600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ

Source: sonews | By MV Bhatkal | Published on 10th October 2021, 7:35 PM | State News | Don't Miss |

ಬೆಂಗಳೂರು:ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ (72) ಇಂದು ಮುಂಜಾನೆ ವಿವಶರಾಗಿದ್ದಾರೆ. ಸುಮಾರು 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅವರು ಕಳೆದ ಹಲವು ದಿನಗಳಿಂದ ಗ್ಯಾಂಗ್ರಿನ್ ರೋಗದಿಂದಾಗಿ ಬಳಲುತ್ತಿದ್ದರು. ನಡೆದಾಡಲು ಕೂಡ ಆಗದಂತಹ ಪರಿಸ್ಥಿತಿಯಲ್ಲಿ ಇದ್ದರು.
ಹಲವು ದಿನಗಳ ಹಿಂದೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯಲ್ಲಿ ಹೃದಯಾಘಾತ ಸಂಭವಿಸಿತ್ತು. ವೈದ್ಯರ ಸತತ ಪ್ರಯತ್ನದಿಂದ ಆಗ ಜೀವ ಉಳಿಯುತ್ತಾದರೂ ಗ್ಯಾಂಗ್ರಿನ್‍ನಿಂದ ಬಹಳಷ್ಟು ನೊಂದಿದ್ದರು. ಆರೋಗ್ಯ ಹದಗೆಟ್ಟು ಹಾಸಿಗೆ ಹಿಡಿದಿದ್ದ ಅವರಿಗೆ ಚಿಕಿತ್ಸೆ ಕೊಡಿಸಲು ಕುಟುಂಬಸ್ಥರು ಕೂಡ ಹಿಂದೇಟು ಹಾಕುತ್ತಿದ್ದರು.
ಮಾತನಾಡಿದ್ದ ಸತ್ಯಜಿತ್ ಅವರು ಕಷ್ಟ ಕಾಲದಲ್ಲಿ ಯಾರೂ ಕೂಡ ನೆರವಿಗೆ ಬರುವುದಿಲ್ಲ. ಕೆಲವರು 500, 1000, 2000 ರೂ.ಗಳನ್ನು ನೀಡಿ ಸಮಾಧಾನ ಮಾಡುತ್ತಿದ್ದರು. ಅದೆಲ್ಲಾ ವೆಚ್ಚವಾಗುತ್ತಿತ್ತು.ಔಷಧಕ್ಕಾಗಿ ಪ್ರತಿ ತಿಂಗಳು 30 ರಿಂದ 40 ಸಾವಿರ ರೂ. ಬೇಕಾಗುತ್ತಿತ್ತು. ಅದನ್ನು ಹೊಂಚಿ ಕೊಳ್ಳುವುದೇ ಪ್ರಯಾಸವಾಗಿತ್ತು ಎಂದು ನೋವು ತೋಡಿಕೊಂಡಿದ್ದರು.
 
ಮೂಲತಃ ಅವರ ಹೆಸರು ಸಯ್ಯದ್ ನಿಜಾಮುದ್ಜೀನ್ ಸತ್ಯಜಿತ್ ಎಂದಿದ್ದರು ಕೂಡ ಅವರನ್ನು ಸತ್ಯಜಿತ್ ಎಂಬ ಹೆಸರಿನಲ್ಲಿ ಖಳನಾಯಕ ಹಾಗೂ ಪೋಷಕ ಪಾತ್ರಗಳಲ್ಲಿ ಹಲವಾರು ಚಿತ್ರಗಳಲ್ಲಿ ಮನೋಜ್ಞ ಅಭಿನಯವನ್ನು ನೀಡಿದ್ದರು.ಕೇವಲ 10ನೆ ತರಗತಿ ಓದಿದ್ದರೂ ಕೂಡ ಅವರಿಗೆ ಬಣ್ಣದ ಲೋಕದ ಮೇಲೆ ಅಪಾರವಾದಂತಹ ಆಸಕ್ತಿ ಇತ್ತು. ಒಂದು ಕಾಲದಲ್ಲಿ ಬಹು ಬೇಡಿಕೆಯ ನಟರಾಗಿದ್ದ ಅವರು ಕೊನೆಯ ದಿನಗಳಲ್ಲಿ ಅನಾರೋಗ್ಯದಿಂದ ನರಳಿ ಕೊನೆಯುಸಿರೆಳೆದಿರುವುದು ವಿಪರ್ಯಾಸ.
ಪತ್ನಿ ಮೂವರು ಮಕ್ಕಳು ಹಾಗೂ ಅಪಾರ ಅಭಿಮಾನಿಗಳನ್ನು ಸತ್ಯಜಿತ್ ಅಗಲಿದ್ದಾರೆ. 1986ರಲ್ಲಿ ಅರುಣರಾಗ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ಖ್ಯಾತ ನಟರ ಜತೆ ನಟಿಸಿ ಸೈ ಎನಿಸಿಕೊಂಡಿದ್ದರು. ಕಳೆದ 4 ವರ್ಷಗಳ ಹಿಂದೆ ಅವರಿಗೆ ಗ್ಯಾಂಗ್ರಿನ್‍ಗೆ ತುತ್ತಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆಗ ರಾಜ್ಯ ಸರ್ಕಾರ ಧನ ಸಹಾಯ ಮಾಡಿತ್ತು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...