ಶಕ್ತಿ ಯೋಜನೆ : ವಾಯವ್ಯ ಸಾರಿಗೆ ಸಂಸ್ಥೆಯ ಚಾಲಕ-ನಿರ್ವಾಹಕರಿಗೆ ವ್ಯವಸ್ಥಾಪಕ ನಿರ್ದೇಶಕರಿಂದ ನಗದು ಬಹುಮಾನ

Source: SO News | By Laxmi Tanaya | Published on 20th July 2023, 10:18 PM | State News | Don't Miss |

ಹುಬ್ಬಳ್ಳಿ: "ಶಕ್ತಿ"  ಯೋಜನೆಯ ಯಶಸ್ಸಿಗಾಗಿ ಮೊದಲು ತಿಂಗಳು ಗರಿಷ್ಠ ದಿನಗಳ ಕರ್ತವ್ಯ ನಿರ್ವಹಿಸಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ನಗದು ಬಹುಮಾನ ಮಂಜೂರು ಮಾಡಿದ್ದಾರೆ.

ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಆರಂಭಿಸಲಾಗಿರುವ ಕರ್ನಾಟಕದ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ರಾಜ್ಯದೊಳಗೆ  ಉಚಿತ ಪ್ರಯಾಣದ "ಶಕ್ತಿ" ಯೋಜನೆಗೆ ನಿರೀಕ್ಷೆಗೂ ಮೀರಿ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಯೋಜನೆ ಜಾರಿಯಾಗಿ ಒಂದೂವರೆ ತಿಂಗಳು ಕಳೆದರೂ ಮಹಿಳೆಯರ ಉತ್ಸಾಹ ತಗ್ಗಿಲ್ಲ. 

ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನದಲ್ಲಿ ಸಂಸ್ಥೆಯ ಎಲ್ಲಾ  ಸಿಬ್ಬಂದಿಗಳು  ಅದರಲ್ಲೂ ಮುಖ್ಯವಾಗಿ ಪ್ರಯಾಣಿಕರೊಂದಿಗೆ ನೇರ ಸಂಪರ್ಕಕ್ಕೆ ಬರುವ  ಚಾಲನಾ ಸಿಬ್ಬಂದಿಗಳ ಕಾರ್ಯಕ್ಷಮತೆ ಶ್ಲಾಘನೀಯ ಎಂದು ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಅಭಿನಂದಿಸಿದ್ದಾರೆ. ಚಾಲನಾ ಸಿಬ್ಬಂದಿಗಳ ಹಾಜರಾತಿ ಉತ್ತೇಜಿಸುವ ದೃಷ್ಟಿಯಿಂದ ಯೋಜನೆಯ ಮೊದಲ ತಿಂಗಳ ಅವಧಿಯಲ್ಲಿ ಅತೀ ಹೆಚ್ಚು ದಿನ ಕರ್ತವ್ಯ ನಿರ್ವಹಿಸಿದ ಚಾಲಕರು, ನಿರ್ವಾಹಕರುಗಳಿಗೆ  ನಗದು ಬಹುಮಾನ ಮಂಜೂರು ಮಾಡಿದ್ದಾರೆ.  ಜೂನ್ 11 ರಿಂದ ಜುಲೈ10 ವರೆಗಿನ ಅವಧಿಯಲ್ಲಿ ಗರಿಷ್ಠ ದಿನಗಳ  ಕರ್ತವ್ಯ ನಿರ್ವಹಿಸಿದ ಪ್ರತಿ ಘಟಕದ 5 ಚಾಲಕರು ಹಾಗೂ 5 ನಿರ್ವಾಹಕರಿಗೆ ನಗದು ಬಹುಮಾನ ಮಂಜೂರು ಮಾಡಲಾಗಿದೆ. 

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಆರು ಜಿಲ್ಲೆಗಳ 9 ಸಾರಿಗೆ ವಿಭಾಗಗಳ  275 ಚಾಲಕರು ಹಾಗೂ 275 ನಿರ್ವಾಹಕರು ಸೇರಿದಂತೆ ಒಟ್ಟು 550 ಚಾಲನಾ ಸಿಬ್ಬಂದಿಗಳು ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರಕ್ಕೆ ಭಾಜನರಾಗಿದ್ದಾರೆ.

ಕೇಂದ್ರ ಕಚೇರಿಯ ಹಾಗೂ ವಿಭಾಗದ ಹಿರಿಯ ಅಧಿಕಾರಿಗಳು ಘಟಕಗಳಿಗೆ ತೆರಳಿ ಇತರೆ ಸಹೋದ್ಯೋಗಿ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರಗಳನ್ನು ವಿತರಿಸಿದರು.

ವಿಭಾಗವಾರು ಚಾಲಕರು- ನಿರ್ವಾಹಕರ ಮಾಹಿತಿ : 

ವಿಭಾಗ /ಚಾಲಕ-ನಿರ್ವಾಹಕರು

ಹು-ಧಾ ನಗರ ಸಾರಿಗೆ  40,  ಹುಬ್ಬಳ್ಳಿ ಗ್ರಾಮಾಂತರ 50,  ಧಾರವಾಡ  50, ಬೆಳಗಾವಿ 60,  ಚಿಕ್ಕೋಡಿ  70,  ಬಾಗಲಕೋಟೆ  80,  ಗದಗ  80,  
ಹಾವೇರಿ 60,   ಉತ್ತರ ಕನ್ನಡ  60.                                                                                

ಶಕ್ತಿ ಯೋಜನೆ ಜಾರಿಯಾದ ದಿನ ಜೂನ್ 11ರಿಂದ ಜುಲೈ 19 ರವರೆಗೆ ಒಟ್ಟು  5.42 ಕೋಟಿ ಮಹಿಳೆಯರು ಉಚಿತ ಪ್ರಯಾಣ  ಮಾಡಿದ್ದಾರೆ. ಜೂನ್ 11ರಿಂದ 30 ರವರೆಗೆ ಒಟ್ಟು   2.54 ಕೋಟಿ ಮಹಿಳೆಯರು ಸಂಚಾರ ಮಾಡಿದ್ದರು. ಹಾಗೂ ಜೂನ್ 11 ರಿಂದ ಜುಲೈ 10 ರವರೆಗೆ ಒಂದು ತಿಂಗಳ ಅವಧಿಯಲ್ಲಿ 4.02 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದರು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...