ಉತ್ತರಕನ್ನಡ ಜಿಲ್ಲೆಯಲ್ಲಿ ಜೂನ್ 14ರಿಂದ 21ರವರೆಗೆ ಸೆಮಿ ಲಾಕ್ ಡೌನ್. ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಮುಂದುವರಿಕೆ.

Source: SO News | By Laxmi Tanaya | Published on 13th June 2021, 12:59 PM | Coastal News | Don't Miss |

ಕಾರವಾರ : ಉತ್ತರಕನ್ನಡ ಜಿಲ್ಲೆಯಾದ್ಯಂತ ಜೂನ್ 14ರಿಂದ 21 ರವರೆಗೆ ಅನ್ ಲಾಕ್ ಮಾರ್ಗಸೂಚಿಯನ್ನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೊರಡಿಸಿದ್ದಾರೆ.

ಬೆಳಿಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ ಎರಡು ಗಂಟೆಯವರೆಗೆ ಸಾರ್ವಜನಿಕರಿಗೆ ದಿನಸಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ.

ಆದರೆ ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ಇರುವುದಿಲ್ಲ. ಬೆಳಿಗ್ಗೆ 6-00 ಗಂಟೆಯಿಂದ ಮಧ್ಯಾಹ್ನ 2-00 ಗಂಟೆಯವರೆಗೆ ಅನುಮತಿಸಲಾದ ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ಬೆಳಿಗ್ಗೆ 8-00 ಗಂಟೆಯಿಂದ ಮಧ್ಯಾಹ್ನ 2-00 ಗಂಟೆಯವರೆಗೆ ಮಾತ್ರ ಕೋವಿಡ್ ಮಾರ್ಗಸೂಚಿಯ ಪಾಲನೆಯೊಂದಿಗೆ ಅನುಮತಿಸಿದೆ.

 ಮಾರಾಟದ ಸಮಯದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಮಾಸ್ಟ್ ಧರಿಸುವುದು ಮುಂತಾದ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಸ್ಥಳೀಯ ಆಡಳಿತ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಖಚಿತಪಡಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ.  ಈ ಅವಧಿಯಲ್ಲಿ ನಿರ್ಬಂಧಿತ ವಾಹನಗಳ ಸಂಚಾರಕ್ಕೆ ಅವಕಾಶವಿದೆ.

ತಹಶೀಲ್ದಾರರು ಆಯಾ ತಾಲೂಕಾ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಕಂಡುಬಂದಲ್ಲಿ ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಅಂತಹ ಪ್ರದೇಶಗಳನ್ನು ಮೈಕ್ರೋ ಕಂಟೈನ್ ಮೆಂಟ್ ವಲಯವನ್ನಾಗಿ ಘೋಷಣೆ ಮಾಡಿ ಸಂಪೂರ್ಣ ಲಾಕ್ ಡೌನ್ ಮಾಡಬಹುದು.  ಸದ್ರಿ ಪ್ರದೇಶಗಳಲ್ಲಿ ದಿನನಿತ್ಯದ ಅಗತ್ಯ ವಸ್ತುಗಳು, ತರಕಾರಿ ಹಾಗೂ ದಿನಸಿ ಯನ್ನು ಮನೆ ಮನೆಗೆ ಮಾರಾಟ ಮಾಡಲು ಸ್ಥಳೀಯ ಆಡಳಿತಗಳು ಸೂಕ್ತ ವ್ಯವಸ್ಥೆ ಮಾಡಲಾಗುತ್ತದೆ.

 ಜಿಲ್ಲೆಯ ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಯನ್ನ ಪಾಲಿಸಬೇಕು. ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಸಾರ್ವಜನಿಕರು ತಮ್ಮ ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ.

ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ವಿಭಾಗ 51 ರಿಂದ 60 ರನ್ವಯ, ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರನ್ವಯ ಹಾಗೂ ಸಾಂಕ್ರಾಮಿಕ ರೋಗ ಕಾಯ್ದೆ 2020 ರ ವಿಭಾಗ 4 5 ಮತ್ತು 10 ರಂತೆ ಕ್ರಮಗಳನ್ನು ಜರುಗಿಸಲಾಗುವುದು‌ ಎಚ್ಚರಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...