ಸಂವಿಧಾನ ವಿರೋಧಿ ಕಾರ್ಯಕ್ರಮಕ್ಕೆ ಅವಕಾಶ ಬೇಡ; ಎಸ್.ಡಿ.ಪಿ.ಐ ಯಿಂದ ಎಸ್.ಪಿ ಮತ್ತು ಎ.ಸಿ ಗೆ ಮನವಿ

Source: sonews | By Staff Correspondent | Published on 25th January 2019, 6:03 PM | Coastal News | Don't Miss |

ಭಟ್ಕಳ: ಹಿಂದೂ ಜನಜಾಗೃತಿ ಸಮಿತಿಯ ಹೆಸರಲ್ಲಿ ಜ.26 ರಂದು ಭಟ್ಕಳ ತಾಲೂಕಿನ ಶಿರಾಲಿ ಗ್ರಾಮದಲ್ಲಿ ನಡೆಸಲು ಉದ್ದೇಶಿಸಿರುವ ‘ಸಂವಿಧಾನ ವಿರೋಧಿ ಕಾರ್ಯಕ್ರಮಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಕೂಡದೆಂದು ಎಸ್.ಡಿ.ಪಿ.ಐ ತಾಲೂಕಾಧ್ಯಕ್ಷ ವಸೀಮ್ ಮನಗಾರ್ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಹಾಗೂ ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತರಲ್ಲಿ ಮನವಿ ಮಾಡಿದ್ದಾರೆ.

ಇಲ್ಲಿನ ಭಟ್ಕಳ ವೃತ್ತ ಪೊಲೀಸ್ ನಿರೀಕ್ಷಕರ ಮೂಲಕ ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತರಿಗೆ ಮನವಿ ಪತ್ರವನ್ನು ಸಲ್ಲಿಸಿರುವ ಅವರು, ಹಿಂದೂ ರಾಷ್ಟ್ರದ ಜಾಗೃತಿ ವಿಚಾರಕ್ಕೆ ಸಂಬಂಧಿಸಿದಂತೆ ‘ಹಿಂದೂಗಳೇ, ಎಲ್ಲರೂ ಒಟ್ಟಾಗಿ ಹಿಂದೂ ರಾಷ್ಟ್ರದ ಸ್ಥಾಪನೆ ಮಾಡೋಣ’, ಹಿಂದೂಗಳೇ ಸಭೆಗೆ ಉಪಸ್ಥಿತರಿದ್ದು ಹಿಂದೂ ಏಕತಾ ಪ್ರದರ್ಶಿಸಿ ಎಂಬಂತಹ ಪ್ರಜಾಪ್ರಭುತ್ವ ಜಾತ್ಯಾತೀತ ದೇಶದವಾದ ಭಾರತದಲ್ಲಿ ಹಿಂದೂ ರಾಷ್ಟ್ರವನ್ನು ಮಾಡುವ ಬಗ್ಗೆ ಸಂವಿಧಾನ ವಿರುದ್ಧವಾದ ಕಾರ್ಯಕ್ರಮ ನಡೆಸುತ್ತಿರುವುದು ಕಂಡು ಬಂದಿದ್ದು ಇದು ದೇಶವನ್ನು ಒಡೆಯುವ ಸಂವಿಧಾನ ವಿರೋಧಿ ದೇಶವಿರೋಧಿ ಕೃತ್ಯವಾಗಿದ್ದು ಇಂತಹ ಕಾರ್ಯಕ್ರಮಕ್ಕೆ ಅವಕಾಶ ನೀಡಕೂಡದೆಂದು ಮನವಿಯಲ್ಲಿ ತಿಳಿಸಲಾಗಿದೆ.

ತಾಲೂಕಿನ ಸಾರ್ವಜನಿಕ ಸ್ಥಳಗಳಲ್ಲಿ ಸಂವಿಧಾನ ವಿರೋಧಿ ಕಾರ್ಯಕ್ರಮದ ಬ್ಯಾನರ್‍ಗಳು ವ್ಯಾಪಕವಾಗಿ ಹಾಕಲಾಗಿದ್ದು ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪ್ರಶ್ನಿಸುವಂತಿದೆ. ಆದ್ದರಿಂದ ಪೊಲೀಸ್ ಇಲಾಖೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ ಸನಾತನ ಸಂಸ್ಥೆಗೆ ಸಂಬಂಧಿಸಿದ ಹಿಂದೂ ಜನಜಾಗೃತಿ ಸಭೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಕೂಡದು ಮತ್ತು ಇದರ ಸಂಘಟಕರ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಅವರು ಮನವಿಪತ್ರದಲ್ಲಿ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಜಿಲ್ಲಾ ಸಮಿತಿಯ ಅಬ್ದುಲ್ ಅಝೀಮ್, ಭಟ್ಕಳ ತಾಲೂಕು ಪಿ.ಎಫ್.ಐ ಅಧ್ಯಕ್ಷ ಅಬ್ದುಲ್ ಕರೀಂ, ಸಖೀಫ್ ಉಪಸ್ಥಿತರಿದ್ದರು. 

Read These Next

ಎಸ್.ಎಸ್.ಎಲ್.ಸಿ ಪುನರ್ಬಲನ ತರಗತಿ; ಶಿಕ್ಷಕರ ಹಿತ ಕಾಪಾಡುವಂತೆ ಐಟಾ (AIITA) ದಿಂದ ಸರ್ಕಾರಕ್ಕೆ ಮನವಿ

ಗೌರವಾನ್ವಿತ ಪ್ರಧಾನ ಕಾರ್ಯದರ್ಶಿಯವರಿಗೆ ಸಮಗ್ರ ಮನವಿಯನ್ನು ಸಲ್ಲಿಸಿದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಬೆಂಗಳೂರು ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...