ಪ್ರ.ವ. ೨‘ಬಿ’ ಮೀಸಲಾತಿಯನ್ನು ಪುನರ್ ಸ್ಥಾಪಿಸುವಂತೆ ಎಸ್.ಡಿ.ಪಿ.ಐ ಆಗ್ರಹ

Source: SOnews | By Staff Correspondent | Published on 27th March 2023, 6:38 PM | Coastal News | Don't Miss |

ಭಟ್ಕಳ: ಮಾ.೨೪ರಂದು ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ಮುಸ್ಲಿಂ ಸಮುದಾಯಕ್ಕಿದ್ದ (ಬಿ) ಮೀಸಲಾತಿಯನ್ನು ರದ್ದುಪಡಿಸಿದ್ದು, ಅಸಂವಿಧಾನಿಕ ಹಾಗೂ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ ಎಂದು ಎಸ್.ಡಿ.ಪಿ.ಐ ಉತ್ತರಕನ್ನಡ ಜಿಲ್ಲಾಧ್ಯಕ್ಷ ತೌಫೀಖ್ ಬ್ಯಾರಿ ಆರೋಪಿಸಿದ್ದು ರಾಜ್ಯ ಸರ್ಕಾರ ಕೂಡಲೇ ಮುಸ್ಲಿಮ್ ಸಮುದಾಯದ ೨ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸಬೇಕು ಎಂದು ಆಗ್ರಹಿಸಿದ್ದಾರೆ. 

ಅವರು ಸೋಮವಾರ ಸಂಜೆ ಇಲ್ಲಿನ ಪ್ರವಾಸಿಬಂಗ್ಲೆ ಎದರು ಪ್ರತಿಭಟನೆ ನಡೆಸಿ ನಂತರ ಸಹಾಯಕ ಆಯುಕ್ತರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.   
ಸಂವಿಧಾನದÀಲ್ಲಿ ಧರ್ಮಾಧಾರಿತ ಮೀಸಲಾತಿ ಇಲ್ಲದಿರುವುದರಿಂದ ೨(ಬಿ) ಪ್ರವರ್ಗದಡಿಯಲ್ಲಿ ಇತರೆ ಹಿಂದುಳಿದ ವರ್ಗಗಳಂತೆ ಕರ್ನಾಟಕದ ಮುಸ್ಲಿಂ ಸಮುದಾಯ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗವೆಂದು ವೈಜ್ಞಾನಿಕ ಅಧ್ಯಯನದ ಮೂಲಕ ಗುರುತಿಸಿ ೨(ಬಿ) ಮೀಸಲಾತಿ ನೀಡಲಾಗಿತ್ತು. ಸ್ವಾತಂತ್ರ ನಂತರ ನಾಗನಗೌಡ ಸಮಿತಿ ವೆಂಕಟಸ್ವಾಮಿ ಆಯೋಗ ಮತ್ತು ೧೯೯೦ ರ ಚಿನ್ನಪ್ಪ ರಡ್ಡಿ ಆಯೋಗ ಕೂಡ ಮುಸ್ಲಿಮರನ್ನು ಹಿಂದುಳಿದ ವರ್ಗಗಳಿಗೆ ಸೇರಿಸಿರುವುದನ್ನು ನಾವು ಕಾಣಬಹುದು. ವಾಸ್ತವಾಂಶ ಹೀಗಿದ್ದರೂ ಸಹ ಮುಸ್ಲಿಂ ಸಮುದಾಯದ ಅಭಿವ್ರುದ್ಧಿಗೆ ತಡೆಯಿಡುವ ಹಾಗೂ ಮುಖ್ಯ ವಾಹಿನಿಗೆ ಬರದಂತೆ ನೋಡಿ ಕೊಳ್ಳುವ ಷಡ್ಯಂತ್ರದ ಮುಂದುವರಿದ ಭಾಗವಾಗಿ ೨(ಬಿ) ಮೀಸಲಾತಿ ರದ್ದುಗೊಳಿಸಲಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ. 

ಸಂವಿಧಾನದ ಆಶಯಗಳಂತೆ ಸರ್ಕಾರ ತನ್ನ ಆಡಳಿತ ನಡೆಸಬೇಕೆ ಹೊರತು ತನ್ನ ಗುಪ್ತ ಅಜೆಂಡಾವನ್ನು ಜಾರಿಗೊಳಿಸಲು ಅಲ್ಲ. ಈ ನಿಟ್ಟಿನಲ್ಲಿ ಮುಸ್ಲಿಮ್ ಸಮುದಾಯಕ್ಕೆ ನಿಗಧಿಯಾಗಿದ್ದ ೨(ಬಿ) ಮೀಸಲಾತಿಯನ್ನು ಮರು ಸ್ಥಾಪಿಸಬೇಕೆಂದು ಆಗ್ರಹಿಸಲಾಗಿದೆ. ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಮುಸ್ಲಿಮರ ಹಿತ ದೃಷ್ಟಿಯಿಂದ ಸರ್ಕಾರ ಕರ್ತವ್ಯ ನಿರ್ವಹಿಸಬೇಕೆಂದು ಗೌರವನ್ನಿತ ರಾಜ್ಯಪಾಲರು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿ ಪತ್ರದ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿಕೊಳ್ಳಲಾಗಿದೆ. 
ಈ ಸಂದರ್ಭದಲ್ಲಿ ಮುಖಂಡರಾದ ಅಮಾನುಲ್ಲಾ ಸಾಖೀಬ್ ಝೈನುದ್ದೀನ್ ಸೇರಿದಂತೆ ಕಾರ್ಯಕರ್ತರು ಇದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...