ಜೋಕಟ್ಟೆ ಗ್ರಾಮ ಪಂಚಾಯತ್ ಚುನಾವಣೆಗೆ ಎಸ್ಡಿಪಿಐ ಅಭ್ಯರ್ಥಿಗಳ ಘೋಷಣೆ

Source: SO News | By Laxmi Tanaya | Published on 12th October 2020, 5:15 PM | Coastal News | Don't Miss |

ಮೂಡಬಿದ್ರೆ : ಮುಡಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಕಟ್ಟೆ ಗ್ರಾಮ ಪಂಚಾಯತ್  ಚುನಾವಣೆಯಲ್ಲಿ ಮುಂದಿನ ಅವಧಿಗೆ SDPI ಪಕ್ಷದ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಘೋಷಣಾ ಕಾರ್ಯಕ್ರಮವು ಜೋಕಟ್ಟೆಯ ಬೈತುಲ್ ಹುದಾ ಗಾರ್ಡನ್ ನಲ್ಲಿ  SDPI ಕ್ಷೇತ್ರ ಸಮಿತಿ ಅಧ್ಯಕ್ಷ ಆಷಿಫ್ ಕೋಟೆಬಾಗಿಲು ಅಧ್ಯಕ್ಷತೆಯಲ್ಲಿ ನಡೆಯಿತು.

ಜೋಕಟ್ಟೆ ಗ್ರಾಮದ ಎಲ್ಲಾ 19 ಸ್ಥಾನಗಳಿಗೆ ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದ್ದು ಸೋಮವಾರ ಪ್ರಥಮ ಹಂತದಲ್ಲಿ 6 ಅಭ್ಯರ್ಥಿಗಳ ಹೆಸರನ್ನುಮಾತ್ರ ಘೋಷಿಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗುವುದು ಎಂದು ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್  ಫರಂಗಿಪೇಟೆ  ಮಾತನಾಡಿ, ಇತಿಹಾಸ ಹೊಂದಿರುವ ಪಕ್ಷದ ಸರ್ವಾಧಿಕಾರಿ ಧೋರಣೆ ವಿರುದ್ಧ ಸೆಟೆದು ನಿಲ್ಲಬೇಕು, ಜನರ ಮತ ಪಡೆದು ಜನೋಪಯೋಗಿ ಕೆಲಸಮಾಡುವುದು ಬಿಟ್ಟು MRPL ನಂತಹ ಕಂಪನಿಗಳ ಚಾಕರಿ ಮಾಡಿದ, ಕಮಿಷನ್ ದಂಧೆ ನಡೆಸಿದ ಜನಪ್ರತಿನಿಧಿ-ಪಕ್ಷಕ್ಕೆ ತಕ್ಕ ಪಾಠ ಕಲಿಸುವ ಕಾಲ ಕೂಡಿಬಂದಿದೆ. ಅವಕಾಶದಿಂದ ವಂಚಿತರಾಗದೆ ಜನರ ನಡುವೆ-ಜನರ ಸಮಸ್ಯೆಗೆ ಸ್ಪಂದಿಸುವ ಎಸ್ಡಿಪಿಐ ಪಕ್ಷಕ್ಕೆ ಮತ ನೀಡಿ ಈ ಗ್ರಾಮದ ‌ಸರ್ವ ಏಳಿಗೆಗೆ ಅವಕಾಶ ನೀಡಿ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ನಿಸಾರ್ ಮಳವೂರ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಿ ಶೇಕುಂಙ, ಹಾಜಿ ಅಹ್ಮದ್ ಬಾವ, ಹಾಜಿ ಮಾಸಿತ ಹುಸೈನ್, ಅಬ್ದುಲ್ ರಹಮಾನ್ ನಿರ್ಪರಿ, ಹೈದರ್ ಜಮಾತ್, ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಜೋಕಟ್ಟೆ ಚುನಾವಣಾ ಉಸ್ತುವಾರಿ ಜಮಾಲ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತ ಕೋರಿದರೆ ಸಾಹಿಲ್ ಅಬೂಬಕ್ಕರ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...