ಲೈಂಗಿಕ ಕಿರುಕುಳ ಆರೋಪ: ಬಾಲಿವುಡ್ ನಟನ ಬಂಧನ

Source: sonews | By Staff Correspondent | Published on 3rd November 2020, 11:50 PM | National News | Don't Miss |

ಮುಂಬೈ: ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ  ಆರೋಪದಲ್ಲಿ ಬಾಲಿವುಡ್ ನಟ ವಿಜಯ ರಾಜ್ ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ. 

ನಟನನ್ನು ಮಹಾರಾಷ್ಟ್ರದ ಗೊಂಡಿಯಾದಿಂದ ಬಂಧಿಸಲಾಗಿದೆ. ನಟನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಗೊಂಡಿಯಾದ ಹೆಚ್ಚುವರಿ ಪೊಲೀಸ್ ವರಿಷ್ಠ ಅತುಲ್ ಕುಲಕರ್ಣಿ ಹೇಳಿದ್ದಾರೆ.

ವಿಜಯ್ ವಿರುದ್ಧ ಮಹಿಳೆಯೊಬ್ಬರು ಗೊಂಡಿಯಾದ ರಾಮನಗರ ಪೊಲೀಸ್ ಠಾಣೆಯಲ್ಲಿ ನ.2 ರಂದು ರಾತ್ರಿ ದೂರು ದಾಖಲಿಸಿದ್ದರು.  ದೂರಿನ ಆಧಾರದಲ್ಲಿ ನಟನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ರಾಮನಗರ ಪೊಲೀಸರು ವಿಜಯ್ ಅವರನ್ನು ಮಂಗಳವಾರ ಗೊಂಡಿಯಾ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು, ನ್ಯಾಯಾಲಯ ಜಾಮೀನು ನೀಡಿದೆ.

ಮಧ್ಯಪ್ರದೇಶದಲ್ಲಿ ಸಿನೆಮಾ ಚಿತ್ರೀಕರಣದ ವೇಳೆ ವಿಜಯ್ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ ಆರೋಪ ಹೊರಿಸಲಾಗಿತ್ತು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...