ಹೊಸಪೇಟೆ: ಲಾರಿ-ಆಟೋಗಳ ನಡುವೆ ಭೀಕರ ಅಪಘಾತ; ಏಳು ಮಂದಿ ಮೃತ್ಯು

Source: S O News | By I.G. Bhatkali | Published on 1st July 2023, 7:48 AM | State News |

ವಿಜಯನಗರ: ಎರಡು ಆಟೊ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೊದಲ್ಲಿದ್ದ 7 ಮಂದಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಸೇತುವೆ ಬಳಿ ಶುಕ್ರವಾರ ವರದಿಯಾಗಿದೆ.

ಮೃತರೆಲ್ಲರೂ ಬಳ್ಳಾರಿಯ ಕೌಲ್ ಬಝಾರ್ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬಳ್ಳಾರಿಯಿಂದ ತುಂಗಭದ್ರಾ ಅಣೆಕಟ್ಟು ವೀಕ್ಷಿಸಲು ಎರಡು ಆಟೊದಲ್ಲಿ ಒಟ್ಟು 19 ಮಂದಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಉಕ್ಕಿನ ಸರಳು ಸಾಗಿಸುವ ಖಾಲಿ ಟ್ರಕ್ ಆಟೊಗೆ ಢಿಕ್ಕಿ ಹೊಡೆದಿದ್ದು, ಈ ವೇಳೆ ಒಂದು ಆಟೊ ಸೇತುವೆಯ ಕೆಳಗೆ ಬಿದ್ದಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...