ವಿಧಾನಪರಿಷತ್‌ನ 7 ಸ್ಥಾನಗಳಿಗೆ ಅವಿರೋಧ ಆಯ್ಕೆ

Source: Vb | By I.G. Bhatkali | Published on 28th May 2022, 3:42 PM | State News |

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಜೂ.3ರಂದು ನಿಗದಿಯಾಗಿದ್ದ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಶುಕ್ರವಾರ ಘೋಷಿಸಿದರು.

ಮೇ 24ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು, ಮೇ 25 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಮೇ 27 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿತ್ತು ಎಂದು ಅವರು ತಿಳಿಸಿದರು. ಏಳು ಸ್ಥಾನಗಳಿಗೆ ಏಳು ಅಭ್ಯರ್ಥಿಗಳು ಮಾತ್ರ ಅಂತಿಮ ಕಣದಲ್ಲಿ ಉಳಿದಿದ್ದ ಕಾರಣ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಶಾಲಾಕ್ಷಿ ಹೇಳಿದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್ ಹಾಗೂ ಎಸ್.ಕೇಶವಪ್ರಸಾದ್, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಕೆ.ಅಬ್ದುಲ್ ಜಬ್ಬಾರ್ ಹಾಗೂ ಎಂ.ನಾಗರಾಜ ಯಾದವ್ ಮತ್ತು ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಟಿ.ಎ. ಶರವಣ ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳಾಗಿ ದ್ದಾರೆ ಎಂದು ಅವರು ಪ್ರಕಟಿಸಿದರು. ಇಂದು ನಾಮ ಪತ್ರ ಹಿಂಪಡೆಯುವ ಸಮಯ ಮೀರಿದ ನಂತರ ನಾಮಪತ್ರ ಸಲ್ಲಿಸಿದ್ದ 7 ಅಭ್ಯರ್ಥಿಗಳಿಗೆ ಚುನಾ ವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವಿರೋಧ ಆಯ್ಕೆಯ ಪ್ರಮಾಣ ಪತ್ರಗಳನ್ನು ವಿತರಿಸಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...