್ಕಳ ಆಸಕ್ತಿಯನ್ನು ಉಳಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು. ಅದೇ ರೀತಿ ಇತ್ತೀಚಿಗೆ ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ವೇಳೆ ಈ ಭಾಗದ ಪ್ರೌಢಶಾಲಾ ಶಿಕ್ಷಕರು ತಮ್ಮ ಮೋಟಾರ್‍ ಬೈಕ್‍ಗಳ ಮೂಲಕ ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಮಾರ್ಗದರ್ಶನ ಮಾಡಿದ್ದು ಪ್ರಶಂಸನೀಯವಾಗಿದೆ. ಇಂತಹ ಪ್ರಯತ್ನಗಳಿಂದ ಅನೇಕ ದುರ್ಬಲ ಮತ್ತು ಅನಾರೋಗ್ಯ ಪೀಡಿತ ಮಕ್ಕಳು ಕೂಲಿಕಾರರು ಹಾಗೂ ಕಾರ್ಮಿಕರ ಮಕ್ಕಳು ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿದೆ ಎಂದು ಸಚಿವರು ತೃಪ್ತಿ ವ್ಯಕ್ತಪಡಿಸಿದರು.

ಕೊರೊನಾ ಶುಲ್ಕ ಸಂಗ್ರಹಿಸಿದರೆ ಕಾನೂನು ಕ್ರಮ: ಕೊವಿಡ್ ನಿಯಂತ್ರಣದ ಹೆಸರಿನಲ್ಲಿ ಕೆಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಂದ ಕೊರೊನಾ ಹೆಸರಿನಲ್ಲಿ ಶುಲ್ಕ ಸಂಗ್ರಹಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಬರುತ್ತಿದೆ. ಅಂತಹ ಯಾವುದೇ ಶುಲ್ಕ ವಿಧಿಸಲು ಅವಕಾಶವಿಲ್ಲ. ನಿಯಮಬಾಹಿರವಾಗಿ ಯಾವುದಾದರೂ ಶಿಕ್ಷಣ ಸಂಸ್ಥೆಗಳು ಶುಲ್ಕ ವಸೂಲಿ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವ ಎಸ್. ಸುರೇಶಕುಮಾರ್ ಹೇಳಿದರು. 

ಬಾಡ ಗ್ರಾಮದಲ್ಲಿ ಮಾದ್ಯಮ ಪ್ರತಿನಿಧಿಗಳ ಪ್ರಶ್ನೆಯೊಂದಕ್ಕೆ ಅವರು ಈ ಉತ್ತರ ನೀಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮಲ್ಲಿ ದುಡಿಯುತ್ತಿರುವ ಶಿಕ್ಷಕರು ಹಾಗೂ ಸಿಬ್ಬಂದಿಯ ಹಿತ ಕಾಯಬೇಕು. ಮಕ್ಕಳಿಗೆ ನಿರ್ಧಿಷ್ಟ ವ್ಯಕ್ತಿ ಅಥವಾ ವ್ಯಾಪಾರಿಗಳಲ್ಲಿ ಪಠ್ಯಪುಸ್ತಕ, ಸಮವಸ್ತ್ರ ಖರೀದಿಸಲು ಸೂಚನೆ ನೀಡಬಾರದು ಎಂದು ಸಚಿವರು ಹೇಳಿದರು.

ವಿದ್ಯಾಗಮ ಮಕ್ಕಳಿಂದ ಪ್ರಾರ್ಥನೆ ಹೇಳಿಸಿ ಪಾಠ ಮಾಡಿದ ಶಿಕ್ಷಣ ಸಚಿವರು : ವಿದ್ಯಾಗಮ ಕಾರ್ಯಕ್ರಮದ ಪರಿಶೀಲನೆಗಾಗಿ ಇಂದು ಧಾರವಾಡ ಗ್ರಾಮೀಣ ವಿಭಾಗದ ಸಲಕಿನಕೊಪ್ಪ ಹಾಗೂ ಬಾಡ ಗ್ರಾಮಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಅವರು ಮಕ್ಕಳಿಂದ ನಾಡಗೀತೆ ಹಾಡಿಸಿ ಪಾಠ, ಮಗ್ಗಿ ಹೇಳಿಸಿ ಮಕ್ಕಳ ಶಿಕ್ಷಣಮಟ್ಟ ಪರೀಕ್ಷಿಸಿದರು.
 ಸಲಕಿನಕೊಪ್ಪ ಗ್ರಾಮದಲ್ಲಿ ವಿದ್ಯಾಗಮ ಪಾಠದಲ್ಲಿ ನಿರತರಾಗಿರುವ ಮಕ್ಕಳಿಗೆ ಭಾರತದ ಮೊದಲ ರಾಷ್ಟ್ರಪತಿ ಯಾರು, ಮಗ್ಗಿಯನ್ನು ಕ್ರಮವಾಗಿ ಹಾಗೂ ವಿರುದ್ಧವಾಗಿ ಹೇಳಿಸಿದರು. ಮಕ್ಕಳ ಕೈಬರಹ ಕಂಡು ಸಂತಸಪಟ್ಟರು. ಕೊರೊನಾ ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳನ್ನು ಮಕ್ಕಳಿಂದ ವಿವರಿಸಲು ಹೇಳಿದರು. ಹಾಗೂ ಶಾಲೆ ಪುನರಾರಂಭದ ಕುರಿತು ಮಕ್ಕಳ ಅಭಿಪ್ರಾಯ ಆಲಿಸಿದರು. 

 ಬಾಡ ಗ್ರಾಮದಲ್ಲಿ ಮಕ್ಕಳಿಂದ ನಾಡಗೀತೆ ಹಾಡಿಸಿದ ಸಚಿವರು, ನಾಡಗೀತೆಯ ರಚನೆಕಾರರು, ರಾಷ್ಟ್ರಗೀತೆಯ ಕರ್ತೃ, ಅವರಿಗೆ ದೊರೆತ ಪ್ರಶಸ್ತಿಗಳು, ಭಾರತದ ಈಗಿನ ರಾಷ್ಟ್ರಪತಿ ಯಾರು ಎಂಬ ಪ್ರಶ್ನೆಗಳನ್ನು ಕೇಳಿ ಕಲಿಕಾಮಟ್ಟ ಪರಿಶೀಲಿಸಿದರು. 

 ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ, ಉಪನಿರ್ದೇಶಕ ಮೋಹನಕುಮಾರ್ ಹಂಚಾಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ್ ಬೊಮ್ಮಕ್ಕನವರ, ಶಿಕ್ಷಕರಾದ ಪಿ.ಎಂ. ಪಾಟೀಲ, ಜಿ.ಎಂ. ಕೋಟಿಗೌಡರ, ಜಿನ್ನಿ ತರಗಲ್, ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷರಾದ ಮಲ್ಲಪ್ಪ ಭಾವಿ ಮತ್ತಿತರರು ಇದ್ದರು. 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...