ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರ ಕೊರತೆ 'ಬರ ಷರತ್ತುಸಡಿಲಿಕೆಕೋರಿ ಕೇಂದ್ರಕ್ಕೆ ಸಿಎಂ ಪತ್ರ

Source: Vb | By I.G. Bhatkali | Published on 14th August 2023, 6:48 AM | State News |

ಬೆಂಗಳೂರು: ರಾಜ್ಯದಲ್ಲಿ ಮಂಗಾರು ಮಳೆ ಕೊರತೆ ಉಂಟಾಗಿರುವ ಕಾರಣ ಬರಗಾಲ ಘೋಷಣೆ ಷರತ್ತುಗಳನ್ನು ಸಡಿಲಿಕೆ ಮಾಡಬೇಕೆಂದು ಆಗ್ರಹಿಸಿ ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಪ್ರಸಕ್ತ ಮಾನ್ಸೂನ್ ಋತುವಿನಲ್ಲಿ ಕರ್ನಾಟಕದಲ್ಲಿ ಸಹಜವಾಗಿ ಆಗಬೇ ಕಾದ 336 ಮಿ.ಮೀ. ಮಳೆಯ ಬದಲು 234 ಮಿ.ಮೀ. ಮಳೆ ಆಗಿದೆ. ಸುಮಾರು ಶೇ.34ರಷ್ಟು ಮಳೆಯ ಕೊರತೆಯಾಗಿದೆ. ವಿಳಂಬ ಮಾನ್ಸೂನ್‌ನಿಂದ ಜೂನ್ ತಿಂಗಳ ಲ್ಲಿಯೇ ಸುಮಾರು ಶೇ.56ರಷ್ಟು ಮಳೆಯ ಕೊರತೆ ಎದುರಾಗಿದೆ. ಹಲವು ತಾಲೂಕುಗಳಲ್ಲಿ ಬರ ರೀತಿಯ ಪರಿಸ್ಥಿತಿ ಇದೆ. ಕಠಿಣ ಮಾನದಂಡಗಳಿಂದ ಹಲವು ತಾಲೂಕುಗಳಲ್ಲಿ ಬರ ಎಂದು ಘೋಷಣೆ ಮಾಡಲು ಸಾಧ್ಯವಾಗು ತಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.

ಬರ ಘೋಷಣೆ ಮಾಡಬೇಕಾದರೆ ರಾಜ್ಯ ಸರಕಾರಕ್ಕೆ ರೈತರು ಬಿತ್ತನೆ ಮಾಡ ಬಾರದು ಎಂಬಸೂಚನೆಯ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಎಂಬ ಷರತ್ತು ಇದೆ. ರೈತರಿಗೆ ಈ ರೀತಿಯ ಸೂಚನೆ ನೀಡುವುದು ಅಸಾಧ್ಯವಾಗಿರುವ ಕಾರಣ, ಈ ಷರತ್ತನ್ನು ಪ್ರಮುಖವಾಗಿ ಕೈಬಿಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ ಬರ ನಿರ್ವಹಣೆ 2016 ನಿಯಮ ದಡಿ ಬರ ಘೋಷಣೆ ಮಾಡಲು

ಕಠಿಣ ಮಾನದಂಡಗಳಿವೆ. ಈ ಕಠಿಣ ಮಾನದಂಡವನ್ನು ಸಡಿಲಿಸುವುದು ಅತ್ಯಗತ್ಯವಾಗಿದೆ. ಜತೆಗೆ, ಬರಪರಿಹಾರಕ್ಕೆ ಕೇಂದ್ರ ಶೇ.75ರಷ್ಟು ಅನುದಾನ ನೀಡಿದರೆ, ರಾಜ್ಯಸರಕಾರ ಶೇ.25ರಷ್ಟು ಅನುದಾನ ನೀಡಲಿದೆ. ಹೀಗಾಗಿ ಕೇಂದ್ರದ ಷರತ್ತುಗಳನ್ನು ಪಾಲನೆ ಮಾಡಬೇಕಾದ ಅನಿವಾರ್ಯತೆ ರಾಜ್ಯ ಸರಕಾರಕ್ಕಿದೆ. ರಾಜ್ಯದ ರೈತರ ಹಿತದೃಷ್ಟಿಯಿಂದ ಕೇಂದ್ರ ಸರಕಾರ ಷರತ್ತುಗಳನ್ನು ಸಡಿಲಿಕೆ ಮಾಡುವಂತೆ ಪತ್ರದ ಮೂಲಕ ಮುಖ್ಯಮಂತ್ರಿ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...