ಕಾರವಾರ: ಜಿಲ್ಲೆಯಲ್ಲಿ ಬುಧವಾರ 7 ನಾಮಪತ್ರ ಸಲ್ಲಿಕೆ

Source: S O news | By I.G. Bhatkali | Published on 18th April 2024, 12:48 AM | Coastal News |

ಕಾರವಾರ :12 ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಬುಧವಾರ ಜಿಲ್ಲೆಯಲ್ಲಿ  ಒಟ್ಟು 7 ನಾಮಪತ್ರಗಳು ಸಲ್ಲಿಕೆಯಾಗಿವೆ.

ಪಕ್ಷೇತರ ಅಭ್ಯರ್ಥಿ ರೂಪಾ ನಾಯ್ಕ್ ಮತ್ತು ರಾಜಶೇಖರ ಹಿಂಡಲಗಿ ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಈ ಮೊದಲ ನಾಮಪತ್ರ ಸಲ್ಲಿಸಿದ್ದ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಗಣಪತಿ ಹೆಗಡೆ, ಕೆ.ಆರ್.ಎಸ್. ಪಕ್ಷದ ವಿನಾಯಕ ನಾಯಕ್, ಪಕ್ಷೇತರ ಅಭ್ಯರ್ಥಿಗಳಾದ ಕೃಷ್ಣಾಜಿ ಪಾಟೀಲ್, ನಿರಂಜನ್ ಉದಯ ಸಿನ್ಹಾ ಸರ್ದೇಸಾಯಿ, ಕೃಷ್ಣ ಹನುಮಂತಪ್ಪ ಬಳಿಗಾರ್ ಇಂದು ಮತ್ತೊಮ್ಮೆ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.

ಜಿಲ್ಲೆಯಲ್ಲಿ ಇದುವರೆಗೆ 12 ಅಭ್ಯರ್ಥಿಗಳಿಂದ ಒಟ್ಟು  21 ನಾಮಪತ್ರಗಳು  ಸಲ್ಲಿಕೆಯಾಗಿವೆ. ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿದೆ. 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, 22 ರಂದು  ನಾಮಪತ್ರಗಳನ್ನು  ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 7 ರಂದು  ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ. 

Read These Next