ಮಂಗಳೂರು ಬಾಂಬ್ ಪ್ರಕರಣದ ತನಿಖೆಗೆ ಎಸ್‍ಡಿಪಿಐ ಆಗ್ರಹ

Source: S.O. News Service | Published on 24th January 2020, 8:07 PM | Coastal News | Don't Miss |

ಭಟ್ಕಳ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್ ಪ್ರಕರಣದ ಕುರಿತಂತೆ ಸಮಗ್ರ ತನಿಖೆ ನಡೆಸಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಭಟ್ಕಳ ಘಟಕದ ಸದಸ್ಯರು ತಹಸೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
 ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಮರುಕ್ಷಣವೇ ಗೋಲಿಬಾರ್ ವಿರುದ್ಧ ಪ್ರತಿಕಾರ, ಇಸ್ಲಾಂ ರಾಷ್ಟ್ರದ ನಿರ್ಮಾಣ, ಜಿಹಾದಿ ಉಗ್ರರು ಎಂದೆಲ್ಲ ಕಪೋಲಕಲ್ಪಿತ ವರ್ಣರಂಜಿತ ಕಥೆಗಳನ್ನು ಬಿತ್ತರಿಸಿ ಅಲ್ಪಸಂಖ್ಯಾತ ಸಮುದಾಯವನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಗರಿಷ್ಠ ಪ್ರಯತ್ನ ನಡೆಯಿತು. ಆರೋಪಿ ಮುಸ್ಲೀಮ್‍ನಲ್ಲ ಎಂಬುದು ಗೊತ್ತಾಗುತ್ತಿದ್ದಂತೆಯೇ ಆತನನ್ನು ಮಾನಸಿಕ ಅಸ್ವಸ್ಥ ಎಂದು ಬಿಂಬಿಸಲು ಆಡಳಿತ ವರ್ಗ ಪ್ರಯತ್ನ ನಡೆಸುತ್ತಿದೆ. ಮಾತ್ರವಲ್ಲ, ಬಾಂಬ್ ಇಟ್ಟಂತಹ ದೇಶದ್ರೋಹ ಪ್ರಕರಣವನ್ನು ಪಟಾಕಿ ಪ್ರಕರಣವನ್ನಾಗಿ ಬದಲಾಯಿಸಲಾಗಿದೆ. ಸರಕಾರ, ವ್ಯವಸ್ಥೆ ಮಂಗಳೂರು ಬಾಂಬ್ ಪ್ರಕರಣದಲ್ಲಿ ದ್ವಂದ್ವ ನಿಲುವನ್ನು ತಾಳಿರುವುದು ಸಮಾಜದ ಸ್ವಾಸ್ಥ್ಯವನ್ನು ಕದಡುವಂತೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಿಲ ಸಮೀಪದ ಆರ್ಲಪದವು ಎಂಬಲ್ಲಿ ಸ್ಪೋಟಕ ವಸ್ತುಗಳನ್ನು ತಯಾರಿಸುತ್ತಿದ್ದಾಗ ಆರೋಪಿಗಳು ಸಿಕ್ಕಿಬಿದ್ದಿದ್ದು ಆ ಬಗ್ಗೆ ಸರಿಯಾಗಿ ತನಿಖೆ ನಡೆದಿಲ್ಲ. ಈ ಹಿಂದೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದಾಗಲೂ ಆರೋಪಿ ಮಾನಸಿಕ ಅಸ್ವಸ್ಥನೆಂದು ಹೇಳಿ ಪ್ರಕರಣವನ್ನೇ ಗಾಳಿಗೆ ತೂರಲಾಗಿದೆ. ಪ್ರಕರಣದ ಆರೋಪಿಯು ಮುಸ್ಲಿಮೇತರನಾದರೆ ಆತನಿಗೆ ಮಾನಸಿಕ ಅಸ್ವಸ್ಥ ಪಟ್ಟ ನೀಡಿ ಆತನನ್ನು ಆರೋಪ ಮುಕ್ತಗೊಳಿಸುವ ಪದ್ಧತಿ ಮೊದಲಿನಿಂದಲೂ ಚಾಲ್ತಿಯಲ್ಲಿದೆ. ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣ ಗೋಲಿಬಾರ್ ಘಟನೆಯನ್ನು ಮರೆಮಾಚುವ ಮತ್ತು ಸಿಎಎ ವಿರುದ್ಧದ ಪ್ರತಿಭಟನೆಗಳನ್ನು ದಿಕ್ಕು ತಪ್ಪಿಸಲು ಅಧಿಕಾರಿ ವರ್ಗ ಹೂಡಿರುವ ನಾಟಕ ಎಂಬ ಸಂಶಯ ನಮಗೆ ಬರುತ್ತದೆ. ಈ ಷಡ್ಯಂತ್ರಗಳನ್ನು ಬಯಲಿಗೆಳೆಯಲು ಹಾಲಿ ಅಥವಾ ಮಾಜಿ ನ್ಯಾಯಾಧೀಶ ನೇತೃತ್ವದಲ್ಲಿ ವಿಚಾರಣೆ ನಡೆಸಬೇಕು. ತನಿಖೆಯ ಮೊದಲೇ ಆರೋಪಿಯನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿರುವ ಗೃಹ ಸಚಿವ ಎಸ್.ಆರ್.ಬೊಮ್ಮಾಯಿ ಈ ಕೂಡಲೇ ರಾಜಿನಾಮೆ ನೀಡಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ. ತಹಸೀಲ್ದಾರ ವಿ.ಪಿ.ಕೊಟ್ರಳ್ಳಿ ಮನವಿಯನ್ನು ಸ್ವೀಕರಿಸಿದರು. ಎಸ್‍ಡಿಪಿಐ ಜಿಲ್ಲಾಧ್ಯಾಕ್ಷ ತೌಫಿಕ್ ಬ್ಯಾರಿ, ವಾಸೀಮ್ ಮನೇಗಾರ್ ಮೊದಲಾದವರು ಉಪಸ್ಥಿತರಿದ್ದರು.

 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...