ಕೇರಳ; ಕಾಂಗ್ರೇಸ್ ಹಿರಿಯ ಮುಖಂಡ ಥಾಮಸ್ ನಿಧನ

Source: sonews | By Staff Correspondent | Published on 27th September 2020, 3:45 PM | National News |

ಕೊಟ್ಟಾಯಂ: ಕೇರಳದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಚಂಗನಶೇರಿ ಶಾಸಕ ಸಿ.ಎಫ್. ಥಾಮಸ್ ಜಿಲ್ಲೆಯ ತಿರುವಲ್ಲದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ನಿಧನರಾದರು ಪಕ್ಷದ ಮೂಲಗಳು ತಿಳಿಸಿವೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

ಥಾಮಸ್ ಅವರು ಕೆಲವು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು.

ಥಾಮಸ್ ಅವರು 1980ರಿಂದ ಸತತವಾಗಿ ಚಂಗನಶೇರಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2001-2006ರ ಅವಧಿಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರಕಾರದಲ್ಲಿ ಗ್ರಾಮೀಣಾಭಿವೃದ್ದಿ, ನೋಂದಣಿ, ಖಾದಿ ಹಾಗೂ ಗ್ರಾಮೀಣ ಕೈಗಾರಿಕೆಗಳ ಖಾತೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ವಿದ್ಯಾರ್ಥಿಯಾಗಿದ್ದಾಗಲೇ ರಾಜಕೀಯಕ್ಕೆ ಕಾಲಿಟ್ಟ ಥಾಮಸ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ್ನು ಸೇರ್ಪಡೆಯಾದರು. ಬಳಿಕ ಚಂಗನಶೇರಿ ಪಟ್ಟಣ(ಪಶ್ಚಿಮ)ಮಂಡಲಂನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಕೇರಳ ಕಾಂಗ್ರೆಸ್‌ಗೆ ಸೇರಿದ ಅವರು ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು. ಕೇರಳ ಕಾಂಗ್ರೆಸ್(ಎಂ) ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...