ದೆಹಲಿ ಹಿಂಸಾಚಾರದ ವಿರುದ್ಧ ಎಸ್.ಡಿ.ಪಿ.ಐ ಪ್ರತಿಭಟನೆ

Source: sonews | By Staff Correspondent | Published on 26th February 2020, 9:57 PM | Coastal News | Don't Miss |

ಭಟ್ಕಳ: ಎನ್‍ಆರ್‍ಸಿ ಮತ್ತು ಎನ್‍ಪಿಆರ್ ಮತ್ತು ಸಿಎಎ ವಿರೋದಿ ಪ್ರತಿಭಟನಾಕಾರರ ಮೇಲೆ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ, ಹಲ್ಲೆ ವಿರುದ್ಧ ಎಸ್‍ಡಿಪಿಐ ಸದಸ್ಯರು ಬುಧವಾರ ಇಲ್ಲಿನ ತಹಶೀಲ್ದಾರ್ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರು.

"ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಬಿಐ) ಪಕ್ಷ ಖಂಡಿಸುತ್ತದೆ. ಇದನ್ನು ತಡೆಯಲು ಸೇನೆ ಮತ್ತು ಪೆÇಲೀಸರು ವಿಫಲರಾಗಿದ್ದಾರೆ" ಎಂದ ಜಿಲ್ಲಾಧ್ಯಕ್ಷ ತೌಫಿಖ್ ಬ್ಯಾರಿ, ರಾಷ್ಟ್ರ ರಾಜಧಾನಿಯಲ್ಲಿನ ಹಿಂಸಾಚಾರದ ಹಿಂದೆ ಆರ್‍ಎಸ್‍ಎಸ್ ಕೈವಾಡವಿದೆ ಎಂದು ಆರೋಪಿಸಿದ ಅವರು "ಇಂತಹ ಯಾವುದೇ ಘಟನೆಗಳು ನಡೆಯದಂತೆ ಆರ್‍ಎಸ್‍ಎಸ್ ವಿರುದ್ಧ ಕ್ರಮ ಕೈಗೊಳ್ಳಬೇಕು" ಎಂದು ಆಗ್ರಹಿಸಿದರು.

ದೆಹಲಿಯಲ್ಲಿ ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು.

ಸೋಮವಾರದಿಂದ ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಈವರೆಗೆ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 190 ಜನರು ಗಾಯಗೊಂಡಿದ್ದಾರೆ. 
 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...