ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ. ಪೋಕ್ಸೋ ಕಾಯ್ದೆಯಡಿ ಇಬ್ಬರ ಬಂಧನ.

Source: SO News | By Laxmi Tanaya | Published on 7th March 2021, 12:02 PM | Coastal News |

ಭಟ್ಕಳ:  ತಾಲೂಕಿನ ಶಿರಾಲಿ ಚಿತ್ರಾಪುರದಲ್ಲಿ ನಡೆದ 14 ವರ್ಷ ಪ್ರಾಯದ ಶಾಲಾ ಬಾಲಕಿಯೋರ್ವಳನ್ನು ಪುಸಲಾಯಿಸಿ, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

  ಪೋಕ್ಸೋ ಕಾಯ್ದೆಯಡಿ  ಆರೋಪಿಗಳನ್ನು ಬಂಧಿಸಲಾಗಿದೆ. ಶಿರಸಿ ಮೂಲದ ರವಿ ಪಟಗಾರ (35) ಹಾಗೂ  ಇಲ್ಲಿನ ಶಿರಾಲಿ ಗುಡಿಹಿತ್ತಲ್ ನಿವಾಸಿ ಶಿವರಾಜು ನಾಯ್ಕ (22) ಎಂದು ಗುರುತಿಸಲಾಗಿದೆ. 

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಾಲಕಿಯ ತಾಯಿಯು ನೀಡಿದ ದೂರಿನಲ್ಲಿ ರವಿ ಪಟಗಾರ ಎಂಬಾತನ ಮೇಲೆ ದೂರು ನೀಡಲಾಗಿತ್ತಾದರೂ, ವಿಚಾರಣೆಯ ವೇಳೆ ಶಿವರಾಜು ನಾಯ್ಕನ ಹೆಸರೂ ಬೆಳಕಿಗೆ ಬಂದಿತ್ತು. 9ನೇ ತರಗತಿಯನ್ನು ಓದುತ್ತಿದ್ದ ಪಕ್ಕದ ಸಿಗಂಧೂರು ಮೂಲದ ಸಂತ್ರಸ್ತ ಶಾಲಾ ಬಾಲಕಿಯು ಈ ಹಿಂದೆ ತನ್ನ ತಾಯಿಯೊಂದಿಗೆ ಚಿತ್ರಾಪುರದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದಳು. ನಂತರ ಮುರುಡೇಶ್ವರ ತೆರ್ನಮಕ್ಕಿಯಲ್ಲಿ ಇನ್ನೊಂದು ಮನೆಯನ್ನು ಬಾಡಿಗೆಗೆ ಪಡೆದು ನೆಲೆಸಿದ್ದರು. ಸಂತ್ರಸ್ತ ಬಾಲಕಿಯು ತನ್ನ ಗೆಳತಿಯ ಮನೆಗೆ ಆಗಾಗ್ಗೆ  ಬಂದು ಹೋಗುತ್ತಿದ್ದು, ಆರೋಪಿಗಳೊಂದಿಗಿನ ಪರಿಚಯ ಸ್ನೇಹಕ್ಕೆ ತಿರುಗಿ ಆಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ.

 ಸದ್ಯ ಸಂತ್ರಸ್ತ ಬಾಲಕಿಯು ಕಾರವಾರ ಸಾಂತ್ವನ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Read These Next

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ 3 ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಮನೆಯಲ್ಲೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹದ ಜೊತೆ ಅನ್ನಾಹಾರ ಇಲ್ಲದೇ ಮೂರು ನಾಲ್ಕು ದಿನ ಕಳೆದ 32ರ ಹರೆಯದ ...

ರಸ್ತೆಯಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲು

ಸ್ಥಳೀಯ ಜನರ ಸಹಕಾರದಿಂದ ಹನೀಫಾಬಾದ್ ರಸ್ತೆಯಲ್ಲಿ ಮೂರು, ಜಾಮಿಯಾಬಾದ್ ರಸ್ತೆಯಲ್ಲಿ ಮೂರು, ಮಿನಾ ರಸ್ತೆಯಲ್ಲಿ ಒಂದು ಕ್ಯಾಮೆರಾ ...